2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ರಾಯಚೂರು ಜಿಲ್ಲೆಗೆ ಒಟ್ಟಾರೆ ಶೇ 74.09ರಷ್ಟು ಫಲಿತಾಂಶ ಬಂದಿದೆ. ರಾಜ್ಯದ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಜಿಲ್ಲೆ ಸ್ಥಾನ 31ನೇ ಪಡೆದಿದೆ.
2026 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿದ್ಯಾನಿಧಿ ಕಾಲೇಜು ವಿದ್ಯಾರ್ಥಿ ವಿಕಾಸ್ ಅವರು ಜಿಲ್ಲೆಗೆ ಅತಿ ಹೆಚ್ಚು ಪಡೆದು ಸಾಧನೆ ಮಾಡಿದ್ದಾರೆ. ಅವರು ಒಟ್ಟು (594)ಅಂಕಗಳನ್ನು ಗಳಿಸಿ ಈ ಸಾಧನೆ ಮಾಡಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಒಟ್ಟು 17,497 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ ಪಾಸಾದ ವಿದ್ಯಾರ್ಥಿಗಳು 12,967
ಶೇ.74.21 ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 8581 ವಿದ್ಯಾರ್ಥಿಗಳಲ್ಲಿ 5294 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 3480 ವಿದ್ಯಾರ್ಥಿಗಳಲ್ಲಿ 2743 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 78.82ರಷ್ಟು ಫಲಿತಾಂಶ ಬಂದಿದೆ. ಇನ್ನು ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದವರು 5436 ಈ ಪೈಕಿ ಉತ್ತೀರ್ಣರಾದವರು 4930 ವಿದ್ಯಾರ್ಥಿಗಳು. ವಿಜ್ಞಾನ ವಿಭಾಗದ ಒಟ್ಟು ಫಲಿತಾಂಶ ಶೇ90.69 ರಷ್ಟು ಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಆಸ್ಪತ್ರೆಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಇನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶೇ 71.48ರಷ್ಟು ಫಲಿತಾಂಶ ಮೇಲುಗೈ ಸಾಧಿಸಿದ್ದಾರೆ. ನಗರ ಪ್ರದೇಶದ ವಿದ್ಯಾರ್ಥಿಗಳು ಶೇ74.78 ರಷ್ಟು ಸಾಧನೆ ಮಾಡಿದ್ದಾರೆ. ಈ ಬಾರಿಯೂ ಬಾಲಕಿಯರು ಶೇ72.36ರಷ್ಟು ಫಲಿತಾಂಶ ಗಳಿಸುವ ಮೂಲಕ ಜಿಲ್ಲೆಯಲ್ಲಿ ಶೇ 72.36ರಷ್ಟು ಫಲಿತಾಂಶ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ 56.34ರಷ್ಟು ಫಲಿತಾಂಶ ಬಾಲಕರದ್ದಾಗಿದೆ.




