ರಾಯಚೂರು, ಯಾದಗಿರಿಗೆ ಸಚಿವ ಸ್ಥಾನ ನೀಡದಿದ್ದರೆ ಆ.15ರಂದು ಧ್ವಜಾರೋಹಣಕ್ಕೆ ತಡೆ: ಎಸ್. ಮಾರೆಪ್ಪ ಎಚ್ಚರಿಕೆ

Date:

ನೂತನ ಸಚಿವ ಸಂಪುಟದಲ್ಲಿ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡದೇ ಅನ್ಯಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್‌ 15ರಂದು ಬೇರೆ ಜಿಲ್ಲೆಯ ಜನಪ್ರತಿನಿಧಿಗಳು ಬಂದು ಧ್ವಜಾರೋಹಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಎಸ್. ಮಾರೆಪ್ಪ ಎಚ್ಚರಿಕೆ ನೀಡಿದರು.

- Advertisement -

ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹತ್ವಾಕಾಂಕ್ಷಿ ಜಿಲ್ಲೆಗಳೆಂದು ಗುರುತಿಸಿಕೊಂಡಿರುವ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಆಡಳಿತದ ಮೇಲೆ ಹಿಡಿತ ಸಾಧಿಸಲು ಕಲಬುರಗಿ ಜಿಲ್ಲೆಯ ಪ್ರಭಾವಿ ರಾಜಕಾರಣಿಗಳ ಆಸಕ್ತಿಯೂ ಒಂದು ಕಾರಣವಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ರಾಯಚೂರು ಜಿಲ್ಲೆಯಲ್ಲಿ ಮಾತ್ರವಲ್ಲ, ಇತರ ಜಿಲ್ಲೆಗಳಲ್ಲಿಯೂ ರಾಜಕೀಯ ಬಣಗಳಿವೆ. ಆದರೆ ಸ್ಥಳೀಯ ಗುಂಪುಗಾರಿಕೆಯನ್ನು ನೆಪವನ್ನಾಗಿ ಮಾಡಿಕೊಂಡು ಜಿಲ್ಲೆಗೆ ಸಚಿವ ಸ್ಥಾನ ನೀಡದೇ ಅನ್ಯಾಯ ಮಾಡಿರುವುದು ಖಂಡನೀಯ. ಜಿಲ್ಲೆಯಲ್ಲಿ ಸಿಂಡಿಕೇಟ್ ರಾಜಕಾರಣವಿದೆ. ಗುಡ್ಡ, ಕೆರೆ ನಾಶ ಮಾಡಲು ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಒಂದಾಗುತ್ತಾರೆ. ಜಿಲ್ಲೆಯ ಅಭಿವೃದ್ದಿಗಾಗಿ ಒಗ್ಗೂಟ್ಟಿನಿಂದ ಜಿಲ್ಲೆಗೆ ಸಚಿವ ಸ್ಥಾನ ಪಡೆಯಲು ಶಾಸಕರು ಕಾರ್ಯನಿರ್ವಹಿಸುವದಿಲ್ಲ. ಹೊರ ಜಿಲ್ಲೆಯವರಗೆ ಸಚಿವ ಸ್ಥಾನ ನೀಡುವದು ರಾಜಕೀಯ ದಬ್ಬಾಳಿಕೆಯಾಗಿದೆ ಎಂದು ಆರೋಪಿಸಿದರು.

ಆಡಳಿತ ಮತ್ತು ಪ್ರತಿಪಕ್ಷದ ಶಾಸಕರುಗಳಿಗೆ ಕನಿಷ್ಟ ಆತ್ಮಸಾಕ್ಷಿ ಇಲ್ಲದೇ ಹೋಗಿದೆ. ಯಾರೊಬ್ಬರು ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಪ್ರತಿರೋಧಿಸುತ್ತಿಲ್ಲ. ಕಲ್ಬುರ್ಗಿ ಜಿಲ್ಲೆಗೆ ಮೂರು, ಬೀದರ್ ಎರಡು, ಕೊಪ್ಪಳಕ್ಕೆ ಎರಡು ಸಚಿವ ಸ್ಥಾನ ನೀಡುವಾಗ ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡಬೇಕೆನ್ನುವುದನ್ನೇ ಕಾಂಗ್ರೆಸ್ ಹೈಕಮಾಂಡ ಮರೆತಿರುವುದು ಈ ಹಿಂದೆ ವ್ಯವಸ್ಥಿತ ರಾಜಕೀಯ ಕುತಂತ್ರವಿದೆ ಎಂದರು.

ಜಿಲ್ಲೆಯವರನ್ನೇ ಸಚಿವರನ್ನಾಗಿ ಉಸ್ತುವಾರಿ ಸಚಿವರಾಗಿಸಬೇಕು. ಅಲ್ಲಿಯವರಗೆ ಬೇರೆ ಜಿಲ್ಲೆಯವರು ಧ್ವಜಾರೋಹಣ ಮಾಡಲು ಬಿಡುವುದಿಲ್ಲ. ಜಿಲ್ಲೆಯ ಯಾರಿಗಾದರೂ ಸಚಿವ ಸ್ಥಾನ ಮಾಡಲಿ, ಪ್ರಾತಿನಿಧ್ಯ ನೀಡಲೇಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು ರಾಜಕೀಯದಲ್ಲಿ ಮತ್ತೆ ಹಿನ್ನಡೆ: ಸಚಿವ ಸ್ಥಾನಕ್ಕೆ ಚೊಂಬು, ಜಿಲ್ಲೆಯ ನಿರೀಕ್ಷೆ ಭಗ್ನ

ಪತ್ರಿಕಾಗೋಷ್ಠಿಯಲ್ಲಿ ಹೇಮರಾಜ ಅಸ್ಕಿಹಾಳ, ನರಸಿಂಹಲು ಮರ್ಚಟ್ಹಾಳ, ಶ್ರೀನಿವಾಸ ಕೊಪ್ಪರ, ಶ್ರೀನಿವಾಸ ಕಲವಲದೊಡ್ಡಿ, ಲಕ್ಷ್ಮಣ ಕಲ್ಲೂರು, ತಾಯಪ್ಪ ,ರವಿ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...