ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

Date:

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕಳೆದ ಮೂರೂವರೆ ವರ್ಷಗಳಲ್ಲಿ ಸುಮಾರು 873 ಕೋಟಿ ರೂ. ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಧರ್ಮಸಿಂಗ್ ತಿಳಿಸಿದರು.

- Advertisement -

ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೆಕೆಆರ್‌ಡಿಬಿ ವತಿಯಿಂದ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ರಾಯಚೂರು ನಗರ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಭಾನುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೆದ್ದಾರಿ ನಿರ್ಲಕ್ಷ್ಯಕ್ಕೆ ಆರಿ ಹೋದ ಅಲೆಮಾರಿ ಸಮುದಾಯದ ಜ್ಯೋತಿ.!

ಕಡು ಬಡತನ, ಮೂಲಭೂತ ಸೌಕರ್ಯಗಳ ಕೊರತೆಯ ನಡುವೆಯೂ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಜಿಎನ್ಎಂ ನರ್ಸಿಂಗ್ ಪದವಿ ವ್ಯಾಸಂಗ ಮಾಡುತ್ತಿದ್ದಳು. ತನ್ನ ಸಮುದಾಯದಲ್ಲೇ ಅತಿ ಹೆಚ್ಚು ಶಿಕ್ಷಣ ಪಡೆದ ಬೆರಳೆಣಿಕೆಯ ವಿದ್ಯಾರ್ಥಿಗಳಲ್ಲಿ...

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ ಅಧಿಕಾರದ ಹಂಚಿಕೆ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯದ ಭವಿಷ್ಯವನ್ನು ನಿರ್ಧರಿಸುವ ಪ್ರಕ್ರಿಯೆ. ಕ್ಷೇತ್ರಗಳ ಗಡಿ ಬದಲಾವಣೆಯಿಂದ ದಲಿತ, ಆದಿವಾಸಿ,...

ಗುಳೇದಗುಡ್ಡ | ತಾಲೂಕಾಗಿ ಹತ್ತು ವರ್ಷ ಕಳೆದರೂ ಭೂ...

ಗುಳೇದಗುಡ್ಡ ತಾಲೂಕು ರಚೆನೆಯಾಗಿ ಹತ್ತು ವರ್ಷ ಕಳೆದಿದೆ. ತಾಲೂಕು ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಿಗೆ ಸಂಬಂಧಿಸಿದ ಭೂದಾಖಲೆಗಳು ಬಾದಾಮಿ ತಹಸೀಲ್ದಾರ್ ಕಚೇರಿ ಮತ್ತು ಗದಗ ರಸ್ತೆಯ ಎಪಿಎಂಸಿ ಸಮೀಪದ ಕಚೇರಿಯಲ್ಲಿ ಸಂಗ್ರಹವಾಗಿವೆ....

ಆರೋಗ್ಯ ಇಲಾಖೆಯ ಸುಧಾರಣೆಗೆ ಹೆಚ್ಚಿನ ಕಾಳಜಿ ವಹಿಸುತ್ತಿರುವ ಆರೋಗ್ಯ ಸಚಿವರು ಹಲವಾರು ಜನಪರ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ ಅವರು, ‘ಆರೋಗ್ಯ ಆವಿಷ್ಕಾರ’ ಯೋಜನೆಯಡಿ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಮತ್ತು ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ರಾಯಚೂರು ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚಿನ ಅನುದಾನ ಹಾಗೂ ಕೊಡುಗೆಗಳನ್ನು ನೀಡುವಂತೆ ಆರೋಗ್ಯ ಸಚಿವರಲ್ಲಿ ಮನವಿ ಮಾಡಿರುವುದಾಗಿ ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗಾಗಿ 873 ಕೋಟಿ ರೂ. ಅನುದಾನ ಬಳಸಿಕೊಳ್ಳಲಾಗುತ್ತಿದೆ. ಇದರಡಿ ನೂತನ ಆರೋಗ್ಯ ಕೇಂದ್ರಗಳ ಸ್ಥಾಪನೆ, ಹಳೆಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗಿದೆ. ಅಧಿಕಾರಿಗಳು ಈ ಯೋಜನೆಗಳನ್ನು ಕಟ್ಟುನಿಟ್ಟಾಗಿ ಹಾಗೂ ಕಾಲಮಿತಿಯೊಳಗೆ ಜಾರಿಗೊಳಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು ಎಂದು ಸಚಿವರು ಸೂಚಿಸಿದರು

ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಆರೋಗ್ಯ ಕೇಂದ್ರವು ಜಿಲ್ಲೆಯ ಜನರಿಗೆ ಅಗತ್ಯ ಚಿಕಿತ್ಸೆ ಪಡೆಯಲು ಸಹಕಾರಿಯಾಗಲಿದೆ. ಈ ಯೋಜನೆ ತಮಗೆ ಅತ್ಯಂತ ಸಂತಸ ತಂದಿದೆ. ಆರೋಗ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಆರೋಗ್ಯ ಸಚಿವ ಯು.ಟಿ. ಖಾದ‌ರ್ ಅವರ ಮಾರ್ಗದರ್ಶನದಲ್ಲಿ ಸ್ಥಳೀಯ ಶಾಸಕರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಒಗ್ಗೂಡಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಶ್ರಮಿಸಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್. ಭೋಸರಾಜು ಹಾಗೂ ವಸಂತ ಕುಮಾ‌ರ್, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರುದ್ರಪ್ಪ ಅಂಗಡಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಪವನ್ ಕುಮಾ‌ರ್ ಕಿಶೋರ್, ಜಿಲ್ಲಾಧಿಕಾರಿ ಪೂವಿತಾ ಎಸ್‌., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಇನ್ನಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನುಡಿ 2026 | ನಾವಿಂದು ಗಾಯಗೊಂಡ ಪ್ರಜಾಪ್ರಭುತ್ವದಲ್ಲಿ ಬದುಕುತ್ತಿದ್ದೇವೆ : ಕಿರಣ್ ಗಾಜನೂರು

ನಾವಿಂದು ಒಂದು 'ಗಾಯಗೊಂಡ ಪ್ರಜಾಪ್ರಭುತ್ವ'ದಲ್ಲಿ ಬದುಕುತ್ತಿದ್ದೇವೆ. ಯಾವ ಸಮಾಜದಲ್ಲಿ ಧರ್ಮವು ರಾಜಕೀಯದ...

ಜನನುಡಿ – 2026 | ನಮ್ಮ ನಡುವೆ ಇರುವ ಫ್ಯಾಸಿಸ್ಟರ ಬಗ್ಗೆ ಸದಾ ಜಾಗೃತರಾಗಿರಬೇಕು : ಟಿ. ಎಲ್‌. ಕೃಷ್ಣೇಗೌಡ

ಫ್ಯಾಸಿಸ್ಟರು ನಮ್ಮ ನಡುವೆಯೇ ಸಾಮಾನ್ಯರಂತೆ, ಅತ್ಯಂತ ಅಮಾಯಕರಂತೆ ಇರುತ್ತಾರೆ. ಇಂತಹ ಅಮಾಯಕ...

ಮಲೆನಾಡಿನ ಉಳಿವಿಗೆ ಬಂದೂಕು ಹಿಡಿದವರಿಗೆ ನಕ್ಸಲ್ ಎಂದರು! ಎಸ್ಟೇಟ್ ಮಾಲೀಕನ ಕೃತ್ಯಕ್ಕೆ ಏನೇಳಬೇಕು?

ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದ ಬಸಗೋಡು ವ್ಯಾಪ್ತಿಯ ಬ್ರಹ್ಮಗಿರಿ ಕಾಫಿ ಎಸ್ಟೇಟ್...

ರಾಯಚೂರು | ಕೆಲಸದ ಒತ್ತಡದ ನಡುವೆಯೂ ವ್ಯಾಯಾಮ, ಕ್ರೀಡೆಗೆ ಆದ್ಯತೆ ನೀಡಿ: ನ್ಯಾಯಾಧೀಶ ಬಿ.ಬಿ. ಜಕಾತಿ

ಕೆಲಸದ ಒತ್ತಡದ ನಡುವೆಯೂ ಪ್ರತಿಯೊಬ್ಬರೂ ವ್ಯಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ...