ರಾಯಚೂರು | ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಶಾಲೆ ಮುಚ್ಚುವಿಕೆ; ಗ್ರಾಮಸ್ಥರು, ವಿದ್ಯಾರ್ಥಿಗಳು ಪ್ರತಿಭಟನೆ

Date:

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಲಿಂಗಸುಗೂರು ತಾಲ್ಲೂಕಿನ ಹೀರೆಹೆಸರೂರು ಸರ್ಕಾರಿ ಶಾಲೆಯನ್ನು ಮುಚ್ಚುವುದನ್ನು ವಿರೋಧಿಸಿ ಊರಿನ ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳು ಶಾಲೆಯನ್ನು ಉಳಿಸಬೇಕು ಎಂದು ಪ್ರತಿಭಟನೆ ನಡೆಸಿದರು.

ಎಐಡಿಎಸ್ಒ ನೇತೃತ್ವದಲ್ಲಿ ಗ್ರಾಮಸ್ಥರು ನಮ್ಮ ಊರಿನ ಶಾಲೆಯನ್ನು ವೀಲಿನ ಆಗುವುದಕ್ಕೆ ಬಿಡುವುದಿಲ್ಲ ಹಾಗೂ ನಮ್ಮ ಶಾಲೆ ಉಳಿಸಿ ಎಂದು ಘೋಷಣೆ ಕೂಗುವ ಮೂಲಕ ಆಗ್ರಹಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಒ ರಾಜ್ಯಾಧ್ಯಕ್ಷ ಶರಣಪ್ಪ ಉದ್ಬಾಳ ಅವರು ಮಾತನಾಡಿ, ಸರ್ಕಾರ KPS ಮ್ಯಾಗ್ನೆಟ್ ಹೆಸರಿನಲ್ಲಿ ಗ್ರಾಮ ಪಂಚಾಯಿತಿಗೊಂದು ಸರ್ಕಾರಿ ಶಾಲೆ ಮಾಡುತ್ತೇವೆ ಎಂದು ಹೇಳಿ 40,000 ಕ್ಕಿಂತ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಹೊರಟಿದೆ. ಇದರಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಹುದು ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೀರೆಹೆಸರೂರು ಗ್ರಾಮದ ಶಾಲೆಯಲ್ಲಿ 60 ಕ್ಕಿಂತ ಹೆಚ್ಚು ಮಕ್ಕಳು ಓದುತ್ತಿದ್ದಾರೆ. ಈ ಶಾಲೆಗಳು ಉಳಿದರೆ ಮಾತ್ರ ಅವರಿಗೆ ಶಿಕ್ಷಣ,ಆದರೆ ಸರ್ಕಾರ ಈ ಶಾಲೆಯನ್ನು ಮುಚ್ಚಿ ಚಿಕ್ಕಹೆಸರೂರು ಶಾಲೆಗೆ ವೀಲಿನವಾದರೆ, ಮಕ್ಕಳು ಅಲ್ಲಿಗೆ ಹೋಗಿ ಓದಬೇಕು ಎಂದರೆ ಸಮಸ್ಯೆಗಳು ಉಂಟಾಗುತ್ತದೆ. ಸರ್ಕಾರ ವ್ಯವಸ್ಥಿತವಾಗಿ ಶಿಕ್ಷಣವನ್ನು ರೈತರ, ಬಡವರ , ಕೂಲಿ ಕಾರ್ಮಿಕರ ಮಕ್ಕಳಿಂದ ಶಿಕ್ಷಣವನ್ನು ಕಸಿಯುವ ಹುನ್ನಾರ ಮಾಡುತ್ತಿದೆ ಎಂದರು.

ಶಿಕ್ಷಣ ಸಚಿವರು ನಮ್ಮ ರಕ್ತದಲ್ಲಿ ಕನ್ನಡವಿದೆ ಒಂದೇ ಒಂದು ಸರ್ಕಾರಿ ಶಾಲೆಯನ್ನು ಕೂಡ ಮುಚ್ಚುವುದಿಲ್ಲ ಎಂದು ಸದನದಲ್ಲಿ ಹೇಳಿ ಹಿಂಬಾಗಿಲಿನಿಂದ ಆದೇಶವನ್ನು ಹೊರಡಿಸಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದ್ದಾರೆ. ಕಳೆದ ಎಂಟು ವರ್ಷಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಅಧಿಕಾರ ನಡೆಸಿವೆ. ಈ ಎಂಟು ವರ್ಷಗಳಲ್ಲಿ ಮೂರುವರೆ ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಅನುಮತಿ ನೀಡಿದ್ದಾರೆ ಎಂದು ಹೇಳಿದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿ ಮಾಡದೆ ಖಾಸಗಿ ಶಾಲೆಗಳ ಪರ ಕೆಲಸ ಮಾಡಿದ್ದಾರೆ. 60,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇವೆ.
21,000ಕ್ಕೂ ಹೆಚ್ಚಿಗೆ ಕೊಠಡಿಗಳು ದುರಸ್ತಿಯಾಗಿಲ್ಲ. ಇನ್ನೂ ಹಲವಾರು ಸಮಸ್ಯೆಗಳು ಸರ್ಕಾರಿ ಶಾಲೆಗಳಲ್ಲಿವೆ. ಈ ಸಮಸ್ಯೆಗಳನ್ನು ಮೊದಲು ಪರಿಹರಿಸಬೇಕೆಂದು ಆಗ್ರಹಿಸಿದರು.

ನಂತರ ಗ್ರಾಮದ ಹಿರಿಯರಾದ ಸಿದ್ದಪ್ಪರವರು ಮಾತನಾಡಿ, ರೈತರು,ಕಾರ್ಮಿಕರು ಮಕ್ಕಳು ಸ್ವಲ್ಪವಾದರೂ ಶಿಕ್ಷಣ ತೆಗೆದುಕೊಳ್ಳಬೇಕೆಂದರೆ ಸರ್ಕಾರಿ ಶಾಲೆ ಬೇಕೇ ಬೇಕು. ನಾವು ಯಾವುದೇ ಕಾರಣಕ್ಕೂ ನಮ್ಮೂರಿನ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ, ಸರ್ಕಾರ ಶಾಲೆಗಳನ್ನು ಮುಚ್ಚಬಾರದು ಹಾಗೇನಾದ್ರೂ ಮುಚ್ಚಲು ಬಂದ್ರೆ ಸರ್ಕಾರ ದುಡಿಯುವ ಜನಗಳ ಆಕ್ರೋಶ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಪೆಟ್ರೋಲ್ ಬಂಕ್ ಮತ್ತು ಗ್ಯಾಸ್ ಏಜೆನ್ಸಿ ಮಾಲೀಕರಿಗೆ ಕಟ್ಟುನಿಟ್ಟಿನ ಪೊಲೀಸ್ ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪ್ರತಿಭಟನೆಯಲ್ಲಿ AIDSO ಜಿಲ್ಲಾ ಕಾರ್ಯದರ್ಶಿ ಬಸವರಾಜ್,AIDYO ಸಂಘಟನಾಕಾರರಾದ ಬಾಲಾಜಿ, ಚಂದ್ರಶೇಖರ್ ಪೋಷಕರಾದ ಅಮರೇಶ್, ಶರಣಬಸವ, ಚನ್ನಬಸವ, ಬಸವರಾಜ್, ಶರಣಯ್ಯ, ರಮೇಶ್, ಶಿವ ಹಾಗೂ ಗ್ರಾಮದ ಮಹಿಳೆಯರು ಸೇರಿದಂತೆ ನೂರಾರು ಪೋಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...