ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

Date:

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ 11 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಬೋರ್‌ವೆಲ್‌ಗಳನ್ನು ಕೊರೆಸಲಾಗಿದ್ದು, ಅಗತ್ಯವಿರುವ ಕಡೆ ನೀರಿನ ಟ್ಯಾಂಕರ್‌ಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸಲಾಗುತ್ತಿದೆ. ಹಲವೆಡೆ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ. ಪಿಡಿ ಖಾತೆಯಿಂದ ಮತ್ತಷ್ಟು ಅನುದಾನ ತರಲಾಗುವುದು. ಸಂಬಂಧಿಸಿದ ಇಲಾಖೆಯ ಸಚಿವರೊಂದಿಗೆ ಚರ್ಚಿಸಿ ಇನ್ನೂ ಅಗತ್ಯವಿದ್ದಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದು ಸಚಿವ ಡಾ. ಅಜಯ್ ಸಿಂಗ್ ಹೇಳಿದರು.

- Advertisement -

ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಬರ ಪರಿಸ್ಥಿತಿ ಕುರಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆಯ ಕುರಿತು ವಾಸ್ತವ ಪರಿಸ್ಥಿತಿಯನ್ನು ಅರಿತು ಸಮಸ್ಯೆ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಸಭೆಯಲ್ಲಿ ಶಾಸಕರಾದ ಬಸನಗೌಡ ದದ್ದಲ್, ಹಂಪನಗೌಡ ಬಾದರ್ಲಿ, ಬಸನಗೌಡ ತುರ್ವಿಹಾಳ, ಹಂಪಯ್ಯ ನಾಯಕ ಸಾಹುಕಾರ ಅವರು ತಮ್ಮ ಕ್ಷೇತ್ರಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಹಾಗೂ ವಾಸ್ತವ ಪರಿಸ್ಥಿತಿಯನ್ನು ಸಭೆಯ ಗಮನಕ್ಕೆ ತಂದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಸಂಬಂಧಿಸಿದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಅಧಿಕಾರಿಗಳು ಖುದ್ದಾಗಿ ಗ್ರಾಮಗಳಿಗೆ ಭೇಟಿ ನೀಡಬೇಕು. ಕಚೇರಿಯಲ್ಲಿ ಕುಳಿತು ಕಡತಗಳನ್ನು ಸಿದ್ಧಪಡಿಸುವ ಬದಲು ವಾಸ್ತವ ಪರಿಸ್ಥಿತಿಯನ್ನು ಅರಿತು ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದರು.

ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಯುವ ಸಂದರ್ಭದಲ್ಲಿ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ನೀಡಿದ ಮಾಹಿತಿಗೆ ಶಾಸಕರಾದ ಬಸನಗೌಡ ದದ್ದಲ್, ಹಂಪಯ್ಯ ನಾಯಕ ಹಾಗೂ ಕರೆಮ್ಮ ಜಿ. ನಾಯಕ ಅವರು ಅತೃಪ್ತಿ ವ್ಯಕ್ತಪಡಿಸಿದರು. ಅಧಿಕಾರಿಗಳು ಕೊಠಡಿಯಲ್ಲಿ ಕುಳಿತು ವರದಿ ಸಿದ್ದಪಡಿಸಿದ್ದಾರೆ. ವಾಸ್ತವವಾಗಿ ಯಾವ ರೈತರ ಬಳಿ ಮೇವಿನ ಕೊರತೆಯಿಂದ ಜಾನುವಾರುಗಳಿಗೆ ಸಮಸ್ಯೆ ಉಂಟಾಗಿದೆ ಎಂಬುದನ್ನು ಪರಿಶೀಲಿಸಿಲ್ಲ. ರೈತರು ಪಕ್ಕದ ರಾಜ್ಯಗಳಿಗೆ ತೆರಳಿ ಮೇವು ತರುತ್ತಿದ್ದಾರೆ. ಸಭೆಗೆ ಸುಳ್ಳು ಮಾಹಿತಿ ನೀಡಿ ದಿಕ್ಕು ತಪ್ಪಿಸಬಾರದು. ತಪ್ಪು ಮಾಹಿತಿ ನೀಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹಂಪನಗೌಡ ಬಾದರ್ಲಿ, ಶಾಸಕಿ ಕರೆಮ್ಮ ಜಿ. ನಾಯಕ ಸೇರಿದಂತೆ ಹಲವರು ಒತ್ತಾಯಿಸಿದರು.

ವಿಧಾನ ಪರಿಷತ್‌ ಸದಸ್ಯ ಎನ್.ಎಸ್. ಬೋಸರಾಜು ಮಾತನಾಡಿ, ಜೋಳ ಖರೀದಿ ಕೇಂದ್ರಗಳ ಮೂಲಕ ಜೋಳ ಮಾರಾಟ ಮಾಡಿದ ರೈತರಿಗೆ ಬಾಕಿ ಹಣ ಪಾವತಿಯಾಗದಿರುವ ಕುರಿತು ಈಗಾಗಲೇ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಹಣ ಪಾವತಿಸಲಾಗುವುದು ಎಂದು ತಿಳಿಸಿದರು.

ತುಂಗಭದ್ರಾ ಎಡದಂಡೆ ಕಾಲುವೆಯ ಮೇಲ್ಬಾಗ ಹಾಗೂ ಕೆಳಭಾಗದ ರೈತರಿಗೂ ನೀರು ತಲುಪಬೇಕು. ನೀರಾವರಿ ಸಲಹಾ ಸಮಿತಿಯ ತೀರ್ಮಾನದಂತೆ ಎಲ್ಲರಿಗೂ ನ್ಯಾಯ ಒದಗಿಸಬೇಕು. ಅಕ್ರಮ ನೀರಾವರಿ ತಡೆಯಲು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಇಲಾಖೆ ಕೈಗೊಳ್ಳುವ ತೀರ್ಮಾನಕ್ಕೆ ಎಲ್ಲರೂ ಸಹಕಾರ ನೀಡಬೇಕು. ಯಾರೂ ಅಧಿಕಾರ ಚಲಾಯಿಸಿ ಅಥವಾ ಒತ್ತಡ ಹೇರಿ ಇದಕ್ಕೆ ಅಡ್ಡಿಪಡಿಸಬಾರದು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಜಿಲ್ಲಾಧಿಕಾರಿ ಪೂವಿತಾ ಎಸ್. ಮಾತನಾಡಿ, ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಲಾಶಯದ ನೀರಿಗೆ ಮೊದಲು ಕುಡಿಯುವ ನೀರಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ. ನೀರಾವರಿ ಇಲಾಖೆ ಅಧಿಕಾರಿಗಳು ವಾಸ್ತವ ಪರಿಸ್ಥಿತಿಯನ್ನು ಗಮನಿಸಿ ಆಡಳಿತಕ್ಕೆ ಸೂಕ್ತ ಸಲಹೆ ನೀಡಬೇಕು. ಮೇಲ್ಟಾಗ, ಕೆಳಭಾಗ ಹಾಗೂ ಕುಡಿಯುವ ನೀರಿಗೆ ಅವಲಂಬಿತ ಪ್ರದೇಶಗಳಿಗೆ ಆದ್ಯತೆ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಉಪಕಾಲುವೆಗಳನ್ನು ಬಂದ್‌ ಮಾಡುವಂತೆ ಆದೇಶಿಸಲಾಗಿದೆ. ಆದರೆ ರಸ್ತೆಗಿಳಿದು ಶಾಸಕರ ನೇತೃತ್ವದಲ್ಲಿ ಹೋರಾಟ ನಡೆಸಿದರೆ ಕರ್ತವ್ಯ ನಿರ್ವಹಿಸುವಲ್ಲಿ ಸಮಸ್ಯೆಯಾಗುತ್ತದೆ ಎಂದು ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿಯಲ್ಲಿ ₹7 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ:ಇಬ್ಬರು ಜೈಲಿಗೆ!

ಅಬಕಾರಿ ಜಂಟಿ ಆಯುಕ್ತರು ಜಾರಿ ಮತ್ತು ತನಿಖೆ ಬೆಂಗಳೂರು ಗ್ರಾಮಾಂತರ ವಿಭಾಗ...

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ 50 ಸಾವಿರ ದಂಡ!

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ....

ತೀರ್ಥಹಳ್ಳಿ | ಮತದಾರರ ಪಟ್ಟಿ ಕುರಿತು ಬಿಜೆಪಿ ದೂರು; ಅರ್ಹರ ಹೆಸರು ತೆಗೆಯದಂತೆ ಕಾಂಗ್ರೆಸ್ ಆಗ್ರಹ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ, ಸುರಳಿ–ಬಾಚ್ಚೆಹಳ್ಳಿ ಗ್ರಾಮದ ಭಾಗ ಸಂಖ್ಯೆ 186ಕ್ಕೆ ಸಂಬಂಧಿಸಿದ...