ರಾಯಚೂರು | ವಿದ್ಯುತ್ ಸರಬರಾಜು ಕೇಂದ್ರ ಸ್ಥಾಪನೆ ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

Date:

ದೇವದುರ್ಗ ತಾಲ್ಲೂಕು ಜಾಲಹಳ್ಳಿ ಪಟ್ಟಣದಲ್ಲಿ ವಿದ್ಯುತ್ ಸರಬರಾಜು ಕೇಂದ್ರ ಸ್ಥಾಪನೆ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಲ್ಲಿ ಆಡಳಿತ ವರ್ಗ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತೋರಿರುವ ನಿರ್ಲಕ್ಷ್ಯವನ್ನು ಖಂಡಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ) ಗ್ರಾಮ ಘಟಕವು ಜುಲೈ 20ರಂದು ಅಂಬೇಡ್ಕರ್ ವೃತ್ತದ ಬಳಿ ರಾಜ್ಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆಂದು ಮುಖಂಡ ರಾಜು ಹೇಳಿದರು.

- Advertisement -

ಕಳೆದ ತಿಂಗಳ 3ರಿಂದ 16ರವರೆಗೆ ಡಿವೈಎಫ್ಐ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ವಿವಿಧ ಜನಪರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸತತ 13 ದಿನಗಳ ಕಾಲ ಶಾಂತಿಯುತ ಹೋರಾಟ ನಡೆಸಿದರು ಅಧಿಕಾರಿಗಳು ಸ್ಪಂದನೆ ನೀಡಿಲ್ಲ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಪ್ರತಿಭಟನೆಯ ಬೇಡಿಕೆಗಳಲ್ಲಿ, ಅಂಬೇಡ್ಕರ್ ವೃತ್ತದಿಂದ ಶ್ರೀ ಲಕ್ಷ್ಮೀ ರಂಗನಾಥ ದೇವಸ್ಥಾನದವರೆಗೆ ನಿರ್ಮಿಸಲಾದ ಸಿಸಿ ರಸ್ತೆ ಅತ್ಯಂತ ಕಳಪೆ ಗುಣಮಟ್ಟ ಹಾಗೂ ಬಳ್ಳಯ್ಯನ ಕಟ್ಟೆಯಿಂದ ಹಟ್ಟಿ ಮುಖ್ಯ ರಸ್ತೆಯವರೆಗೆ ನಿರ್ಮಿಸಬೇಕಿದ್ದ ಹೊಸ ಸಿಸಿ ರಸ್ತೆ ಕಾಮಗಾರಿಯನ್ನು ಜೂನ್ 30ರೊಳಗೆ ಕೈಗೆತ್ತಿಕೊಂಡು ಎರಡೂ ಕಾಮಗಾರಿಗಳನ್ನು ಒಂದು ವಾರದೊಳಗೆ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದರು.

ಆದರೆ, ಅಧಿಕಾರಿಗಳು ನೀಡಿದ್ದ ಲಿಖಿತ ಭರವಸೆಯಂತೆ ಇದುವರೆಗೆ ಯಾವುದೇ ಕಾಮಗಾರಿ ಆರಂಭವಾಗಿಲ್ಲ. ಕಾಮಗಾರಿ ಪೂರ್ಣಗೊಳ್ಳುವುದು ಇರಲಿ, ಆರಂಭಕ್ಕೂ ಕ್ರಮ ಕೈಗೊಳ್ಳದಿರುವುದು ಆಡಳಿತದ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ ಎಂದು ಡಿವೈಎಫ್ಐ ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ವಿಧಾನಸಭೆ ಚುನಾವಣೆ-2028: ಮಾನ್ವಿ–ದೇವದುರ್ಗದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಕದನ, ಕಾಂಗ್ರೆಸ್‌ಗೆ ಲಾಭವೇ?

12 ವರ್ಷಗಳಿಂದ ಪೂರ್ಣಗೊಳ್ಳದೆ ಪಾಳು ಬಿದ್ದಿರುವ ವಾಲ್ಮೀಕಿ ಭವನ ಕಟ್ಟಡವನ್ನು ಪೂರ್ಣಗೊಳಿಸುವುದು, ಗ್ರಾಮದಲ್ಲಿ 110 ಕೆವಿ ವಿದ್ಯುತ್ ಸರಬರಾಜು ಕೇಂದ್ರ ಸ್ಥಾಪನೆ, ಭಗತ್ ಸಿಂಗ್ ಬಡಾವಣೆಗೆ ಸಮರ್ಪಕ ವಿದ್ಯುತ್ ಪೂರೈಕೆ, ಸಂತೆ ಮೈದಾನದಲ್ಲಿ ನಿರ್ಮಿಸಲಾದ ಅಕ್ರಮ ಕಟ್ಟಡಗಳ ತೆರವು ಹಾಗೂ ಲೋಕೋಪಯೋಗಿ ಇಲಾಖೆ (PWD) ನಿರ್ಮಿಸಿರುವ ಕಳಪೆ ರಸ್ತೆಯ ನವೀಕರಣ ಸೇರಿದಂತೆ ವಿವಿಧ ಜನಪರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜುಲೈ 20 ಅಂಬೇಡ್ಕರ್ ವೃತ್ತದ ಬಳಿ ರಾಜ್ಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಡಿವೈಎಫ್ಐ ಮುಖಂಡ ರಾಜು ನಾಯಕ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...