ರಾಯಚೂರು | ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘ ಆಗ್ರಹ

Date:

ರಾಯಚೂರು ನಗರದ ಎಸ್‌ಎನ್‌ಟಿ ಮತ್ತು ಮಿನಿ ಟಾಕೀಸ್ ಕೆಡವಿ ಸರ್ಕಾರಿ ಕೋಟೆ ಕಂದಕದ ಸ್ಥಳವನ್ನು ಅತಿಕ್ರಮಿಸಿ ಬಹುಮಹಡಿ ಕಟ್ಟಡ ನಿರ್ಮಾಣ ಮಾಡುತ್ತಿರುವುದನ್ನು ತಡೆಯಬೇಕು ಎಂದು ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರಾಚ್ಯವಸ್ತು ಇಲಾಖೆಯ ಕ್ಯೂರೇಟರ್ ಸರ್ಕಾರ ವಸ್ತು ಸಂಗ್ರಹಾಲಯ, ರಾಯಚೂರು ನಗರಸಭೆ ಪೌರಾಯಕ್ತರಿಗೆ ಪತ್ರ ಬರೆದಿದೆ.

ನಗರದ ಎಸ್‌ಎನ್‌ಟಿ ಮತ್ತು ಮಿನಿ ಟಾಕೀಸ್‌ ತೆರವುಗೊಳಿಸಿ ಅದೇ ಸ್ಥಳದಲ್ಲಿ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಹಿಂಬದಿಯಲ್ಲಿರುವ ಐತಿಹಾಸಿಕ ಕೋಟೆ ಕಂದಕದ ಸ್ಥಳವನ್ನು ಒತ್ತುವರಿ ಮಾಡಿಕೊಂಡು ಬಹುಮಹಡಿ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಂಡುಬಂದಿದೆ.

ಯಾವುದೇ ಸೆಟ್‌ಬ್ಯಾಕ್ ಬಿಡದೆ ನಕ್ಷೆಯ ವಿರುದ್ಧವಾಗಿ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಬಹುಮಹಡಿ ಕಟ್ಟಡ ನಿರ್ಮಾಣ ತಡೆದು ಅತಿಕ್ರಮಿಸಿದ ಸ್ಥಳವನ್ನು ಪರಿಶೀಲನೆ ಮಾಡಿ ತೆರವುಗೊಳಿಸಬೇಕು ಎಂದು ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘದಿಂದ ದೂರು ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್ಯ ಸಂರಕ್ಷಿತ ನಗರದ ಕೋಟೆ ಬಾಗಿಲು ನವರಂಗ ದರ್ವಾಜಾ ಸ್ಮಾರಕದಿಂದ ನೈರುತ್ಯಕ್ಕೆ 209.49 ಮೀಟರ್ ಅಂತರದಲ್ಲಿದ್ದು, ಸ್ಮಾರಕದ ನಿಯಂತ್ರಣ ಪ್ರದೇಶದಲ್ಲಿ ಬರುತ್ತದೆ. ಕರ್ನಾಟಕ ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳು ಹಾಗೂ ಪುರಾತತ್ವ ಸ್ಥಳಗಳ ಅವಶೇಷ ಕಾಯ್ದೆ 1961 ಮತ್ತು ನಿಯಮ 1965ರ ಪ್ರಕಾರ ಸಂರಕ್ಷಿತ ಸ್ಮಾರಕ ಪ್ರದೇಶದ ಯಾವುದೇ ದಿಕ್ಕಿನಿಂದ 100 ಮೀಟರ್ ನಿಷೇಧಿತ ಪ್ರದೇಶವಾಗಿದ್ದು, ಯಾವುದೇ ಕಟ್ಟಡ ನಿರ್ಮಾಣ, ಗಣಿಗಾರಿಕೆ ಇತರೆ ಚಟುವಟಿಕೆಗಳನ್ನು ನಡೆಸಲು ನಿಷೇಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮೂಲಭೂತ ಸೌಲಭ್ಯ ವಂಚಿತ ಸರ್ಕಾರಿ ಪ್ರೌಢಶಾಲೆ, ಪರಿಹಾರಕ್ಕೆ ಮಕ್ಕಳ ಆಗ್ರಹ

“ನಿಷೇಧಿತ ಪ್ರದೇಶದಲ್ಲಿ ಸಾರ್ವಜನಿಕ ಯೋಜನೆ ಕಾಮಗಾರಿಯನ್ನು ಒಳಗೊಂಡಂತೆ ಯಾವುದೇ ಕಾಮಗಾರಿ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದಿಲ್ಲ. 200 ಮೀಟರ್ ನಿಷೇಧಿತ ಪ್ರದೇಶವಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಮುನ್ನ ಆಯುಕ್ತರ ಪೂರ್ವಾನುಮತಿ ಪಡೆಯಬೇಕು. ಕೂಡಲೇ ಪರಿಶೀಲನೆ ಮಾಡಿ ಕ್ರಮ ವಹಿಸಬೇಕು” ಎಂದು ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ.

ವರದಿ : ಹಫೀಜುಲ್ಲ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...