ರಾಯಚೂರು | ಗ್ರಾಮ ಪಂಚಾಯತ್ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

Date:

ಗ್ರಾಮ ಪಂಚಾಯತ ನೌಕರರ ವೇತನ ಹೆಚ್ಚಳ, ಇಡಿಗಂಟು ಸೇರಿ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

2025ರ ಡಿ.21 ರಂದು ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಅಧಿಕಾರಿಗಳು ಬಂದು ಪಂಚಾಯತ ನೌಕರರ ಬೇಡಿಕೆಗಳ ಕುರಿತು ಮಾತನಾಡಿ, ಡಿ.22ರಂದು ಸಂಘಟನೆಯ ಮುಖಂಡರನ್ನು ಸಭೆ ಕರೆದು ಮೂರು ಗಂಟೆಗಳ ಕಾಲ ಸುದೀರ್ಘವಾಗಿ ಬೇಡಿಕೆಗಳ ಕುರಿತು ಚರ್ಚೆ ನಡೆಸಿ ಇದರಲ್ಲಿ ಸರ್ಕಾರದ ಹಂತದಲ್ಲಿರುವ (ಪಾಲಿಸಿ ಮ್ಯಾಟರ್) ಬೇಡಿಕೆಗಳನ್ನು ಸಚಿವರ ಜೊತೆ ಸಭೆಯನ್ನು ನಡೆಸಿ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಉಳಿದ ನಮ್ಮ ಹಂತದಲ್ಲಿರುವ ಪ್ರಮುಖ ಬೇಡಿಕೆಗಳನ್ನು ಕೂಡಲೆ ಇತ್ಯರ್ಥಪಡಿಸಿ ಆದೇಶವನ್ನು ನೀಡಲಾಗುವುದೆಂದು ಚರ್ಚೆ ಮಾಡಿ ನಂತರ ಧರಣಿ ನಿರತ ಸ್ಥಳಕ್ಕೆ ಬಂದು ಭರವಸೆಯನ್ನು ಕೊಟ್ಟಿದ್ದರಿಂದ ಆ ಭರವಸೆ ಮೇರೆಗೆ ನಮ್ಮ ಧರಣಿ ವಾಪಸ್ ಪಡೆದುಕೊಂಡಿದ್ದು ಆದರೆ ಈವರೆಗೆ ಪ್ರಮುಖ ಬೇಡಿಕೆಗಳು ಈಡೇರಿಲ್ಲ ಎಂದರು.

ಭರವಸೆ ಕೊಟ್ಟು 3 ತಿಂಗಳು ಗತಿಸಿದರೂ ಈ 3 ತಿಂಗಳಲ್ಲಿ 2-3 ಬಾರಿ ಮಾತುಕತೆ ನಡೆಸಿದ್ದರೂ 19 ಬೇಡಿಕೆಗಳಲ್ಲಿ ಸರ್ಕಾರದ ಹಂತದಲ್ಲಿರುವ ಬೇಡಿಕೆಗಳನ್ನು ಹೊರತುಪಡಿಸಿ ಪ್ರಮುಖವಾಗಿರುವ 7 ಬೇಡಿಕೆಗಳನ್ನು ಈಡೇರಿಸಿ ಆದೇಶ ನೀಡುವುದಾಗಿ ತಾವು ನೀಡಿದ ಭರವಸೆ ಸಾಕಾರವಾಗಿಲ್ಲ. ಇಲ್ಲಿಯವರೆಗೆ ಒಂದೇ ಒಂದು ಬೇಡಿಕೆ ಈಡೇರಿಸದೇ ಇರುವುದು ವಿಷಾದನೀಯ ಎಂದರು.

ಕೂಡಲೇ ರೂ.5000 ಎಲ್ಲ ನೌಕರರಿಗೆ ವೇತನ ಹೆಚ್ಚಳ ಮಾಡಿ ಇಲಾಖೆಯಿಂದ ಆದೇಶ ಹೊರಡಿಸಬೇಕು. ನೌಕರರು ನಿವೃತ್ತಿ/ನಿಧನ ಹೊಂದಿದರೆ ಅವರಿಗೆ ಇಡಗಂಟು ರೂ.6 ಲಕ್ಷ ನೀಡಬೇಕು. ಸೇವಾ ಹಿರಿತನದ ಆಧಾರದಲ್ಲಿ ವೇತನ ನೀಡಬೇಕು. ತಾವು ಭರವಸೆ ನೀಡಿದ ಭಾಗವಾಗಿ ಸ್ವಚ್ಛವಾಹಿನಿ ನೌಕರರ ಸಭೆಯನ್ನು ಮಾಡಿ ಅವರ ಪ್ರಮುಖ ಬೇಡಿಕೆಗಳನ್ನು ಇತ್ಯರ್ಥಪಡಿಸಬೇಕು. ಪ್ರತಿಯೊಂದು ಪಂಚಾಯತಿಗೆ ದ್ವೀತಿಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳನ್ನು ತುಂಬುವುದು. ಕಳೆದ 18-20 ವರ್ಷಗಳಿಂದ ಡಾಟಾ ಎಂಟ್ರಿ ಆಪರೇಟರ್‌ಗಳಾಗಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಅನುಮೋದನೆ ನೀಡಬೇಕು. 2ನೇ ಡಾಟಾ ಎಂಟ್ರಿ ಆಪರೇಟರ್ ನೇಮಕಾತಿ ಆಗಬೇಕು. ಈಗಾಗಲೆ ಆರೋಗ್ಯದ ಕುರಿತು ಸಿಬ್ಬಂದಿಗಳ ಮಾಹಿತಿಗಾಗಿ ಫಾರ್ಮೆಟ್‌ನಲ್ಲಿ ಗುತ್ತಿಗೆ, ಹೊರಗುತ್ತಿಗೆ, ಗೌರವಧನದ, ಕಾರ್ಮಿಕರ ಮಾಹಿತಿ ನೀಡಲು ತಿಳಿಸಲಾಗಿದೆ. ಆದರೆ ಈ ಫಾರ್ಮೆಟ್‌ನಲ್ಲಿ ಪಂಚಾಯತ ನೌಕರರೆಂದು ಮಾಹಿತಿ ಇಲ್ಲಾ ಇದನ್ನು ಸರಿಪಡಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದರು.

ಒಂದು ವೇಳೆ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದೆ ನಮ್ಮ ಹೋರಾಟ ಬೃಹತ್ ಪ್ರಮಾಣದಲ್ಲಿ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಈ ಹೋರಾಟದಲ್ಲಿ ಏನಾದರೂ ಅನಾಹುತಗಳಾದರೆ ಇದಕ್ಕೆ ನೇರವಾಗಿ ಆರ್‌ಡಿಪಿಆರ್ ಇಲಾಖೆಯೆ ಹೊಣೆ ಆಗುತ್ತದೆ. ದಯವಿಟ್ಟು ಇದಕ್ಕೆ ಆಸ್ಪದ ನೀಡದೇ ಕೂಡಲೆ ತಾವೇ ಒಪ್ಪಿಕೊಂಡ ಈ ಕೆಳಗಿನ ಪ್ರಮುಖ ಬೇಡಿಕೆಗಳನ್ನು ಈಡೇರಿಸಿ ಆದೇಶ ಹೊರಡಿಸಬೇಕೆಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಾಲ ಬಾಧೆಯಿಂದ ಖಿನ್ನತೆಗೊಳಗಾದ ವ್ಯಕ್ತಿ ಆತ್ಮಹತ್ಯೆ

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಮನ್ಸಲಾಪೂರು, ಕಾರ್ಯದರ್ಶಿ ಅಂಜಿನೆಯ್ಯ ಮಾಡಿಗೇರಿ, ಖಜಾಂಚಿ ಪಾಂಡುರಂಗ ನಾಯಕ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಸ್.ಶರಣಬಸವ, ಗಿರಿಯಪ್ಪ ಪೂಜಾರಿ ಮುಖಂಡರಾದ ಸುರೇಶ್ ದೇವಸೂಗೂರು, ವೀರೇಶ್, ಪಂಚಯ್ಯ ಕರಿಗಾರ, ಆಂಬಣ್ಣನಾಯಕ, ಚಂದು ಮಾನವಿ, ಸುಭಾನ್ ಸಾಬ್, ಶಿವಪ್ಪ ನಾಯಕ, ವೆಂಕಪ್ಪ, ಶರಣಬಸವ, ಷಣ್ಮಖಪ್ಪ ನಾಯಕ, ಶಿವರಾಜ ಸ್ವಾಮಿ, ಈರಪ್ಪ, ಹೊನ್ನಪ್ಪ ನಾಯಕ, ಶರಣಬಸವ, ಬಸವರಾಜ ಗೌಡ, ಸಗರಪ್ಪ, ರಂಜಾನಸಾಬ್, ಶಿವರಾಜ ನಾಯಕ, ಶರಣಬಸವ ಸೇರಿ ಅನೇಕರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...