ರಾಯಚೂರು | ಸೋನಮ್ ವಾಂಗ್‌ಚುಕ್ ಬೆಂಬಲಿಸಿ ಪ್ರತಿಭಟನೆ; ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

Date:

ದೆಹಲಿಯ ಜಂತರ್-ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದಿರುವುದನ್ನು ಖಂಡಿಸಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ವಿದ್ಯಾರ್ಥಿ-ಯುವಜನ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ನಗರದ ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಬಸ್ ನಿಲ್ದಾಣ, ನಗರಸಭೆ ಮಾರ್ಗವಾಗಿ ಟಿಪ್ಪು ಸುಲ್ತಾನ್ ಉದ್ಯಾನವನದವರೆಗೆ ಸಾಗಿತು. ಬಳಿಕ ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರಾರು ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಘೋಷಣೆಗಳನ್ನು ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ಜನಶಕ್ತಿ ಸಂಘಟನೆಯ ಮಾರೆಪ್ಪ ಹರವಿ ಮಾತನಾಡಿ, ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಹಲವು ಬಾರಿ ಸೋರಿಕೆಯಾಗಿರುವುದು ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದರು. ವಿವಿಧ ಸಂಘಟನೆಗಳು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪರೀಕ್ಷಾ ಅಕ್ರಮಗಳು ಪದೇ ಪದೇ ಮರುಕಳಿಸುತ್ತಿದ್ದು, ಇದರಿಂದ ಅನೇಕ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ ಎಂದು ಹೇಳಿದರು.

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಪರೀಕ್ಷಾ ಅಕ್ರಮಗಳ ಪರಿಣಾಮವಾಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ಹಾಗೂ ಅಗತ್ಯ ಬೆಂಬಲವನ್ನು ಕೇಂದ್ರ ಸರ್ಕಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಜಂತರ್-ಮಂತರ್‌ನಲ್ಲಿ ಸೋನಮ್ ವಾಂಗ್‌ಚುಕ್ ಹಾಗೂ ವಿದ್ಯಾರ್ಥಿಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹದ ಕುರಿತು ಕೇಂದ್ರ ಸರ್ಕಾರ ಯಾವುದೇ ಸ್ಪಂದನೆ ನೀಡಿಲ್ಲ. ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸುವ ಬದಲು ಅವರನ್ನು ಬಲವಂತವಾಗಿ ವಶಕ್ಕೆ ಪಡೆಯುವ ಕ್ರಮ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಂಧುತ್ವದ ಭಾವನೆ ಬೆಳೆಸಿದರೆ ದೇಶದಲ್ಲಿ ಸಹೋದರತ್ವ ಅರಳಲಿದೆ: ಉದಯ ಸಾಹುಕಾರ

ಈ ವೇಳೆ ಕುಮಾರ್ ಸಮತಳ, ವಿಶ್ವನಾಥ ಬಲ್ಲಿದೇವ, ಶರಣು ಮುದ್ದಮಗುಡ್ಡಿ, ಬಾಬಾ, ಫೈಸಲ್ ಸೇರಿ ಕಾಲೇಜು ವಿದ್ಯಾರ್ಥಿಗಳು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...