ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಅತ್ಯಾಚಾರ ಹಾಗೂ ಕೊಲೆಗೀಡಾಗಿದ್ದಾರೆ ಎನ್ನಲಾದ ಯುವತಿಯ ಕುಟುಂಬಕ್ಕೆ ಕಾಂಗ್ರೆಸ್ ಮುಖಂಡ ರವಿ ಬೋಸರಾಜು ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಕುಟುಂಬಕ್ಕೆ ₹2 ಲಕ್ಷ ಆರ್ಥಿಕ ನೆರವು ನೀಡಿದರು.
ಬೆಂಗಳೂರಿನಲ್ಲಿ ವಿಧಾನಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಎನ್.ಎಸ್. ಬೋಸರಾಜು ಹಾಗೂ ಶಾಸಕ ಹಂಪಯ್ಯ ನಾಯಕ ಅವರು ಖುದ್ದಾಗಿ ಗ್ರಾಮಕ್ಕೆ ಬರಲು ಸಾಧ್ಯವಾಗದ ಕಾರಣ, ಅವರ ಪರವಾಗಿ ರವಿ ಬೋಸರಾಜು ಅವರು ಹೊಕ್ರಾಣಿ ಗ್ರಾಮಕ್ಕೆ ತೆರಳಿ ಸಂತ್ರಸ್ತ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಸಿರವಾರ | ಬಯಲು ಶೌಚಕ್ಕೆ ತೆರಳಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರದ ಶಂಕೆ, ಹತ್ಯೆ: ಮೂವರ ಬಂಧನ
ಯುವತಿಯ ಕುಟುಂಬಕ್ಕೆ ನ್ಯಾಯ ದೊರಕಬೇಕು ಹಾಗೂ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.




