ಎಸ್‌ಐಆರ್ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಅಧಿಕಾರಕ್ಕೆ ಬರಲು ಹುನ್ನಾರ ನಡೆಸುತ್ತಿದೆ. ಎಸ್‌ಐಆರ್ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಎದ್ದೇಳು ಕರ್ನಾಟಕ ರಾಜ್ಯ ಮುಖಂಡ ಕುಮಾರ್ ಸಮತಳ ಹೇಳಿದರು.
ನಗರದ ಕನ್ನಡ ಭವನದಲ್ಲಿ ಎಸ್ ಐ ಆರ್ ವಿರೋಧಿ ಸಮಾಲೋಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಬಿಜೆಪಿ ಅಧಿಕಾರಕ್ಕೆ ಬರಲು ವಿಭಿನ್ನ ತಂತ್ರಗಳನ್ನು ಅನುಸರಿಸುತ್ತಿದೆ. ಗಲಭೆಗಳು, ಹಿಂದುತ್ವ ಅಜೆಂಡಾ ಹಾಗೂ ಜಾತಿಗಳ ನಡುವೆ ಭಿನ್ನತೆ ಉಂಟುಮಾಡುವ ಮೂಲಕ ರಾಜಕೀಯ ಲಾಭ ಪಡೆಯಲಾಗಿದೆ. ಮುಂದಿನ ದಿನಗಳಲ್ಲಿ ಎಸ್‌ಐಆರ್ ಎಂಬ ಕ್ರಮದ ಮೂಲಕ ಮತದಾನದ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರುವ ಯತ್ನ ನಡೆಯುತ್ತಿದೆ ಎಂದು ಅವರು ಶಂಕೆ ವ್ಯಕ್ತಪಡಿಸಿದರು.
2028ರ ಚುನಾವಣೆಯು ಸರಿಯಾಗಿ ನಡೆಯುತ್ತದೆಯೇ ಇಲ್ಲ ಎಂಬುದು ಅನುಮಾನ ಕಾಡುತ್ತಿದೆ. ಜನರ ಮತಹಕ್ಕನ್ನು ಕಸಿಯುವ ಪ್ರಯತ್ನ ನಡೆಯುತ್ತಿದೆ. ದಲಿತರು ಮತ್ತು ಮುಸ್ಲಿಮರ ಮತಗಳನ್ನು ಗುರಿಯಾಗಿಸಲಾಗುತ್ತಿದೆ. ಕಾಂಗ್ರೆಸ್‌ಗೆ ಹೋಗುವ ಮತಗಳನ್ನು ಮೊದಲು ಅಳಿಸಲಾಗುತ್ತಿದೆ. ಯಾರು ಮತ ಹಾಕಬೇಕು ಎಂಬುದನ್ನೇ ಬಿಜೆಪಿ ನಿರ್ಧರಿಸುವ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಸಿದರು.
ಪ್ರಜಾಪ್ರಭುತ್ವವನ್ನು ಉಳಿಸಲು ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಒಂದಾಗಬೇಕು ಎಂದು ಅವರು ಕರೆ ನೀಡಿದರು. ಈ ವಿಷಯದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬಿಸಿಲಿನ ತಾಪ ಹೆಚ್ಚಳ; ಸರ್ಕಾರಿ ಕಚೇರಿ ಸಮಯದಲ್ಲಿ ಎರಡು ತಿಂಗಳ ಬದಲಾವಣೆ
ಕಾರ್ಯಕ್ರಮದಲ್ಲಿ ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ಶರಣು ಮದ್ದಮಗುಡ್ಡಿ, ಕರ್ನಾಟಕ ಜನಶಕ್ತಿ ಮಾರೆಪ್ಪ ಹರವಿ, ಆಂಜನೇಯ ಕುರುಬದೊಡ್ಡಿ, ಭೀಮಣ್ಣ ನಗನೂರು, ಹಿರಿಯ ಹೋರಾಟಗಾರ ಎಂ ಆರ್ ಭೇರಿ, ಕರ್ನಾಟಕ ಪ್ರಾಂತ ರೈತ ಸಂಘ ಡಿ ಎಚ್ ಪೂಜಾರ ಇನ್ನಿತರರು ಇದ್ದರು.




