ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

Date:

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ ನಾಗರಿಕ ವೇದಿಕೆ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಈ ವೇಳೆ ಪ್ರತಿಭಟನಾಕಾರರು, ಚುನಾವಣಾ ಆಯೋಗವು ಕೇಂದ್ರದ ಬಿಜೆಪಿ ಸರ್ಕಾರದ ಕೈಗೊಂಬೆಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು. ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ಮೂಲಕ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದ್ದು, ಇದರಿಂದ ಅವರ ಮತದಾನದ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಜ್ಞಾನೇಶ ಕುಮಾರ ಆಯುಕ್ತರಾಗಿ ಕಾರ್ಯನಿರ್ವಹಿಸದೇ ಬಿಜೆಪಿ ಏಜೆಂಟರಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಅರ್ಹರನ್ನು ಮತದಾರರ ಪಟ್ಟಿಯಿಂದ ದುರುದ್ದೇಶದಿಂದ ಕಡಿತಗೊಳಿಸಿರುವದು ಬಹಿರಂಗವಾಗಿದೆ. ಕೂಡಲೇ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರರನ್ನು ವಜಾಗೊಳಿಸಿ ಬಂಧಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ ಶರಣಕುಮಾರ ಮುದ್ದಂಗುಡಿ ಎಸ್‌ಐಆರ್ ಅಕ್ರಮವಾಗಿ ನಡೆಸಿರುವುದು ಬಹಿರಂಗವಾಗಿದೆ. ಕೂಡಲೇ ಎಸ್‌ಐಆರ್ ರದ್ದುಗೊಳಿಸಬೇಕು. ಅರ್ಹ ಮತದಾರರನ್ನು ದುರುದ್ದೇಶ ಪೂರಕವಾಗಿ, ಒಂದು ಧರ್ಮದವರನ್ನು ಗುರಿ ಮಾಡಿ ನಡೆಸಿದ್ದು ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿಯಾಗಿದೆ. ಸಂವಿಧಾನ ಬದ್ದ ಹಕ್ಕು ಕಸಿಯಲು ನಡೆಯುತ್ತಿರುವ ರಾಜಕೀಯ ಷಡ್ಯಂತ್ರದ ವಿರುದ್ದ ಜನತೆ ಆಂದೋಲನ ನಡೆಸಬೇಕೆಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರುಗಳಾದ ಜಾನವೆಸ್ಲಿ, ಮಾರೆಪ್ಪ ಹರವಿ, ಮಾರೆಮ್ಮ, ಆಂಜಿನೇಯ್ಯ ಕುರುಬದೊಡ್ಡಿ, ಖಲೀಲ್ ಪಾಷಾ ಸೇರಿದಂತೆ ಎಸ್‌ಡಿಪಿಐ ಹಾಗೂ ವಿವಿಧ ಸಂಘಟನೆಗಳ ಮುಖಂಡರುಗಳು ಭಾಗಿಯಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...