ರಾಯಚೂರು | 371(ಜೆ) ನಿಯಮಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Date:

371(ಜೆ) ನಿಯಮಗಳನ್ನು ಸಮರ್ಪಕವಾಗಿ ಜಾರಿಗೊಳಿಸುವುದು ಹಾಗೂ ಪ್ರತ್ಯೇಕ ಅನುಷ್ಠಾನ ಪ್ರಾಧಿಕಾರ ರಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಕಲ್ಯಾಣ ಕರ್ನಾಟಕ ಭಾಗದಲ್ಲಿ ದಶಕಗಳಿಂದ ಖಾಲಿ ಉಳಿದಿರುವ ಸುಮಾರು 30 ಸಾವಿರ ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳಿಗೂ ಪೂರ್ಣ ಪ್ರಮಾಣದಲ್ಲಿ ನೇಮಕಾತಿ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸರ್ಕಾರದ ಅನುಮೋದನೆ ದೊರಕುವಂತೆ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ತರಬೇಕು. ಕೆಕೆಆರ್‌ಡಿಬಿ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಹತ್ತು ವರ್ಷಗಳ ಸಮಗ್ರ ಕಾರ್ಯನೀತಿಯನ್ನು ರೂಪಿಸಬೇಕು ಎಂದು ಮನವಿ ಮಾಡಿದರು.

ಅನುದಾನ ಬಳಕೆಗೆ ಸಂಬಂಧಿಸಿದ ಕಠಿಣ ಅನುಷ್ಠಾನ ನಿಯಮಾವಳಿಗಳನ್ನು ಸರಳೀಕರಿಸಬೇಕು. ಕೆಕೆಆರ್‌ಡಿಬಿಗೆ ಕಾರ್ಯದರ್ಶಿ ಮಟ್ಟದ ಅಧಿಕಾರಿಯನ್ನು ನೇಮಿಸಿ, ಮಂಡಳಿಯು ಜನರಿಗೆ ಜವಾಬ್ದಾರಿಯುತ ಹಾಗೂ ಉತ್ತರದಾಯಿತ್ವ ಹೊಂದುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೃಷ್ಣಾ ಕೊಳ್ಳದಲ್ಲಿ ಕರ್ನಾಟಕಕ್ಕೆ ಹಂಚಿಕೆಯಾಗಿರುವ 700 ಟಿಎಂಸಿ ನೀರನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಅಗತ್ಯ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು. ಕೃಷ್ಣಾ ನದಿ ನೀರಿನ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಗತ್ಯ ಗೆಜೆಟ್ ಅಧಿಸೂಚನೆ ಹೊರಡಿಸಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.

ಕಲ್ಯಾಣ ಕರ್ನಾಟಕದ ಎಲ್ಲ ವಿಶ್ವವಿದ್ಯಾಲಯ ಗಳಿಗೆ ಅಗತ್ಯವಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಪೂರ್ಣ ಪ್ರಮಾಣದಲ್ಲಿ ನೇಮಕ ಮಾಡಬೇಕು. ಸುಸಜ್ಜಿತ ಕಟ್ಟಡಗಳು, ಪ್ರಯೋಗಾಲಯಗಳು, ಗ್ರಂಥಾಲಯಗಳು ಹಾಗೂ ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕದ ನಿರುದ್ಯೋಗಿ ವಿದ್ಯಾವಂತ ಯುವಕರಿಗಾಗಿ ವಿಶೇಷ ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ, ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು. ಈ ಭಾಗದಲ್ಲಿ ಹೈನುಗಾರಿಕೆ ಚಟುವಟಿಕೆಗಳಿಗೆ ಉತ್ತೇಜನ ನೀಡಲು ವಿಶೇಷ ಯೋಜನೆಯನ್ನು ಘೋಷಿಸಬೇಕು. ಬಳ್ಳಾರಿಯ ಜೀನ್ಸ್ ಉದ್ಯಮವನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ, ಅದನ್ನು ಇಡೀ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಸ್ತರಿಸಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೆಡಿಕಲ್ ಅನ್‌ಫಿಟ್ ಯೋಜನೆ ಜಾರಿಗೆ ಗಣಿ ಸಚಿವರ ಜೊತೆ ಚರ್ಚೆ: ಮುನಿಯಪ್ಪ

ಪ್ರತಿಭಟನೆಯಲ್ಲಿ ಹೋರಾಟ ಸಮಿತಿ ಮುಖಂಡರುಗಳಾದ ಚಾಮರಸ ಮಾಲಿ ಪಾಟೀಲ್, ಬಿ. ಬಸವರಾಜ, ಆರ್. ಬಸವರಾಜ, ಬೂದಯ್ಯಸ್ವಾಮಿ, ಶಾರದಾ ಹುಲಿನಾಯಕ, ಚಂದ್ರಶೇಖರ್ ನೆಲಹಾಳ, ಡಿ.ಎಸ್. ಶರಣಬಸವ, ಕರಿಯಪ್ಪ ಅಚ್ಚೊಳ್ಳಿ, ಅಯ್ಯಣ್ಣ ಮಹಾಮನಿ, ರಂಗನಾಥ, ಕೆ.ಜಿ. ವೀರೇಶ, ಚನ್ನಬಸವ ಜಾನೇಕಲ್, ಹೆಚ್. ಪದ್ಮಾ, ವರಲಕ್ಷ್ಮೀ, ಪಂಪ ನಾಗೋಲಿ, ಎನ್.ಎಸ್. ವೀರೇಶ, ಮಹೇಶ ಚೀಕಲಪರ್ಚಿ, ಜಿ. ಅಮರೇಶ, ಪ್ರಭಾಕರ ಇಂಗಳದಾಳ, ವಿದ್ಯಾ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ |ಬೀಳಗಿಯಲ್ಲಿ ಜಾನಪದ ಸಂಭ್ರಮ: 20 ಚೌಡಕಿ ಗಾಯನ ತಂಡಗಳಿಂದ ಸಾಂಪ್ರದಾಯಿಕ ಹಾಡುಗಳ ಅನಾವರಣ

ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ಜಾನಪದ ಪರಿಷತ್ ಸಹಯೋಗದಲ್ಲಿ, ಲಿಂಗೈಕ್ಯ...

ವಿಜಯಪುರ | ಜಿಪಂನಿಂದ ಉಚಿತ ಕಂಪ್ಯೂಟರ್ ತರಬೇತಿ: ಅಭ್ಯರ್ಥಿಗಳಿಗೆ ₹1,500 ಸಹಾಯಧನ

ನಿರುದ್ಯೋಗಿ ಯುವಜನರನ್ನು ಸ್ವಯಂ ಉದ್ಯೋಗದತ್ತ ಪ್ರೇರೇಪಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ...

ಯಾದಗಿರಿ | ಜಮೀನು ವಿವಾದ; ಮುಸ್ಲಿಂ ಮುಖಂಡರಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಿದ ಸ್ಥಳವು ಮುಸ್ಲಿಂ ಸಮುದಾಯದ ಈದ್ದಾ ಜಾಗಕ್ಕೆ...

ಯಾದಗಿರಿ | ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್‌ ವಿರುದ್ಧ ಸಮಾನ ಮನಸ್ಕರ ವೇದಿಕೆ ಧರಣಿ

ಠೇವಣಿದಾರರ ಹಣ ಮರುಪಾವತಿಯಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹಾಗೂ ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ...