ರಾಯಚೂರು | ದೇವದುರ್ಗ ಬಸ್ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಪಿಎಸ್‌ಆರ್‌ ಆಗ್ರಹ

Date:

ದೇವದುರ್ಗ ಪಟ್ಟಣದ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡುವುದು, ಶೌಚಾಲಯದ ನಿರ್ವಹಣೆ ಸುಧಾರಿಸುವುದು ಹಾಗೂ ಪ್ರಯಾಣಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಪಿಎಸ್‌ಆರ್‌ ಮಾನವ ಹಕ್ಕುಗಳ ರಕ್ಷಣಾ ಪರಿಷತ್ತಿನ ಭ್ರಷ್ಟಾಚಾರ ನಿಗ್ರಹ ವಿಭಾಗದ ಪದಾಧಿಕಾರಿಗಳು ಬುಧವಾರ ಸಾರಿಗೆ ಘಟಕ ವ್ಯವಸ್ಥಾಪಕ ರಾಜಶೇಖರ್ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಬಸ್ ನಿಲ್ದಾಣದಲ್ಲಿ ಸಮರ್ಪಕ ಸ್ವಚ್ಛತೆ ಇಲ್ಲದಿರುವುದರಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಶೌಚಾಲಯಗಳು ಸರಿಯಾಗಿ ನಿರ್ವಹಣೆಯಾಗದೆ ದುರ್ನಾತ ಬೀರುತ್ತಿದ್ದು, ನಿಲ್ದಾಣದಲ್ಲಿ ಕುಳಿತುಕೊಳ್ಳಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಂಘಟನೆಯ ಪದಾಧಿಕಾರಿಗಳು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಶೌಚಾಲಯ ಬಳಸುವ ಪ್ರಯಾಣಿಕರಿಂದ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ನಿರ್ವಹಣಾ ಸಿಬ್ಬಂದಿ ಪ್ರಯಾಣಿಕರೊಂದಿಗೆ ಸರಿಯಾಗಿ ವರ್ತಿಸುತ್ತಿಲ್ಲ. ಕೆಲ ಮಹಿಳಾ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆಗಳೂ ನಡೆದಿವೆ ಎಂದು ಆರೋಪಿಸಿದ ಅವರು, ಸಂಬಂಧಪಟ್ಟ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಬಸ್ ನಿಲ್ದಾಣದ ಒಳಭಾಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿದ್ದಿರುವ ಕಸವನ್ನು ಸಮರ್ಪಕವಾಗಿ ತೆರವುಗೊಳಿಸಬೇಕು. ಶೌಚಾಲಯ ನಿರ್ವಹಣೆಯ ಗುತ್ತಿಗೆ ಪಡೆದವರು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಬೇಕು. ಪ್ರಯಾಣಿಕರಿಂದ ನಿಗದಿತ ಶುಲ್ಕವನ್ನಷ್ಟೇ ಪಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದರು.

ಈ ಹಿಂದೆ ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ಸಮಸ್ಯೆಗಳನ್ನು ತಂದಿದ್ದರೂ ಸೂಕ್ತ ಪರಿಹಾರ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಂಘಟನೆಯ ಪದಾಧಿಕಾರಿಗಳು, ಒಂದು ವಾರದೊಳಗೆ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಡಿಪೋ ವ್ಯವಸ್ಥಾಪಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಕೌಸರ್, ಮಹೆಬೂಬ್, ಮಹಾದೇವಪ್ಪ, ರಂಗಸ್ವಾಮಿ, ಮೊಹಮ್ಮದ್ ರಫೀ ಸೇರಿದಂತೆ ಸಂಘಟನೆಯ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ...

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...