ರಾಯಚೂರು | ಹಮಾಲಿ ಕಾರ್ಮಿಕರ ಕೂಲಿ ಹೆಚ್ಚಳಕ್ಕೆ ನಿರಾಕರಣೆ; ಅಂಗಡಿ ಪರವಾನಗಿ ರದ್ದತಿಗೆ ಆಗ್ರಹ

Date:

ಹಮಾಲಿ ಕಾರ್ಮಿಕರಿಗೆ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಕಾರ ಕೂಲಿ ದರ ಹೆಚ್ಚಳ ಮಾಡಲು ರಾಯಚೂರು ಜಿಲ್ಲೆಯ ಮುದಗಲ್‌ನ ಮದೀನಾ ಟ್ರೇಡರ್ಸ್ ಸೇರಿದಂತೆ ಹಲವು ಅಂಗಡಿಗಳು ನಿರಾಕರಿಸಿವೆ. ಆ ಅಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಬೇಕು. ಅಂಗಡಿ ಮಾಲೀಕರೊಂದಿಗೆ ಶಾಮೀಲಾಗಿರುವ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳದ ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ ಅವರನ್ನು ಸೇವೆಯಿಂದ ಅಮಾನತು ಮಾಡಬೇಕೆಂದು ಒತ್ತಾಯಿಸಿ ಸಿಐಟಿಯು – ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ ನೇತೃತ್ವದಲ್ಲಿ ಹಮಾಲಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಲಿಂಗಸಗೂರಿನಲ್ಲಿರುವ ಸಹಾಯಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಮಿಕರು, “ಮುದಗಲ್‌ನ 7 ಅಂಗಡಿಗಳಲ್ಲಿ ಕಳೆದ 25-30 ವರ್ಷಗಳಿಂದ ಹಮಾಲಿ ಕಾರ್ಮಿಕರು ಕನಿಷ್ಠ ಕೂಲಿಯನ್ನು ಪಡೆದು ದುಡಿದಿದ್ದಾರೆ. ಬೆಲೆ ಹೆಚ್ಚಳದ ಈ ಕಾಲದಲ್ಲಿ ಕೂಲಿದರ ಹೆಚ್ಚಳಕ್ಕೆ ಒತ್ತಾಯಿಸಿದ್ದ ಹಮಾಲಿ ಕಾರ್ಮಿಕರನ್ನು ಕೆಲಸದಿಂದ ತೆಗೆಯಲಾಗಿದೆ” ಎಂದು ಅಳಲು ತೋಡಿಕೊಂಡಿದ್ದಾರೆ,.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಏಳು ಅಂಗಡಿಗಳ ಪೈಕಿ ಒಬ್ಬ ಅಂಗಡಿ ಮಾಲೀಕ ಬದರಿನಾಥ ಟ್ರೇಡರ್ ಮುದಗಲ್ ಅವರು ಮಾತ್ರ ಈಗಿನ ಕೂಲಿ ದರಕ್ಕಿಂತ ಒಂದು ರೂಪಾಯಿ ಹೆಚ್ಚಳ ಮಾಡಿದ್ದಾರೆ. ಉಳಿದಂತೆ 6 ಅಂಗಡಿಗಳಾದ ಮದಿನಾ ಟ್ರೇಡರ್, ಮೊಹಮ್ಮದಿಯ ಟ್ರೇಡರ್, ಮಲಿಯಮ್ಮ ಟ್ರೇಡರ್, ಮಂಜುನಾಥ ಟ್ರೇಡರ್, ಭಾರತ ಟ್ರೇಡರ್ ಮತ್ತು ಸೂಗೂರೇಶ್ವರ ಟ್ರೇಡರ್ಸ್‌ನ ಮಾಲೀಕರು ಕೂಲಿ ದರವನ್ನು ಹೆಚ್ಳ ಮಾಡಿಲ್ಲ. ಅವರೆಲ್ಲರೂ ಸರ್ಕಾರದ ನಿಯಮವನ್ನು ಕಡೆಗಣಿಸುತ್ತಿದ್ದಾರೆ. ಅವರೆಲ್ಲರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

“ಕೂಲಿ ಹೆಚ್ಚಳಕ್ಕಾಗಿ ಮುದಗಲ್ ಹಮಾಲಿ ಕಾರ್ಮಿಕರು ಕಳೆದ ಆರು ತಿಂಗಳಿಂದ ನಿರಂತರ ಹೋರಾಟ ಮಾಡುತ್ತಿದ್ದಾರೆ. ಆದರೂ, ಕೂಲಿ ಹೆಚ್ಚಳವಾಗಿಲ್ಲ. ಲಿಂಗಸೂಗೂರು ತಾಲೂಕಿನ ಸಹಾಯಕ ಆಯುಕ್ತರು, ಕಾರ್ಮಿಕ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು, ಮುದಗಲ್ ಪುರಸಭೆ ಅಧಿಕಾರಿಗಳು ರಾಜ್ಯ ಸರ್ಕಾರದ ಅಧಿಸೂಚನೆ ಜಾರಿ ಮಾಡಿಸುವಲ್ಲಿ ವಿಫಲವಾಗಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರದ ಕಾನೂನುಗಳನ್ನು ಗಾಳಿಗೆ ತೂರಲಾಗಿದೆ” ಎಂದು ಆರೋಪಿಸಿದ್ದಾರೆ.

“ಕೂಲಿ ದರ ಜಾರಿಗೆ ಸಂಬಂಧಪಟ್ಟಂತೆ ಅಗತ್ಯ ಕ್ರಮ ವಹಿಸದೇ ಅಂಗಡಿ ಮಾಲೀಕರೊಂದಿಗೆ ಶಾಮೀಲಾದ ಲಿಂಗಸೂಗೂರು ಕಾರ್ಮಿಕ ನಿರೀಕ್ಷಕ ಶಾಂತಕುಮಾರ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಬಂದ ಸಹಾಯಕ ಆಯುಕ್ತರು ಅವಿನಾಶ್ ಶಿಂಧೆ, “ಒಂದು ವಾರದೊಳಗೆ ಅಂಗಡಿ ಮಾಲೀಕರು, ಅಧಿಕಾರಿ ಮತ್ತು ಸಿಐಟಿಯು ಮುಖಂಡರು ಹಾಗೂ ಹಮಾಲಿ ಕಾರ್ಮಿಕರನ್ನೊಳಗೊಂಡ ಸಭೆ ಕರೆಯುತ್ತೇವೆ. ಸಮಸ್ಯೆಯನ್ನು ಪರಿಹರಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಹಮಾಲಿ ಫೆಡರೇಶನ್ ನ ರಾಜ್ಯ ಉಪಾಧ್ಯಕ್ಷ ತಿಪ್ಪಯ್ಯ ನಾಯಕ್, ಯಂಕಪ್ಪ ಕೆಂಗಲ್ ಕೆಪಿಆರ್ ಎಸ್ ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ, ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಡಿ.ಎಸ್ ಶರಣಬಸವ, ಮಹಮದ್ ಹನೀಫ್, ನಿರುಪಾದಿ ತುರ್ವಿಹಾಳ, ಮರಿಸ್ವಾಮಿ, ನಿಂಗಪ್ಪ, ವಿಶ್ವ ಅಂಗಡಿ, ಸೇರಿದಂತೆ ಅನೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...