ರಾಯಚೂರು ರಿಪೋರ್ಟ ರ್ಸ್ ಗಿಲ್ಡ್‌ನ 25ನೇ ವರ್ಷದ ಬೆಳ್ಳಿ ಮಹೋತ್ಸವದ ಅಂಗವಾಗಿ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ನವೀಕರಣಗೊಳಿಸಲಾದ ಎಸಿ ಪ್ರೆಸ್ ಕಾನ್ಫರೆನ್ಸ್ ಹಾಲ್ ಅನ್ನು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಅವರು ಉದ್ಘಾಟಿಸಿದರು.
ನಗರದ ಪತ್ರಿಕಾ ಭವನದಲ್ಲಿರುವ ಪ್ರೆಸ್ ಕಾನ್ಸರೆನ್ಸ್ ಹಾಲ್‌ನಲ್ಲಿ ಕೈಗೊಂಡ ನವೀಕರಣ ಕಾಮಗಾರಿಗೆ ವಿದ್ಯುಕ್ತವಾಗಿ ಚಾಲನೆ ನೀಡುವ ಮೂಲಕ ನೂತನ ಸೌಲಭ್ಯಗಳನ್ನು ಪತ್ರಕರ್ತರು ಹಾಗೂ ಸಾರ್ವಜನಿಕರ ಬಳಕೆಗೆ 371ಜೆ ಕಲಂನಿಂದ ಈ ಭಾಗದ ಜನರಿಗೆ ಹಾಗೂ ಯುವಕರಿಗೆ ಸಾಕಷ್ಟು ಅನುಕೂಲವಾಗಿದೆ. ಅಭಿವೃದ್ಧಿಯೂ ಸಾಗುತ್ತಿದೆ. ಇಂತಹ ಸಂದರ್ಭದಲ್ಲಿ ಬೇರೆ ಜಿಲ್ಲೆಗಳನ್ನು 371ಜೆ ಕಲಂ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕು ಎಂಬ ಬೇಡಿಕೆಗಳು ಕೇಳಿಬಂದರೆ ಅದನ್ನು ಒಪ್ಪಲು ಸಾಧ್ಯವಿಲ್ಲ. ಆಯಾ ಜಿಲ್ಲೆಗಳ ಸಮಸ್ಯೆಗಳೇ ಬೇರೆ ಇದ್ದು, ಅವುಗಳನ್ನು ಪ್ರತ್ಯೇಕವಾಗಿ ಹೋರಾಟ ನಡೆಸುವ ಮೂಲಕ ಪರಿಹರಿಸಿಕೊಳ್ಳಬೇಕು. ತಮ್ಮ ಸಮಸ್ಯೆಗಳಿಗೆ ಪ್ರತ್ಯೇಕ ಅನುದಾನ ಹಾಗೂ ಪರಿಹಾರಕ್ಕಾಗಿ ಸರ್ಕಾರದ ಗಮನ ಸೆಳೆಯಲಿ ಎಂದು ತಿಳಿಸಿದರು.
371ಜೆ ಕಲಂ ತಿದ್ದುಪಡಿ ಮಾಡುವ, ಅದರ ವ್ಯಾಪ್ತಿಗೆ ಬೇರೆ ಜಿಲ್ಲೆಗಳನ್ನು ಸೇರಿಸುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ. ಈ ಭಾಗದ ಜನರ ಹಲವು ವರ್ಷಗಳ ಹೋರಾಟದ ಫಲವಾಗಿ ದೊರೆತ ಸೌಲಭ್ಯದಲ್ಲಿ ಬೇರೆಯವರಿಗೆ ಯಾವುದೇ ಪಾಲು ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಈ ಹಿಂದೆ ಕಡಿಮೆ ಪ್ರಮಾಣದಲ್ಲಿದ್ದ ಅನುದಾನವನ್ನು ಹಂತ ಹಂತವಾಗಿ ಹೆಚ್ಚಿಸಿ ಪ್ರಸ್ತುತ 5,000 ಕೋಟಿ ರೂ. ಮೀಸಲಿಡಲಾಗಿದೆ. ಇದರಿಂದ ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ವೇಗ ದೊರೆಯುತ್ತಿದೆ. ಇದನ್ನು ಗಮನಿಸಿ ಇತರ ಜಿಲ್ಲೆಗಳಿಗೂ ಇಂತಹ ಸೌಲಭ್ಯಗಳು ಬೇಕೆಂಬ ಚಿಂತನೆ ಮೂಡಿದೆ ಎಂದರು.
ಇತರ ಜಿಲ್ಲೆಗಳ ಜನರು 371ಜೆ ಕಲಂ ಅಡಿಯಲ್ಲಿ ಸೌಲಭ್ಯಗಳನ್ನು ಪಡೆಯಲು ಅರ್ಹರಲ್ಲ. ಅವರ ಸಮಸ್ಯೆಗಳಿಗೆ ಪ್ರತ್ಯೇಕ ಯೋಜನೆ, ಅನುದಾನ ಹಾಗೂ ಪರಿಹಾರ ರೂಪಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು. 371ಜೆ ಕಲಂ ವ್ಯಾಪ್ತಿಗೆ ತಮ್ಮ ಜಿಲ್ಲೆಗಳನ್ನೂ ಸೇರಿಸಬೇಕೆಂಬ ಬೇಡಿಕೆಯನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ. ಅಗತ್ಯ ಬಿದ್ದರೆ ಇದರ ವಿರುದ್ದ ಪ್ರತಿಭಟನೆಗೂ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ
ಈ ವೇಳೆ ಕಾಂಗ್ರೆಸ್ ಮುಖಂಡ ರಜಾಕ್ ಉಸ್ತಾದ ಹಾಗೂ ಪತ್ರಕರ್ತರು ಇದ್ದರು.



