ರಾಯಚೂರು | ಶಂಕರಾಚಾರ್ಯರ ಕಾರ್ಯ ಇಂದಿಗೂ ಶಾಶ್ವತ; ಶಾಸಕ ಶಿವರಾಜ ಪಾಟೀಲ್

Date:

ಆದಿ ಶಂಕರಾಚಾರ್ಯರು ಸನಾತನ ಧರ್ಮ ರಕ್ಷಣೆಗಾಗಿ ಅವರು ಮಾಡಿದ ಮಹಾನ್ ಕಾರ್ಯ ಇಂದಿಗೂ ಶಾಶ್ವತವಾಗಿದೆ. ಸಹಸ್ರಾರು ವರ್ಷಗಳ ನಂತರವು ಅವರು ಮಾಡಿದ ಕಾರ್ಯ ಮಹತ್ವದಾಗಿದೆ ಎಂದು ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್ ಅವರು ಹೇಳಿದರು.

- Advertisement -

ಏಪ್ರಿಲ್ 21ರ ಮಂಗಳವಾರ ದಂದು ಸಂಜೆ ನಗರದ ಗಾಜಗಾರಪೇಟೆಯ ಶೃಂಗೇರಿ ಶಂಕರ ಮಠದ ಆವರಣದಲ್ಲಿ ಜಿಲ್ಲಾಡಳಿ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ‌ ಹಮ್ಮಿಕೊಳ್ಳಲಾಗಿದ್ದ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ನಾವು ಹಿಂದೂ ಎಂದು ಹೇಳಿಕೊಳ್ಳಲು ಶಂಕರಾಚಾರ್ಯರು ಮೂಲಕಾರಣ ಆಗಿದ್ದಾರೆ. ರಾಯಚೂರಿನ ಶೃಂಗೇರಿ ಶಂಕರ ಮಠಕ್ಕೆ ಬೇಕಾಗುವ ಅಗತ್ಯ ಸೌಕರ್ಯಗಳನ್ನು ಒದಗಿಸಲು ಶ್ರಮಿಸಲಾಗುವುದು. ಈಗಾಗಲೇ ಸಮಾಜದ ಆನೇಕ ಅಭಿವೃದ್ಧಿ ಕೆಲಸ ಕಾರ್ಯವನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಅತ್ಯುತ್ತಮ ಕೆಲಸ ಕಾರ್ಯಗಳನ್ನು ‌ಮಾಡಲಾಗುತ್ತದೆ ಎಂದರು.

ಉಪನ್ಯಾಸಕರಾಗಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರಿನ ಧಾರ್ಮಿಕ ಉಪನ್ಯಾಸಕರು ಹಾಗೂ ಪುರೋಹಿತರಾದ ಸುಪ್ರತೀಕ ಭಟ್ ಅವರು ಮಾತನಾಡಿ, ಭಾರತದ ಶ್ರೇಷ್ಠ ಆಧ್ಯಾತ್ಮಿಕ ನಾಯಕ ತತ್ವಜ್ಞಾನಿಗಳಲ್ಲಿ ಆದಿ ಶಂಕರಾಚಾರ್ಯರು ಒಬ್ಬರು. ಅದ್ವೈತ ವೇದಾಂತದ ಅಡಿಪಾಯವನ್ನು ಹಾಕಿ, ಸಾಂಸ್ಕೃತಿಕ ಮತ್ತು ಧಾರ್ಮಿಕ ಅವನತಿಯ ಸಮಯದಲ್ಲಿ ಹಿಂದೂ ಧರ್ಮವನ್ನು ಪುನರುಜ್ಜಿವನಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು ಎಂದು ಹೇಳಿದರು.

ಇಂದಿನ ಕೇರಳದ ಕಾಲಡಿಯಲ್ಲಿ ಜನಿಸಿದ್ದ ಆದಿ ಶಂಕರಾಚಾರ್ಯರು, ಭಾರತೀಯ ತತ್ವಶಾಸ್ತ್ರದ ಶ್ರೇಷ್ಠ ವ್ಯಕ್ತಿಯಲ್ಲಿ ಒಬ್ಬರು. ಶಂಕರಾಚಾರ್ಯರು ಮೂರು ಸಲ ಕಾಲ್ನಡಿಗೆಯಲ್ಲಿ ದೇಶವನ್ನು ಸುತ್ತಿದ್ದರು ಎಂದರು. ಅದ್ವೈತ ಸಿದ್ಧಾಂತದ ಮೂಲಕ ಧರ್ಮದ ಹೆಸರಿನಲ್ಲಿ ಹರಡುತ್ತಿದ್ದ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ ಕೆಲಸ ಮಾಡಿದ ಶಂಕರಾಚಾರ್ಯರು, ಆದ್ಯ ಗುರುವಾಗಿ ಪೂಜಿತರಾದರು ಎಂದರು. ಕಾರ್ಯಕ್ರಮಕ್ಕೂ ಮೊದಲು ಗಾಜಗಾರಪೇಟೆಯ ಶೃಂಗೇರಿ ಶಂಕರ ಮಠದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಶಂಕರಾಚಾರ್ಯರ ಭಾವಚಿತ್ರದ ಮೆರವಣಿಗೆ ಜರುಗಿತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ದಶಕಗಳಿಂದ ಮುಸ್ಲಿಮರಿಗೆ ಸಿಗದ MLC ಸ್ಥಾನ: ಈಗಲಾದರೂ ಈಡೇರಿಸುವುದೇ ಕಾಂಗ್ರೆಸ್?

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ತಹಶಿಲ್ದಾರ್ ಪರಶುರಾಮ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಪ್ರಾಣೇಶ್ ಕುಲಕರ್ಣಿ, ಮಹಾನಗರ ಪಾಲಿಕೆಯ ಕಚೇರಿ ವ್ಯವಸ್ಥಾಪಕ ರಾಜು, ಕನ್ನಡ ‌ಮತ್ತು ಸಂಸ್ಕೃತಿ ಇಲಾಖೆಯ ವ್ಯವಸ್ಥಾಪಕ, ಶೈಲಜಾ ಆರ್.ಕುಲಕರ್ಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ದ್ರಾಕ್ಷಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಹ ಕಾರ್ಯದರ್ಶಿ ದಂಡಪ್ಪ ಬಿರಾದಾರ್, ಸಮಾಜದ ಮುಖಂಡರಾದ ಹನುಮಂತ ರಾವ್, ಕೃಷ್ಣಮೂರ್ತಿ ಹೆಬಸೂರು, ಈಶ್ವರ ಹೆಗ್ಗಡೆ, ಶಿವಪ್ರಸಾದ್, ವಸಂತ ರಾವ್, ರಮೇಶ ಕುಲಕರ್ಣಿ, ಜಗನ್ನಾಥ ದೇಸಾಯಿ, ಶಾರದಾ ಮಹಿಳಾ ಮಂಡಳಿ, ಆದಿ ಶಂಕರಾಚಾರ್ಯ ಮಹಿಳಾ ಮಂಡಳಿಯ ಸದಸ್ಯರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ‌ಹಾಗೂ ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ‌ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...