ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ ಪಾಠ!

Date:

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಸಂಬಂಧಪಟ್ಟ ಇಲಾಖೆಗಳು ಶಾಶ್ವತ ಪರಿಹಾರ ಕಲ್ಪಿಸದಿರುವುದು ಪೋಷಕರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಸರ್ಕಾರಿ ಶಾಲೆಗಳನ್ನು ಉಳಿಸಿ, ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕೆಂದು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಆದರೆ, ಬೊಮ್ಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ ಮಾತ್ರ ಇದಕ್ಕೆ ವಿರುದ್ಧವಾಗಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಶಾಲಾ ಕಟ್ಟಡ ಕಾಮಗಾರಿ ಪೂರ್ಣಗೊಂಡು ನಾಲ್ಕೈದು ತಿಂಗಳು ಕಳೆದರೂ ಇನ್ನೂ ವಿದ್ಯಾರ್ಥಿಗಳ ಬಳಕೆಗೆ ಮುಕ್ತವಾಗಿಲ್ಲ. ಶಾಸಕರ ಉದ್ಘಾಟನೆಗೆ ದಿನಾಂಕ ಸಿಗದ ಕಾರಣ ಕಟ್ಟಡ ಬಳಕೆಗೆ ಬಾರದೆ ಉಳಿದಿದ್ದು, ಕೊಠಡಿಗಳ ಕೊರತೆಯಿಂದ ಮಕ್ಕಳು ವರಾಂಡದಲ್ಲಿಯೇ ಕುಳಿತು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.

- Advertisement -

ದೇವದುರ್ಗ ತಾಲ್ಲೂಕು ಜಾಲಹಳ್ಳಿ ಹೋಬಳಿಯ ಹೊಸೂರು ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 259 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ತರಗತಿ ಕೊಠಡಿಗಳಿಲ್ಲ. ನೂತನ ಕಟ್ಟಡ ಸಿದ್ಧವಾಗಿದ್ದರೂ ಉದ್ಘಾಟನೆಯಾಗದ ಕಾರಣ ಹಳೆಯ ಕಟ್ಟಡದ ಸೀಮಿತ ಕೊಠಡಿಗಳಲ್ಲಿಯೇ ತರಗತಿಗಳನ್ನು ನಡೆಸಲಾಗುತ್ತಿದೆ. ಇದರಿಂದ ಕೆಲವು ಮಕ್ಕಳು ವರಾಂಡದಲ್ಲಿ ಕುಳಿತು ಪಾಠ ಕೇಳುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಅರಬ್ ಜನಾದೇಶ ಬದಿಗಿಟ್ಟು ನೆತನ್ಯಾಹು ಕೈಹಿಡಿಯಲು ಹೊರಟ ಐಸೆನ್‌ಕೋಟ್;...

ಇಸ್ರೇಲ್‌ನ ತ್ರಿಶಂಕು ಸಂಸತ್ತಿನಲ್ಲಿ ಅಧಿಕಾರ ಹಿಡಿಯಲು ವಿರೋಧ ಪಕ್ಷದ ನಾಯಕ ಗಾಡಿ ಐಸೆನ್‌ಕೋಟ್ ತಮ್ಮ ಮಾತನ್ನೇ ನುಂಗಿ ಹಂಗಾಮಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆ ಮೈತ್ರಿ ಮಾತುಕತೆಗೆ ಮುಂದಾಗಿದ್ದಾರೆ. 19 ಸ್ಥಾನ ಗೆದ್ದ...

SIR ಪ್ರತಿರೋಧ – ಭಾರತದ ಎರಡನೇ ಸ್ವಾತಂತ್ರ್ಯ ಸಂಗ್ರಾಮ!...

ಮೋದಿ ಸರ್ಕಾರ ಬ್ರಿಟಿಷರಂತೆ ಪೊಲೀಸ್‌ ಮತ್ತು ಪೊಲೀಸ್‌ ವೇಷದ ಆರ್‌ ಎಸ್‌ ಎಸ್‌, ಹಿಂದುತ್ವವಾದಿಗಳ ಹಿಂದೆ ಅವಿತು ಭಾರತದ ಯುವಜನರ ಧಮನಕ್ಕೆ ಇಳಿದಿದೆ. ಗ್ಯಾನೇಶ್‌ ಕುಮಾರ್‌ ನನ್ನು ಮೋದಿ ಮತ್ತು ಅಮಿತ್‌ ಶಾ,...

ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಸಂಬಂಧಪಟ್ಟ ಇಲಾಖೆಗಳು ಶಾಶ್ವತ ಪರಿಹಾರ ಕಲ್ಪಿಸದಿರುವುದು ಪೋಷಕರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

b349e35e 7cd4 4fb7 85ae 26584475b9e9

ನಾಲ್ಕೈದು ತಿಂಗಳಾದರೂ ಉದ್ಘಾಟನೆ ಭಾಗ್ಯವಿಲ್ಲ

ಸರ್ಕಾರದ ಅನುದಾನದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿರುವ ನೂತನ ಕಟ್ಟಡ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸಬೇಕಿತ್ತು. ಆದರೆ, ಕಾಮಗಾರಿ ಪೂರ್ಣಗೊಂಡು ನಾಲ್ಕೈದು ತಿಂಗಳು ಕಳೆದರೂ ಕಟ್ಟಡ ಬಳಕೆಗೆ ಸಿಕ್ಕಿಲ್ಲ. ಶಾಸಕರ ದಿನಾಂಕಕ್ಕಾಗಿ ಕಾಯುತ್ತಿರುವುದರಿಂದ ಮಕ್ಕಳಿಗೆ ಹೊಸ ಕಟ್ಟಡದ ಸೌಲಭ್ಯ ದೊರೆಯುತ್ತಿಲ್ಲ.

ಉದ್ಘಾಟನಾ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳ ಉಪಸ್ಥಿತಿ ಇರಬೇಕೆಂಬುದು ಸಹಜ. ಆದರೆ, ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಕಟ್ಟಡವನ್ನು ಬಳಕೆಗೆ ನೀಡುವುದು ಮುಖ್ಯವಲ್ಲವೇ? ಅಗತ್ಯ ತಾಂತ್ರಿಕ ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡಿದ್ದರೆ ಉದ್ಘಾಟನೆಗಾಗಿ ಇಷ್ಟೊಂದು ದಿನ ಕಾಯಿಸುವುದು ಏಕೆ ಎಂಬ ಪ್ರಶ್ನೆ ಗ್ರಾಮಸ್ಥರಲ್ಲಿ ಮೂಡಿದೆ.

ವರಾಂಡವೇ ಮಕ್ಕಳ ತರಗತಿ ಕೊಠಡಿ!

259 ವಿದ್ಯಾರ್ಥಿಗಳಿರುವ ಶಾಲೆಯಲ್ಲಿ ಕೊಠಡಿಗಳ ಕೊರತೆಯಿಂದ ಕೆಲವು ತರಗತಿಗಳನ್ನು ವರಾಂಡದಲ್ಲಿಯೇ ನಡೆಸಲಾಗುತ್ತಿದೆ. ರಸ್ತೆ ಪಕ್ಕದಲ್ಲಿರುವ ವರಾಂಡದಲ್ಲಿ ಕುಳಿತು ಮಕ್ಕಳು ಪಾಠ ಕೇಳಬೇಕಾದ ಪರಿಸ್ಥಿತಿ ಇದೆ. ಬಿಸಿಲು, ಗಾಳಿ, ಮಳೆ ಹಾಗೂ ವಾಹನಗಳ ಸಂಚಾರದ ನಡುವೆ ಮಕ್ಕಳ ಕಲಿಕೆಗೆ ತೊಂದರೆಯಾಗುವ ಆತಂಕವಿದೆ.

ತರಗತಿ ಕೊಠಡಿಗಳು ಮಕ್ಕಳ ಏಕಾಗ್ರತೆ ಮತ್ತು ಕಲಿಕಾ ಪ್ರಗತಿಗೆ ಪೂರಕವಾಗಿರಬೇಕು. ಆದರೆ, ಹೊಸ ಕಟ್ಟಡ ಸಿದ್ಧವಾಗಿದ್ದರೂ ಬಳಕೆಗೆ ಬಾರದಿರುವುದು ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂಬುದು ಗ್ರಾಮಸ್ಥರ ಅಭಿಪ್ರಾಯವಾಗಿದೆ.

ಮೂರು ಶಿಕ್ಷಕರ ಹುದ್ದೆ ಖಾಲಿ

ಶಾಲೆಯಲ್ಲಿ ಒಟ್ಟು 11 ಶಿಕ್ಷಕರ ಹುದ್ದೆಗಳು ಮಂಜೂರಾಗಿವೆ. ಪ್ರಸ್ತುತ ನಾಲ್ವರು ಖಾಯಂ ಶಿಕ್ಷಕರು ಹಾಗೂ ನಾಲ್ವರು ಅತಿಥಿ ಶಿಕ್ಷಕರು ಸೇರಿದಂತೆ ಎಂಟು ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನೂ ಮೂರು ಹುದ್ದೆಗಳು ಖಾಲಿ ಉಳಿದಿವೆ.

259 ವಿದ್ಯಾರ್ಥಿಗಳಿಗೆ ಎಂಟು ಶಿಕ್ಷಕರಷ್ಟೇ ಇರುವುದರಿಂದ ಬೋಧನಾ ಕಾರ್ಯ ನಿರ್ವಹಣೆಯಲ್ಲಿ ಒತ್ತಡ ಎದುರಾಗಿದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕೆಂಬುದು ಪೋಷಕರ ಒತ್ತಾಯವಾಗಿದೆ.

ಕುಡಿಯುವ ನೀರಿಗೂ ಪರದಾಟ

ಶಾಲೆಯಲ್ಲಿ ಮಕ್ಕಳಿಗೆ ಸಮರ್ಪಕ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದು ಮತ್ತೊಂದು ಸಮಸ್ಯೆಯಾಗಿದೆ. ಪ್ರತಿದಿನ ನೂರಾರು ಮಕ್ಕಳು ಶಾಲೆಗೆ ಬರುತ್ತಿದ್ದರೂ ಅಗತ್ಯ ಪ್ರಮಾಣದ ಕುಡಿಯುವ ನೀರು ದೊರೆಯುತ್ತಿಲ್ಲ ಎಂಬ ದೂರು ಕೇಳಿಬಂದಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಗ್ರಾಮ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆ ಕೂಡಲೇ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ.

ಕಾಂಪೌಂಡ್ ಇಲ್ಲದೆ ಅಸುರಕ್ಷಿತ ಶಾಲಾ ಆವರಣ

“ಶಾಲೆಗೆ ಸಮರ್ಪಕ ಕಾಂಪೌಂಡ್ ಇಲ್ಲದಿರುವುದರಿಂದ ಮಕ್ಕಳ ಸುರಕ್ಷತೆ ಹಾಗೂ ಶಾಲಾ ಆಸ್ತಿಯ ರಕ್ಷಣೆಯ ಬಗ್ಗೆಯೂ ಆತಂಕ ಎದುರಾಗಿದೆ. ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡುವುದಷ್ಟೇ ಶಾಲಾ ಅಭಿವೃದ್ಧಿಯಲ್ಲ. ಕಾಂಪೌಂಡ್, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು ಕೂಡ ಅಷ್ಟೇ ಮುಖ್ಯವಾಗಿದೆ. ಶಾಲೆಯ ಜಾಗದ ಹಕ್ಕು ಮತ್ತು ಮಾಲೀಕತ್ವಕ್ಕೆ ಸಂಬಂಧಿಸಿದ ವಿವಾದವೂ ಮುಂದುವರಿದಿದೆ. ಜಾಗದ ದಾಖಲೆಗಳ ಕುರಿತು ಸ್ಪಷ್ಟತೆ ಇಲ್ಲದಿರುವುದರಿಂದ ಸಂಬಂಧಪಟ್ಟ ಕುಟುಂಬದ ಸದಸ್ಯರಿಂದ ಶಾಲೆಯ ಕಾರ್ಯಚಟುವಟಿಕೆಗಳಿಗೆ ಪದೇಪದೇ ತೊಂದರೆಯಾಗುತ್ತಿದೆ” ಎಂಬ ಆರೋಪ ಸ್ಥಳೀಯರು ಹಾಗೂ ಶಿಕ್ಷಕರ ವಲಯದಿಂದ ಕೇಳಿಬಂದಿದೆ.

ಈ ದಿನ.ಕಾಮ್‌ ಜೊತೆಗೆ ಬಗ್ಗೆ ಎಸ್‌ಎಫ್‌ಐ ತಾಲೂಕು ಕಾರ್ಯದರ್ಶಿ ಸಂತೋಷ ತ್ಯಾಪ್ಲಿ ಮಾತನಾಡಿ, “ಬೊಮ್ಮನಹಳ್ಳಿ ಸರ್ಕಾರಿ ಶಾಲೆಯ ನೂತನ ಕಟ್ಟಡ ನಿರ್ಮಾಣ ಪೂರ್ಣಗೊಂಡು ನಾಲ್ಕೈದು ತಿಂಗಳು ಕಳೆದರೂ ವಿದ್ಯಾರ್ಥಿಗಳ ಬಳಕೆಗೆ ನೀಡದಿರುವುದು ಖಂಡನೀಯ. ಶಾಸಕರ ದಿನಾಂಕಕ್ಕಾಗಿ ಕಾಯುತ್ತಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ಶಾಲೆಯಲ್ಲಿ ಶಿಕ್ಷಕರ ಕೊರತೆ, ಕುಡಿಯುವ ನೀರಿನ ಅಭಾವ ಹಾಗೂ ಕಾಂಪೌಂಡ್ ಸಮಸ್ಯೆಗಳಿವೆ. ಶಾಲಾ ಜಾಗದ ವಿವಾದವನ್ನೂ ಅಧಿಕಾರಿಗಳು ಜಂಟಿಯಾಗಿ ಪರಿಶೀಲಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು. ನೂತನ ಕಟ್ಟಡವನ್ನು ತಕ್ಷಣವೇ ಬಳಕೆಗೆ ನೀಡದಿದ್ದರೆ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಸಂಘಟಿಸಿ ಪ್ರತಿಭಟನೆ ನಡೆಸಲಾಗುವುದು” ಎಂದರು.

ಈ ಬಗ್ಗೆ ಮಾತನಾಡಿದ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚಂದ್ರಮ ಮಾತನಾಡಿ, “ಶಾಲೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಶಾಸಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ನೂತನ ಕಟ್ಟಡಕ್ಕೆ ಅಗತ್ಯ ಪರಿಶೀಲನೆ ಪೂರ್ಣಗೊಳಿಸಿ ಬಳಕೆಗೆ ನೀಡಬೇಕು. ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ಶುದ್ಧ ಕುಡಿಯುವ ನೀರು, ಕಾಂಪೌಂಡ್ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಶಾಲಾ ಜಾಗದ ವಿವಾದವನ್ನೂ ಕಾನೂನುಬದ್ಧವಾಗಿ ಬಗೆಹರಿಸಬೇಕು” ಎಂದು ಹೇಳಿದರು.

ಸಮಸ್ಯೆ ಬಗ್ಗೆ ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ ಮಾತನಾಡಿ, “ಬೊಮ್ಮನಹಳ್ಳಿ ಶಾಲೆಯ ಕಟ್ಟಡ ನಿರ್ಮಾಣ ಪೂರ್ಣಗೊಂಡಿರುವುದು ಗಮನಕ್ಕೆ ಬಂದಿದೆ. ಆದಷ್ಟು ಬೇಗ ಕಟ್ಟಡ ಉದ್ಘಾಟಿಸಿ ಮಕ್ಕಳಿಗೆ ಅನುಕೂಲ ಮಾಡಿಕೊಡಲಾಗುವುದು. ಸೋಮನಮರಡಿ, ಕರಡಿಗುಡ್ಡ ಸೇರಿದಂತೆ ಇನ್ನೂ ಕೆಲವು ಗ್ರಾಮಗಳಲ್ಲಿಯೂ ಶಾಲಾ ಕಟ್ಟಡಗಳು ನಿರ್ಮಾಣಗೊಂಡಿವೆ. ಎಲ್ಲ ಕಟ್ಟಡಗಳನ್ನು ಒಟ್ಟಿಗೆ ಉದ್ಘಾಟಿಸಬೇಕೆಂಬ ಉದ್ದೇಶವಿದೆ. ಜೊತೆಗೆ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸ್ವಲ್ಪ ವಿಳಂಬವಾಗಿದೆ. ಆದಷ್ಟು ಬೇಗ ದಿನಾಂಕ ನಿಗದಿಪಡಿಸಿ ಉದ್ಘಾಟಿಸಲಾಗುವುದು” ಎಂದು ಹೇಳಿದರು.

ಸರ್ಕಾರಿ ಶಾಲೆ ಉಳಿಸುವ ಮಾತು ಘೋಷಣೆಯಾಗಿಯೇ ಉಳಿಯದಿರಲಿ!

ಗ್ರಾಮೀಣ ಭಾಗದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸರ್ಕಾರಿ ಶಾಲೆಗಳನ್ನೇ ಅವಲಂಬಿಸಿವೆ. ಬೊಮ್ಮನಹಳ್ಳಿ ಶಾಲೆಯಲ್ಲಿ 259 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವುದು ಸರ್ಕಾರಿ ಶಿಕ್ಷಣದ ಮೇಲಿನ ಗ್ರಾಮೀಣ ಜನರ ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ಇಂತಹ ಶಾಲೆಗಳನ್ನು ಅಭಿವೃದ್ಧಿಪಡಿಸಿ ಮಾದರಿ ಶಾಲೆಗಳನ್ನಾಗಿ ರೂಪಿಸಬೇಕಾದ ಅಗತ್ಯವಿದೆ. ಕಟ್ಟಡ ಉದ್ಘಾಟನೆಯ ವಿಳಂಬ, ಕೊಠಡಿಗಳ ಕೊರತೆ, ಶಿಕ್ಷಕರ ಖಾಲಿ ಹುದ್ದೆಗಳು, ಕುಡಿಯುವ ನೀರಿನ ಸಮಸ್ಯೆ, ಕಾಂಪೌಂಡ್ ಅಭಾವ ಹಾಗೂ ಜಾಗದ ವಿವಾದಗಳು ಶಾಲೆಯ ಪ್ರಗತಿಗೆ ಅಡ್ಡಿಯಾಗಿವೆ.

ಶಾಲಾ ಕಟ್ಟಡಗಳು ಜನಪ್ರತಿನಿಧಿಗಳ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಮಾತ್ರ ನಿರ್ಮಾಣವಾಗುವುದಿಲ್ಲ. ಅವು ಮಕ್ಕಳ ಭವಿಷ್ಯ ರೂಪಿಸುವ ಕೇಂದ್ರಗಳಾಗಿವೆ. ನಾಲ್ಕೈದು ತಿಂಗಳಿಂದ ಸಿದ್ಧವಾಗಿರುವ ಕಟ್ಟಡ ಮಕ್ಕಳ ಬಳಕೆಗೆ ಯಾವಾಗ ಸಿಗಲಿದೆ? ವರಾಂಡದಲ್ಲಿ ಪಾಠ ಕೇಳುತ್ತಿರುವ ಮಕ್ಕಳಿಗೆ ಸುಸಜ್ಜಿತ ಕೊಠಡಿಗಳು ಯಾವಾಗ ದೊರೆಯಲಿವೆ? ಖಾಲಿ ಹುದ್ದೆಗಳು ಯಾವಾಗ ಭರ್ತಿಯಾಗಲಿವೆ? ಮೂಲಸೌಕರ್ಯಗಳ ಸಮಸ್ಯೆಗೆ ಯಾವಾಗ ಪರಿಹಾರ ಸಿಗಲಿದೆ ಎಂಬುದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಉತ್ತರಿಸಬೇಕಿದೆ.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಲಸ್ಟರ್ ಕಿಚನ್ ಸ್ಥಾಪಿಸುವ ಪ್ರಶ್ನೆಯೇ ಇಲ್ಲ : ಸಚಿವ ಮಧು ಬಂಗಾರಪ್ಪ

ರಾಜ್ಯದ 1ರಿಂದ 10ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಒದಗಿಸುವ...

ಶಿವಮೊಗ್ಗ | ಸರ್ಕಾರಿ ಜಮೀನುಗಳ ಸದ್ಬಳಕೆಗೆ ಪೀಸ್ ಆರ್ಗನೈಸೇಷನ್ ಆಗ್ರಹ

ಸರ್ಕಾರಿ ಜಮೀನುಗಳನ್ನು ಸಾರ್ವಜನಿಕ ಹಿತಾಸಕ್ತಿಗಾಗಿ ಸದುಪಯೋಗಪಡಿಸಿಕೊಂಡು, ಶಿಕ್ಷಣ ಹಾಗೂ ವಸತಿ...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಕರವೇ ಸಿಂಹ ಸೇನೆ ಆಗ್ರಹ

ರಾಜ್ಯದ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ...