ರಾಯಚೂರು | ಜನರ ಸೇವೆಯೇ ನನ್ನ ರಾಜಕೀಯದ ಉದ್ದೇಶ: ಶ್ರೀದೇವಿ ರಾಜಶೇಖರ ನಾಯಕ

Date:

ರಾಜಕಾರಣವು ವೈಯಕ್ತಿಕ ಲಾಭಕ್ಕಾಗಿ ಅಲ್ಲ, ಜನಸೇವೆಯ ಉದ್ದೇಶದಿಂದ ನಡೆಯಬೇಕು. ಜನರ ಕಲ್ಯಾಣಕ್ಕಾಗಿ ಅಧಿಕಾರ ಇರಲಿ ಅಥವಾ ಇಲ್ಲದಿರಲಿ ನಿರಂತರವಾಗಿ ಶ್ರಮಿಸುತ್ತಿದ್ದೇನೆ ಎಂದು ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಶ್ರೀದೇವಿ ರಾಜಶೇಖರ ನಾಯಕ ಹೇಳಿದರು.

- Advertisement -

ಪಟ್ಟಣದ ತಮ್ಮ ನಿವಾಸದಲ್ಲಿ ಮಂಗಳವಾರ ಕೊಪ್ಪರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ರಾಮನಾಳ ಗ್ರಾಮದ 50ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಸಂದರ್ಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಯಾವುದೇ ನೊಂದ ವ್ಯಕ್ತಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸದಾ ಪ್ರಯತ್ನಿಸುತ್ತಿದ್ದು, ತಾಲೂಕು ಹಾಗೂ ಗ್ರಾಮಗಳ ಸಮಗ್ರ ಅಭಿವೃದ್ಧಿಯೇ ತಮ್ಮ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು. ಜನಸಾಮಾನ್ಯರಿಗೆ ಯಾವುದೇ ಸಮಸ್ಯೆಗಳಿದ್ದರೂ ತಮ್ಮನ್ನು ಸಂಪರ್ಕಿಸಿದರೆ ಸಾಧ್ಯವಾದ ಮಟ್ಟಿಗೆ ಪರಿಹಾರ ಕಲ್ಪಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ದೇಶದ ಜನರ ಸೇವೆಗೆ ಸದಾ ಬದ್ಧವಾಗಿರುವ ಪಕ್ಷವಾಗಿದೆ. ಕ್ಷೇತ್ರದ ಜನರ ನಿರೀಕ್ಷೆಗಳಿಗೆ ಪ್ರಸ್ತುತ ಶಾಸಕರಿಂದ ಸಮರ್ಪಕ ಸ್ಪಂದನೆ ದೊರೆಯುತ್ತಿಲ್ಲ ಎಂದು ಆರೋಪಿಸಿದ ಅವರು, ಜಾತಿ-ಧರ್ಮ ಭೇದವಿಲ್ಲದೆ ಎಲ್ಲರೊಂದಿಗೆ ಸಮಾನವಾಗಿ ಕೆಲಸ ಮಾಡುವ ನಾಯಕತ್ವವನ್ನು ತಾವು ಹೊಂದಿದ್ದು, 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಈಗಿನಿಂದಲೇ ಸಂಘಟಿತವಾಗಿ ಶ್ರಮಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೃಷಿ ಇಲಾಖೆ ನೇಮಕಾತಿಯಲ್ಲಿ ನಿಯಮ ಉಲ್ಲಂಘನೆ ಆರೋಪ: ಕೆಇಎ ವಿರುದ್ಧ ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆ

ಈ ಸಂದರ್ಭದಲ್ಲಿ ಶರಣಗೌಡ ಪಾಟೀಲ್, ಶರಣಪ್ಪ ನಾಯಕ, ಹುಸಾಮಾನ್ ಸಾಬ್, ಬಸವಲಿಂಗಪ್ಪ, ಸಾಬಣ್ಣ ಹೂಗಾರ್, ಶರೀಪ್ ಸಾಬ್, ತಿಮ್ಮಣ್ಣ ನಾಯಕ, ಹೊನ್ನಪ್ಪ, ಲಿಂಗಣ್ಣ ನಾಯಕ, ಮುದ್ದಣ್ಣ ನಾಯಕ, ರಾಮನಗೌಡ ದೊರೆ, ಅಭಿಷೇಕ್ ಪೂಜಾರಿ, ಮೌನೇಶ್ ನಾಯಕ, ಶಿವರಾಜ್ ಗುಜಪ್, ಜಯಪ್ಪ, ಹನುಮಂತ ಶಿವಂಗಿ, ಪ್ರಭು ಕಾಡೆ, ನಿಂಗಪ್ಪ ಸೇರಿದಂತೆ ಪಕ್ಷದ ಮುಖಂಡರು, ಹಿರೇಬೂದುರು ಗ್ರಾಮದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...