ರಾಯಚೂರು | ಪೋತ್ನಾಳ ಹಳ್ಳಕ್ಕೆ ನೀರು ಹರಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಅಮೀನ್ ಪಾಷಾ ದಿದ್ದಗಿ

Date:

ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಪೋತ್ನಾಳ ಹಳ್ಳಕ್ಕೆ ನೀರು ಹರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮೀನ್ ಪಾಷಾ ದಿದ್ದಗಿ ಒತ್ತಾಯಿಸಿದರು.

- Advertisement -

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರ ಎಡದಂಡೆ ಕಾಲುವೆಯ ಮುಖ್ಯ ಕಾಲುವೆಯಲ್ಲಿ ನೀರು ಸ್ಥಗಿತಗೊಳಿಸಿದ ಜಿಲ್ಲಾಡಳಿತ, ಉಪಕಾಲುವೆಗಳಲ್ಲಿ ಅಕ್ರಮ ನೀರಾವರಿಯನ್ನು ತಡೆಯುವಲ್ಲಿ ವಿಫಲವಾಗಿದೆ. ಉಪಕಾಲುವೆಗಳ ವ್ಯಾಪ್ತಿಯಲ್ಲಿ ನೀರು ಸಮರ್ಪಕವಾಗಿ ತಲುಪದ ಕಾರಣ ಬಿತ್ತನೆ ಮಾಡಿರುವ ಜೋಳದ ಬೆಳೆ ಒಣಗುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಉಪಕಾಲುವೆಗಳ ಕೊನೆಯ ಭಾಗದ ಜಮೀನುಗಳಿಗೆ ನೀರು ತಲುಪಿಲ್ಲ. ಒಟ್ಟು 1,000 ಕ್ಯೂಸೆಕ್ ನೀರಿನಲ್ಲಿ ಸುಮಾರು 800 ಕ್ಯೂಸೆಕ್ ನೀರು ಅಕ್ರಮವಾಗಿ ಬಳಕೆಯಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ 30ಕ್ಕೂ ಹೆಚ್ಚು ಗ್ರಾಮಗಳ ಜನರು ಹಾಗೂ ಜಾನುವಾರುಗಳು ಪೋತ್ನಾಳ ಹಳ್ಳದ ನೀರನ್ನೇ ಅವಲಂಬಿಸಿವೆ. ಆದರೆ, ಹಳ್ಳದಲ್ಲಿ ನೀರಿಲ್ಲದೆ ಜನರು ಪರದಾಡುವಂತಾಗಿದೆ ಎಂದರು. ಜಿಲ್ಲಾಡಳಿತ ಕೂಡಲೇ ಪೋತ್ನಾಳ ಹಳ್ಳಕ್ಕೆ ನೀರು ಹರಿಸುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿರುವ ಸಂದರ್ಭದಲ್ಲಿ ಬ್ಯಾಂಕ್‌ಗಳು ನ್ಯಾಯಾಲಯಗಳ ಮೂಲಕ ರೈತರಿಗೆ ನೋಟಿಸ್ ನೀಡುತ್ತಿದ್ದು, ಸಾಲ ವಸೂಲಿಗೆ ಮುಂದಾಗಿವೆ. ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ರೈತರಿಂದ ಬಲವಂತದ ಸಾಲ ವಸೂಲಿ ಮಾಡುವುದನ್ನು ತಡೆಯಬೇಕು. ಬ್ಯಾಂಕ್‌ಗಳಿಗೆ ಸರ್ಕಾರದಿಂದ ಯಾವುದೇ ಸೂಚನೆ ಅಥವಾ ಆದೇಶ ಬಂದಿಲ್ಲ ಎಂದು ಬ್ಯಾಂಕ್ ಅಧಿಕಾರಿಗಳು ಹೇಳುತ್ತಿದ್ದಾರೆ. ಕೋಟ್ನೆಕಲ್ ಗ್ರಾಮದ ರೈತರಿಗೆ ಬ್ಯಾಂಕ್ ಮೂಲಕ ನೋಟಿಸ್ ನೀಡಲಾಗಿದ್ದು, ಹುಸೇನಪ್ಪ ಎಂಬ ರೈತನಿಂದ ಸಾಲ ವಸೂಲಿ ಮಾಡಲು ಬ್ಯಾಂಕ್ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ತಿಳಿಸಿದರು.

ಒಂದೆಡೆ ರೈತರಿಂದ ಬಲವಂತವಾಗಿ ಸಾಲ ವಸೂಲಿ ಮಾಡದಂತೆ ಸೂಚನೆ ನೀಡಿರುವುದಾಗಿ ಸರ್ಕಾರ ಹೇಳಿಕೊಳ್ಳುತ್ತಿದೆ. ಮತ್ತೊಂದೆಡೆ, ಬ್ಯಾಂಕ್ ಅಧಿಕಾರಿಗಳು ಕನಿಷ್ಠ ಮಾನವೀಯತೆಯನ್ನೂ ತೋರದೆ ರೈತರೊಂದಿಗೆ ವರ್ತಿಸುತ್ತಿದ್ದಾರೆ. ಬರಗಾಲದಿಂದ ಬೆಳೆ ನಷ್ಟವಾಗಿದ್ದು, ರೈತರ ಕೈಯಲ್ಲಿ ಹಣವಿಲ್ಲದಂತಾಗಿದೆ. ಬೆಳೆ ಸಾಲದ ಮರುಪಾವತಿ ಅವಧಿಯನ್ನು ವಿಸ್ತರಿಸುವುದಾಗಿ ಸರ್ಕಾರ ಭರವಸೆ ನೀಡುತ್ತಿದ್ದರೂ, ರೈತರಿಂದ ಬಲವಂತವಾಗಿ ಸಾಲ ವಸೂಲಿ ಮಾಡುತ್ತಿರುವುದು ಸರಿಯಲ್ಲ. ಸರ್ಕಾರ ಕೂಡಲೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ, ರೈತರ ಮೇಲಿನ ಒತ್ತಡವನ್ನು ನಿವಾರಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ಈ ಸಂದರ್ಬದಲ್ಲಿ ದುರುಗಪ್ಪ, ನಾಗನಗೌಡ, ಬಸವಲಿಂಗ ಪಾಶ್ವನಾರ್ಥಗೌಡ, ಸಂತೋಷ ಹೀರೆಮಠ, ರಾಜುಗೌಡ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...