ರಾಯಚೂರು | ಹಟ್ಟಿ ಪಟ್ಟಣದ ಕಾಕಾನಗರ ವಾರ್ಡ್ ಅಭಿವೃದ್ಧಿಗೆ ಆಗ್ರಹಿಸಿ ಪಂ.ಪಂಚಾಯತ್ ಮುಂದೆ ಪ್ರತಿಭಟನೆ

Date:

ಹಟ್ಟಿ ಪಟ್ಟಣದ ಕಾಕಾನಗರ ವಾರ್ಡ್‌ನ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಪಟ್ಟಣ ಪಂಚಾಯತ ಮುಂದೆ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿ ಬಳಿಕ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಜಗನಾಥ್ ದೇಸಾಯಿ ಅವರಿಗೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಹೈಟೆಕ್ ಶೌಚಾಲಯವನ್ನು ಸಾರ್ವಜನಿಕ ಬಳಕೆಗೆ ಯೋಗ್ಯವಾಗಿಸುವುದು, ವಾರ್ಡ್‌ನ ರಸ್ತೆಗಳು ಹಾಗೂ ಚರಂಡಿಗಳನ್ನು ನಿರ್ಮಿಸುವುದು, ನಿಯಮಿತವಾಗಿ ಕುಡಿಯುವ ನೀರು ಪೂರೈಸುವುದು, ಬಳಕೆಯ ನೀರಿಗಾಗಿ ಹೊಸ ಬೋರ್‌ವೆಲ್‌ಗಳನ್ನು ಕೊರೆಸುವುದು, ಎರಡು ಕಡೆಗಳಲ್ಲಿ ದೋಭಿ ಘಾಟ್ ನಿರ್ಮಿಸುವುದು ಸೇರಿ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಲು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಸಿಪಿಐಎಂ ತಾಲೂಕು ಕಾರ್ಯದರ್ಶಿ ರಮೇಶ ವೀರಾಪೂರು, “ಹಟ್ಟಿ ಪಟ್ಟಣ ಪಂಚಾಯ್ತಿ ಮಟಕಾ, ಇಸ್ಪೀಟ್ ಹಾಗೂ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ, ಕಳಪೆ ಕಾಂಟ್ರ್ಯಾಕ್ಟರ್ ಗಳ ಕಪಿಮುಷ್ಠಿಯಲ್ಲಿ ಸಿಲುಕಿ ನಲುಗುತ್ತಿದೆ. ಬಂಡವಾಳಶಾಹಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಅಧಿಕಾರಕ್ಕಾಗಿ ಇಂತಹ ದಂಧೆಕೋರರಿಗೆ ಸ್ಥಳೀಯ ಮಟ್ಟದಲ್ಲಿ ಮಣೆ ಹಾಕುತ್ತಿವೆ. ಇದರಿಂದ ಪಟ್ಟಣದ ನಿವಾಸಿಗಳು, ಬಡಜನರು ಹಾಗೂ ಜನವಸತಿ ಪ್ರದೇಶಗಳ ಮೂಲಭೂತ ಸಮಸ್ಯೆಗಳ ಬಗ್ಗೆ ಆಡಳಿತ ತಲೆಕೆಡಿಸಿಕೊಳ್ಳುತ್ತಿಲ್ಲ. ಭ್ರಷ್ಟ ಶಕ್ತಿಗಳನ್ನು ತಿರಸ್ಕರಿಸಿ ಜನಪರ ಆಡಳಿತಕ್ಕಾಗಿ ಸಿಪಿಐ(ಎಂ) ಪಕ್ಷವನ್ನು ಬಲಪಡಿಸಿದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯ” ಎಂದು ಹೇಳಿದರು.

ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ತಾಲೂಕು ಅಧ್ಯಕ್ಷೆ ವನಜಾಕ್ಷಿ ಮಾತನಾಡಿ, ಕಾಕಾನಗರ ವಾರ್ಡ್‌ನ ಮಹಿಳೆಯರು ಹಾಗೂ ಸಾರ್ವಜನಿಕರು ಕುಡಿಯುವ ನೀರು, ರಸ್ತೆ, ಚರಂಡಿ, ಶೌಚಾಲಯ ಸೇರಿದಂತೆ ಮೂಲಸೌಲಭ್ಯಗಳ ಕೊರತೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಕೂಡಲೇ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದೇವದುರ್ಗ | ಪೋಸ್ಟರ್ ಅಳವಡಿಸುವ ವೇಳೆ ಕಟ್ಟಡದ ಮೇಲ್ಚಾವಣಿ ಕುಸಿತ – ಮೂವರು ಸಾವು, 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಪ್ರತಿಭಟನೆಯಲ್ಲಿ ಪಕ್ಷದ ಸದಸ್ಯರಾದ ಶಾಂತಕುಮಾರಿ, ಸಾಹೀರಾ ಬಾನು, ರಿಯಾಜ್ ಖುರೇಷಿ, ಹಾಜಿಬಾಬು ಕಟ್ಟಿಮನಿ, ಶಂಶುದ್ದೀನ್ ಔಟಿ, ರಮೇಶ್ ಜೆ., ಮೌನೇಶ ಕಡ್ಡೋಣಿ, ಅಲ್ಲಾಭಕ್ಷ, ಮಹಾಂತೇಶ್ ಬುದ್ದಿನ್ನಿ, ದುರುಗಮ್ಮ, ಇಮ್ರಾನ್, ಖಾಜಾ ಮೊಯಿನುದ್ದೀನ್, ಅಂಬಮ್ಮ, ನಿಂಗಪ್ಪ, ದಾವೂದ್, ಶ್ರೀಧರ್, ಈರಮ್ಮ ಸೇರಿದಂತೆ ವಾರ್ಡ್‌ನ ಸಾರ್ವಜನಿಕರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...