ರಾಯಚೂರು | ಉಪಹಾರ ತ್ಯಜಿಸಿ ಹಾಸ್ಟೆಲ್ ವಿದ್ಯಾರ್ಥಿನಿಯರ ಪ್ರತಿಭಟನೆ

Date:

Advertisements

ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ತಮ್ಮ ವಸತಿ ನಿಲಯದಲ್ಲಿ ಒಂದೂವರೆ ವರ್ಷದಿಂದ ಸಮಸ್ಯೆಗಳ ತಾಣವಾಗಿದೆ ಹಾಸ್ಟೆಲ್‌ನಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿನಿಯರು ಉಪಹಾರ ಸೇವಿಸದೆ ಪ್ರತಿಭಟನೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ನಡೆದದೆ.

ಉಪಹಾರ ತ್ಯಜಿಸಿ ಹಾಸ್ಟೆಲ್‌ನಿಂದ ಶಾಸಕರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಆದರೆ, ಶಾಸಕರು ಕ್ಷೇತ್ರದಲ್ಲಿ ಇಲ್ಲವೆಂದು ಶಾಸಕರ ಆಪ್ತಸಹಾಯಕರು ವಿದ್ಯಾರ್ಥಿಗಳಿಗೆ ಸಮಾಧಾನ ಮಾಡಲು ಯತ್ನಿಸಿದ್ದಾರೆ. ಅವರ ಮಾತಿಗೆ ವಿದ್ಯಾರ್ಥಿನಿಯರು ಮಣೆ ಹಾಕದೆ ಪ್ರತಿಭಟನೆ ಮುಂದುವರೆಸಿದ್ದಾರೆ. ಬಳಿಕ, ತಹಶೀಲ್ದಾರ್ ಸುಧಾ ಅವರು ಸ್ಥಳಕ್ಕೆ ದೌಡಾಯಿಸಿ, ವಿದ್ಯಾರ್ಥಿನಿಯರೊಂದಿಗೆ ಚರ್ಚೆ ನಡೆಸಿದ್ದಾರೆ.

ವಿದ್ಯಾರ್ಥಿನಿಯರು ಈ ಕೂಡಲೇ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಇಲ್ಲವಾದರೆ ಇಲ್ಲೇ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ಪಟ್ಟು ಹಿಡಿದು ಕುಳಿತಿದ್ದರು. ತಹಶೀಲ್ದಾರ್ ಮತ್ತು ಶಾಸಕರ ಆಪ್ತ ಸಹಾಯಕರು ಹಾಸ್ಟೆಲ್‌ಗೆ ತೆರಳಿ, ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಂಡರು.

Advertisements

ಬಳಿಕ ಪ್ರತಿಭಟನೆ ಕೈಬಿಟ್ಟ ವಿದ್ಯಾರ್ಥಿನಿಯರು, “ನಾವು ಬಡ ಕುಟುಂಬಗಳಿಗೆ ಸೇರಿದ್ದು, ಇಲ್ಲಿ ಉತ್ತಮ ಶಿಕ್ಷಣ ಪಡೆದು, ಉತ್ತಮ ಬದುಕನ್ನು ಕಟ್ಟಿಕೊಳ್ಳುವ ಕನಸನ್ನು ಹೊತ್ತು ಬಂದಿದ್ದೇವೆ. ಆದರೆ, ಇಲ್ಲಿ ನೀರಿನ ಸಮಸ್ಯೆ, ಸ್ನಾನಗೃಹದ ಸಮಸ್ಯೆ, ವಿದ್ಯುತ್, ಊಟ ಸೇರಿದಂತೆ ನಾನಾ ಸಮಸ್ಯೆಗಳು ಕಾಡುತ್ತಿವೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗ್ರಾಮವನ್ನು ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬಾರದು : ಗ್ರಾಮಸ್ಥರ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆರಿಸಬಾರದು ಎಂದು ರಾಜ್ಯ...

ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ : ನಾಲ್ಕು ಗ್ರಾಮಕ್ಕೆ ಸಂಪರ್ಕ ಕಡಿತ

ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು,...

ರಾಯಚೂರು | ನಿರಂತರ ಮಳೆ : ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ

ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ...

ರಾಯಚೂರು | ಪಾಳುಬಿದ್ದ ದಾದಿಯರ ವಸತಿ ಗೃಹಗಳು; ಸ್ಥಳೀಯ ಆಡಳಿತದ ನಿರ್ಲಕ್ಷ್ಯ ಆರೋಪ

ರಾಯಚೂರಿನ ಸಿರವಾರ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗಿರುವ ದಾದಿಯರ ವಸತಿ...

Download Eedina App Android / iOS

X