ರಾಯಚೂರು | ಸುಲ್ತಾನಪುರದಲ್ಲಿ ಕ್ಷೀರಭಾಗ್ಯ ಯೋಜನೆಯ 37 ಹಾಲಿನ ಪಾಕೆಟ್‌ಗಳ ಸಂಗ್ರಹ: ತನಿಖೆಗೆ ಅಧಿಕಾರಿಗಳ ಸೂಚನೆ

Date:

ರಾಯಚೂರು ತಾಲೂಕಿನ ಸುಲ್ತಾನಪುರ ಗ್ರಾಮದ ಮನೆಯೊಂದರಲ್ಲಿ ಕ್ಷೀರಭಾಗ್ಯ ಯೋಜನೆಗೆ ಸಂಬಂಧಿಸಿದ 37 ಹಾಲಿನ ಪಾಕೆಟ್‌ಗಳನ್ನು ಸಂಗ್ರಹಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆ ಕುರಿತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

ಸಾರ್ವಜನಿಕರಿಂದ ಮಾಹಿತಿ ಪಡೆದ ಪೊಲೀಸರು ಸುಲ್ತಾನಪುರ ಗ್ರಾಮದ ಮನೆಗೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ 37 ಹಾಲಿನ ಪಾಕೆಟ್‌ಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ ಕುರಿತು ಪ್ರತಿಕ್ರಿಯಿಸಿದ ಕೆಎಂಎಫ್ ಗುತ್ತಿಗೆದಾರ ಕಣನ್ ಪ್ರಭು, ಇದು ಯಾವುದೇ ಅಕ್ರಮ ಸಂಗ್ರಹವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆಎಂಎಫ್ ವತಿಯಿಂದ ಟೆಂಡರ್ ಪಡೆದಿರುವ ಗುತ್ತಿಗೆದಾರರು ಬಳ್ಳಾರಿಯಿಂದ ಹಾಲಿನ ಪಾಕೆಟ್‌ಗಳನ್ನು ಸಾಗಣೆ ಮಾಡುತ್ತಿದ್ದು, ಅದರ ಭಾಗವಾಗಿಯೇ ಅವುಗಳನ್ನು ಇರಿಸಲಾಗಿತ್ತು ಎಂದು ತಿಳಿಸಿದ್ದಾರೆ.

ತಾಲೂಕು ಪಂಚಾಯಿತಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅಮರೇಗೌಡ ಮಾಧ್ಯಮದವರ ಜೊತೆ ಮಾತನಾಡಿ, ಕ್ಷೀರಭಾಗ್ಯ ಯೋಜನೆಗೆ ಅಗತ್ಯವಿರುವ ಹಾಲಿನ ಪ್ರಮಾಣವನ್ನು ಜಿಲ್ಲಾ ಪಂಚಾಯಿತಿ ಮೂಲಕ ಕೆಎಂಎಫ್‌ಗೆ ಬೇಡಿಕೆಯಾಗಿ ಸಲ್ಲಿಸಲಾಗುತ್ತದೆ. ಅದರಂತೆ ಕೆಎಂಎಫ್ ಅಧಿಕೃತ ಮಳಿಗೆಗಳು ಹಾಗೂ ವಾಹನಗಳ ಮೂಲಕ ಶಾಲೆಗಳಿಗೆ ಹಾಲಿನ ಪಾಕೆಟ್‌ಗಳನ್ನು ಪೂರೈಸುತ್ತದೆ ಎಂದು ವಿವರಿಸಿದರು.

ಶಾಲೆಗಳಿಗೆ ಹಂಚಿಕೆ ಮಾಡಿದ ಬಳಿಕ ಉಳಿದ ಹಾಲಿನ ಪಾಕೆಟ್‌ಗಳನ್ನು ಕೆಎಂಎಫ್‌ನ ಗೋದಾಮಿನಲ್ಲೇ ಸಂಗ್ರಹಿಸಿಡಬೇಕು ಎಂಬುದು ನಿಯಮವಾಗಿದೆ. ಖಾಸಗಿ ಮನೆ ಅಥವಾ ಶೆಡ್‌ನಲ್ಲಿ ಹಾಲಿನ ಪಾಕೆಟ್‌ಗಳನ್ನು ಯಾರು ಹಾಗೂ ಯಾವ ಉದ್ದೇಶಕ್ಕಾಗಿ ಸಂಗ್ರಹಿಸಿದ್ದಾರೆ ಎಂಬ ಕುರಿತು ಸಂಪೂರ್ಣ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಘಟನೆ ಕುರಿತು ಕೆಎಂಎಫ್ ವ್ಯವಸ್ಥಾಪಕರಿಂದ ಸಮಗ್ರ ವರದಿ ಪಡೆಯಲಾಗುತ್ತಿದ್ದು, ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...