ರಾಯಚೂರು | ಕೃತಕ ಆಮ್ಲಜನಕ ನೀಡಿ ಹಾವಿನ ರಕ್ಷಣೆ

Date:

ಮೂರ್ಛೆ ಹೋಗಿದ್ದ ನಾಗರಹಾವಿಗೆ ಕೃತಕ ಆಮ್ಲಜನಕ ಪೂರೈಸಿ, ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿರುವ ಅಪರೂಪದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಪಾಮನಕಲ್ಲೂರು ಕ್ರಾಸ್ ಬಳಿ ಕಾರೊಂದರಲ್ಲಿ ನಾಗರ ಹಾವು ಪತ್ತೆಯಾಗಿತ್ತು. ಹಾವನ್ನು ಹೊರ ತೆಗೆಯಲು ಸಾಧ್ಯವಾಗಿರಲಿಲ್ಲ. ಹಟ್ಟಿ ಚಿನ್ನದಗಣಿ ಬಳಿಯಿದ್ದ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ. ರವೀಂದ್ರನಾಥ್ ಅವರು ಹಾವು ಫಿನಾಯಿಲ್ ಸಿಂಪಡನೆ ಮಾಡಿದ್ದರು. ಅವರ ವಾಸನೆಯಿಂದ ನಾಗರಹಾವು ಮೂರ್ಛೆ ತಪ್ಪಿತ್ತು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಬಳಿಕ, ವೈದ್ಯಾಧಿಕಾರಿ ರವೀಂದ್ರನಾಥ್ ಮತ್ತು ಉರಗತಜ್ಞ ಖಾಲೀದ್ ಚಾವೂಸ್ ಅವರು ಹಾವನ್ನು ಆಸ್ಪತ್ರೆಗೆ ತಂದು ಕೃತಕ ಆಮ್ಲಜನಕ ಪೂರೈಸಿದ್ದಾರೆ. ಇದರಿಂದ ಮೂರ್ಛೆ ಹೋಗಿದ್ದ ನಾಗಹಾವು ಬದುಕುಳಿದಿದೆ.

“ಮೂರ್ಛೆ ಹೋಗಿದ್ದ ಹಾವನ್ನು ಸೆರೆ ಹಿಡಿದು, ಪೈಪ್ ಸಹಾಯದಿಂದ ಹಾವಿಗೆ ಗಾಳಿ ಊದಲಾಯಿತು. ಆದರೆ, ಹಾವು ಸ್ಪಂದಿಸಲಿಲ್ಲ. ಬಳಿಕ, ಆಸ್ಪತ್ರೆಗೆ ತಂದು ಕೃತಕ ಆಮ್ಲಜನಕ ಪೂರೈಸಲಾಯಿತು. ಈಗ ಹಾವು ಚೇತರಿಸಿಕೊಂಡಿದೆ, ನಂತರ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ” ಎಂದು ಖಾಲೀದ್ ಚಾವೂಸ್ ವಿವರಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕುಂದಾಪುರ ಕೋಡಿ ಹಿನ್ನೀರು ಪ್ರದೇಶದಲ್ಲಿ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಕಾಂಡ್ಲಾ ವನ ವೀಕ್ಷಣೆ

ಕುಂದಾಪುರ ನಗರದ ಕೋಡಿ-ಕುಂದಾಪುರ ಸೇತುವೆ ಬಳಿಯ ಕೋಡಿ ಹಿನ್ನೀರು ಪ್ರದೇಶಕ್ಕೆ ರವಿವಾರ...

ಉಡುಪಿ | ಬೆಂಗಳೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬೈಂದೂರಿನ ಯುವ ಇಂಜಿನಿಯರ್ ಅಪಘಾತದಲ್ಲಿ ಸಾವು

ಉದ್ಯೋಗದ ನಿಮಿತ್ತ ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಬೈಂದೂರು ತಾಲೂಕಿನ ನಾಡ-ಪಡುಕೋಣೆ ಸಮೀಪದ...

ಹಾವೇರಿ ವಿವಿ ಹಾಸ್ಟೆಲ್‌, ಅಪರಿಚಿತನ ಅನುಚಿತ ವರ್ತನೆ: ವಿದ್ಯಾರ್ಥಿನಿಯರು ಪ್ರತಿಭಟನೆ

ಹಾವೇರಿ ವಿವಿ ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅಪರಿಚಿತನ ಅನುಚಿತ ವರ್ತನೆಯಿಂದ ವಿದ್ಯಾರ್ಥಿನಿಯರು...

ವಿಜಯಪುರ | ನ.19ರಿಂದ ಲೋಕಾಯುಕ್ತ, ಉಪಲೋಕಾಯುಕ್ತರಿಂದ ಜಿಲ್ಲಾ ಪ್ರವಾಸ

ಕರ್ನಾಟಕ ಲೋಕಾಯುಕ್ತದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ನವೆಂಬರ್ 19ರಿಂದ...