ರಾಯಚೂರು | ಎಸ್ಐಆರ್ ಆರಂಭ: 52,510 ಗಣತಿ ನಮೂನೆಗಳ ವಿತರಣೆ

Date:

ಜೂನ್ 30ರಂದು ಬೆಳಿಗ್ಗೆಯಿಂದ ಸಂಜೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ 52,510 ಗಣತಿ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದೆ. ಇದೇ ವೇಳೆ ಭರ್ತಿ ಮಾಡಿದ ನಮೂನೆಗಳನ್ನು ಸ್ವೀಕರಿಸುವ ಪ್ರಕ್ರಿಯೆಯೂ ಆರಂಭಗೊಂಡಿದೆ. ಮತದಾರರು ತಮ್ಮ ಹೆಸರು, ವಿಳಾಸ, ವಯಸ್ಸು, ಕುಟುಂಬದ ವಿವರ ಸೇರಿದಂತೆ ಎಲ್ಲ ಮಾಹಿತಿಗಳನ್ನು ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳೊಂದಿಗೆ ನಮೂನೆಗಳನ್ನು ಸಲ್ಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

- Advertisement -

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಮಂಗಳವಾರದಿಂದ ಜಿಲ್ಲೆಯಾದ್ಯಂತ ಚಾಲನೆ ನೀಡಲಾಗಿದೆ. ಮತದಾರರ ವಿವರಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡುವ ಉದ್ದೇಶದಿಂದ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 1,853 ಬೂತ್ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅವರ ಕಾರ್ಯಚಟುವಟಿಕೆಗಳ ಮೇಲ್ವಿಚಾರಣೆಗೆ 185 ಬೂತ್ ಮಟ್ಟದ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಪರಿಷ್ಕರಣೆ ಕಾರ್ಯ ನಿಗದಿತ ಅವಧಿಯೊಳಗೆ ಸುಗಮವಾಗಿ ಪೂರ್ಣಗೊಳ್ಳುವಂತೆ ಹಾಗೂ ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ.

ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 17,20,924 ಮತದಾರರು ನೋಂದಾಯಿತರಿದ್ದಾರೆ. ಇವರಿಗಾಗಿ ಅಗತ್ಯವಿರುವ ಎಲ್ಲಾ ಗಣತಿ ನಮೂನೆಗಳನ್ನು ಮುದ್ರಿಸಿ ಸಂಬಂಧಿಸಿದ ಬೂತ್ ಮಟ್ಟದ ಅಧಿಕಾರಿಗಳಿಗೆ ಈಗಾಗಲೇ ವಿತರಿಸಲಾಗಿದೆ. ಅಲ್ಲದೆ, 14,74,829 ಮತದಾರರನ್ನು ಗುರುತಿಸಿ ಮ್ಯಾಪಿಂಗ್ ಕಾರ್ಯವೂ ಪೂರ್ಣಗೊಂಡಿದೆ. ಬಿಎಲ್‌ಒಗಳು ಮನೆಮನೆಗೆ ಭೇಟಿ ನೀಡಿ ಮತದಾರರಿಗೆ ನಮೂನೆಗಳನ್ನು ತಲುಪಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೇವದುರ್ಗ | ಕಟ್ಟಡ ಕುಸಿತ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ನೀಡಲು ದಲಿತ ವಿದ್ಯಾರ್ಥಿ ಪರಿಷತ್ ಒತ್ತಾಯ

ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಅರ್ಹರಾಗಿರುವವರು, ವಿಳಾಸ ಬದಲಾವಣೆ ಮಾಡಿಕೊಂಡಿರುವವರು ಹಾಗೂ ತಮ್ಮ ವಿವರಗಳಲ್ಲಿ ತಿದ್ದುಪಡಿ ಅಗತ್ಯವಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ವೇಳಾಪಟ್ಟಿಯಂತೆ ಗಣತಿ ನಮೂನೆಗಳ ವಿತರಣೆ, ಭರ್ತಿ ಮಾಡಿದ ನಮೂನೆಗಳ ಸಂಗ್ರಹಣೆ ಮತ್ತು ಪರಿಶೀಲನಾ ಕಾರ್ಯ ಹಂತ ಹಂತವಾಗಿ ನಡೆಯಲಿದ್ದು, ಜಿಲ್ಲೆಯ ಎಲ್ಲ ಮತದಾರರು ಬೂತ್ ಮಟ್ಟದ ಅಧಿಕಾರಿಗಳಿಗೆ ಸಹಕರಿಸಿ ಸರಿಯಾದ ಮಾಹಿತಿಯನ್ನು ಒದಗಿಸುವ ಮೂಲಕ ನಿಖರ ಹಾಗೂ ಸಮಗ್ರ ಮತದಾರರ ಪಟ್ಟಿಯ ಸಿದ್ಧತೆಗೆ ಕೈಜೋಡಿಸುವಂತೆ ಜಿಲ್ಲಾ ಚುನಾವಣಾ ಅಧಿಕಾರಿಗಳು ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...