ರಾಯಚೂರು | ಹಿರಿಯ ಸಾಹಿತಿ ವೀರಹನುಮಾನ, ಹಗಲುವೇಷ ಕಲಾವಿದ ಈರಣ್ಣಗೆ ರಾಜ್ಯೋತ್ಸವ ಪ್ರಶಸ್ತಿ

Date:

2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ರಾಯಚೂರು ಜಿಲ್ಲೆಯ ಹಿರಿಯ ಸಾಹಿತಿ ವೀರಹನುಮಾನ ಹಾಗೂ ಜಾನಪದ ಕ್ಷೇತ್ರದ ಹಗಲುವೇಷ ಕಲಾವಿದ ಈರಣ್ಣ ರುದ್ರಾಕ್ಷಿ ಅವರು ಆಯ್ಕೆಯಾಗಿದ್ದಾರೆ. ರಾಜ್ಯ ಸರ್ಕಾರ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ಜಿಲ್ಲೆಯ ಇಬ್ಬರು ಸಾಧಕರು ರಾಜ್ಯಮಟ್ಟದ ಗೌರವಕ್ಕೆ ಪಾತ್ರರಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.

- Advertisement -

ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ ವೀರಹನುಮಾನ ಅವರು ಸಾಹಿತ್ಯದ ಜೊತೆಗೆ ಕಲೆ, ಚಿತ್ರಕಲೆ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ. ಶಿಕ್ಷಣ ಇಲಾಖೆಯ ರಾಯಚೂರು ಡಯಟ್ ಸಂಸ್ಥೆಯ ಅಧೀಕ್ಷಕರಾಗಿ, ಸಾಕ್ಷರತಾ ಆಂದೋಲನದ ಲೇಖಕರಾಗಿ, ತರಬೇತುದಾರರಾಗಿ, ಸಂಯೋಜಕರಾಗಿ, ಉಪನ್ಯಾಸಕರಾಗಿ ಹಾಗೂ ಪಠ್ಯಪುಸ್ತಕ ರಚನಾ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಸಾಹಿತಿ ವೀರಹನುಮಾನ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ:

ರಾಯಚೂರು ಮೂಲದ ವೀರಹನುಮಾನ ಅವರು 1955ರಲ್ಲಿ ಜನಿಸಿದ್ದು, ಬಿ.ಎ. ಮತ್ತು ಕಾನೂನು ಪದವಿ ಪಡೆದಿದ್ದಾರೆ. ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. ಮನೆತನದ ವೃತ್ತಿಯಾದ ಕಟ್ಟಡ ನಿರ್ಮಾಣ ಹಾಗೂ ವಾಸ್ತುಶಿಲ್ಪದಲ್ಲಿ ಪರಿಣತಿ ಹೊಂದಿರುವ ಅವರು, ಅನೇಕ ಕಟ್ಟಡಗಳ ನಕಾಶೆ ರಚನೆ ಮತ್ತು ಪರಿವೀಕ್ಷಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಕಳೆದ 35 ವರ್ಷಗಳಿಂದ ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಒಡನಾಟ ಹೊಂದಿರುವ ಅವರು, ಎಸ್‌ಎಫ್‌ಐ, ಡಿವೈಎಫ್‌ಐ ಹಾಗೂ ಸಮುದಾಯ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಅನೇಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮದೇ ಆದ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ರಾಯಚೂರಿನ ಐತಿಹಾಸಿಕ ಕೋಟೆಗಳ ಸಂರಕ್ಷಣೆ ಮತ್ತು ಅಧ್ಯಯನ ಸಮಿತಿಯ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಒಟ್ಟು 23 ಕೃತಿಗಳನ್ನು ರಚಿಸಿರುವ ಅವರು, 11 ಸಂಪಾದಿತ ಕೃತಿಗಳನ್ನು ಹೊರತಂದಿದ್ದಾರೆ. ಎಂಟು ಕಥೆಗಳನ್ನೂ ಬರೆದಿದ್ದಾರೆ.

ಹಗಲುವೇಷ ಕಲಾವಿದನಿಗೆ ಸಂದ ಗೌರವ :

ಜಿಲ್ಲೆಯ ದೇವದುರ್ಗ ತಾಲೂಕಿನ ಜಾನಪದ ಕಲಾವಿದ ಈರಣ್ಣ ರುದ್ರಾಕ್ಷಿ ಅವರಿಗೆ ಹಗಲುವೇಷ ಕಲಾ ಕ್ಷೇತ್ರದಲ್ಲಿನ ಸಾಧನೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ನಿರಂತರ 50 ವರ್ಷಗಳ ಕಲಾಸೇವೆಗೆ ಸಂದ ಗೌರವ ಇದಾಗಿದೆ.

66 ವರ್ಷದ ಈರಣ್ಣ ರುದ್ರಾಕ್ಷಿ ಅವರು ಕೇವಲ ಐದನೇ ತರಗತಿವರೆಗೆ ಶಿಕ್ಷಣ ಪಡೆದಿದ್ದರೂ ಕಲೆಯಲ್ಲಿ ಅಸಾಧಾರಣ ಸಾಧನೆ ಮಾಡಿದ್ದಾರೆ. ಅಲೆಮಾರಿ ಸಮುದಾಯಕ್ಕೆ ಸೇರಿದ ಇವರು ಸಾಂಪ್ರದಾಯಿಕ ಹಗಲುವೇಷ ಹಾಗೂ ಜಾನಪದ ರಂಗಭೂಮಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹಳ್ಳಿಗಳು ಮತ್ತು ಪಟ್ಟಣಗಳ ಹೊರವಲಯದಲ್ಲಿ ಬಟ್ಟೆ ಹಾಗೂ ಗುಡಾರಗಳನ್ನು ಹಾಕಿಕೊಂಡು ವಾಸಿಸುತ್ತಾ ಕಲೆಯನ್ನೇ ಉಸಿರಾಗಿಸಿಕೊಂಡು ಜೀವನ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಡಿಸಿ ಶಿವಪ್ಪ ಭಜಂತ್ರಿ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

ಹಗಲುವೇಷವು ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಜನಪ್ರಿಯವಾಗಿರುವ ಸಾಂಪ್ರದಾಯಿಕ ಜನಪದ ಕಲಾಪ್ರಕಾರವಾಗಿದೆ. ಪೌರಾಣಿಕ, ಐತಿಹಾಸಿಕ ಹಾಗೂ ಸಾಮಾಜಿಕ ಕಥಾವಸ್ತುಗಳನ್ನು ವೇಷಭೂಷಣ, ಅಭಿನಯ ಮತ್ತು ಸಂಭಾಷಣೆಗಳ ಮೂಲಕ ಜನರಿಗೆ ತಲುಪಿಸುವುದು ಈ ಕಲೆಯ ವಿಶೇಷತೆ. ಗ್ರಾಮೀಣ ಪ್ರದೇಶಗಳಲ್ಲಿ ಜನಜಾಗೃತಿ ಮೂಡಿಸುವುದರ ಜೊತೆಗೆ ಮನರಂಜನೆಯ ಮಾಧ್ಯಮವಾಗಿಯೂ ಹಗಲುವೇಷ ಕಲೆ ಗುರುತಿಸಿಕೊಂಡಿದೆ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...

ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸುವುದು, ಕೋಮು...