ರಾಯಚೂರು | ವಸತಿ ಯೋಜನೆಗಳ ಪ್ರಗತಿ ಕುಂಠಿತ; ಗಂಭೀರವಾಗಿ ಪರಿಗಣಿಸುವಂತೆ ಎಚ್ಚರಿಕೆ

Date:

ರಾಯಚೂರು ಜಿಲ್ಲೆಗೆ ನಗರ ಸ್ಥಳೀಯ ಸಂಸ್ಥೆಗಳಿಂದ ಅನುಷ್ಠಾನಗೊಳಿಸಲಾಗಿರುವ ವಸತಿ ಯೋಜನೆಗಳ ಪ್ರಗತಿ ನಿರೀಕ್ಷೆಗಿಂತ ಕುಂಠಿತವಾಗಿದ್ದು, ಗಂಭೀರವಾಗಿ ಪರಿಗಣಿಸಿ ಪ್ರಗತಿ ಮಾಡದಿದ್ದರೆ ಸಂಬಂಧಿಸಿದವರೇ ಹೊಣೆಯಾಗಬೇಕಾಗುತ್ತದೆ ಎಂದು ರಾಜೀವ ಗಾಂಧಿ ವಸತಿ ನಿಗಮದ ಪ್ರಧಾನ ವ್ಯವಸ್ಥಾಪಕ ಪರಶುರಾಮಗೌಡ ಎಚ್ಚರಿಸಿದರು.

- Advertisement -

ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವಸತಿ ಯೋಜನಾವಾರು ಪ್ರಗತಿಯ ಮಾಹಿತಿ ಪಡೆದು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಪ್ರಧಾನ ಮಂತ್ರಿ ಆವಾಜ಼್ ಯೋಜನೆ(ಪಿಎಂಎವೈ-ನಗರ) ಯೋಜನೆಯಡಿ ಜಿಲ್ಲೆಗೆ 11,543 ಮನೆಗಳು ಮಂಜೂರಾಗಿವೆ. 5,167 ಮನೆಗಳನ್ನು ಮಾತ್ರ ಪೂರ್ಣಗೊಳಿಸಲು ಸಾಧ್ಯವಾಗಿದೆ. ಉಳಿದಂತೆ ಜಿಯೋ ಟ್ಯಾಗ್ ಮಾಡುವ ಪ್ರಗತಿಯೂ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಆಯ್ಕೆಯಾದ ಫಲಾನುಭವಿಗಳು ಮನೆ ನಿರ್ಮಾಣದ ಕನಸು ಹೊತ್ತಿದ್ದಾರೆ. ಅವರ ಕನಸು ನನಸು ಮಾಡುವ ಕೆಲಸ ನಗರ ಸ್ಥಳೀಯ ಸಂಸ್ಥೆಗಳಿಂದ ಸಮರ್ಪಕವಾಗಿ ನಡೆದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ರಾಯಚೂರು ನಗರಸಭೆ ವ್ಯಾಪ್ತಿಯಲ್ಲಿ 1801 ಮನೆಗಳು ಮಂಜೂರಾಗಿದ್ದು, 758 ಮನೆಗಳುಮಾತ್ರ ಪೂರ್ಣಗೊಂಡಿವೆ. 450 ಮನೆಗಳು ಇನ್ನೂ ಪ್ರಾರಂಭವೇ ಆಗಿಲ್ಲ. ಉಳಿದವು ವಿವಿಧ ಹಂತದಲ್ಲಿಯೇ ಉಳಿದಿವೆ. ಮನೆ ನಿರ್ಮಾಣದ ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ವರ್ಷ ಬೇಕಾಗುತ್ತದೆ ಎಂದು ಪ್ರಶ್ನಿಸಿದರು.

“ಸಿಂಧನೂರು ನಗರಸಭೆಗೆ 1641 ಮನೆಗಳು ಮಂಜೂರಾಗಿದ್ದು, 710 ಮನೆಗಳು ಮಾತ್ರ ಪೂರ್ಣಗೊಂಡಿವೆ. 762 ಮನೆಗಳು ಇನ್ನೂ ಪ್ರಾರಂಭವೇ ಆಗಿಲ್ಲ. ಬಹುತೇಕ ಲಿಂಗಸೂಗೂರು, ದೇವದುರ್ಗ, ಮುದುಗಲ್, ಸಿರವಾರಗಳ ಪರಸ್ಥಿತಿಯೂ ಭಿನ್ನವಾಗಿಲ್ಲ. ಅನುದಾನ ಲಭ್ಯತೆಯಿದ್ದರೂ ಕಾಮಗಾರಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ವಿಶೇಷ ಆಧ್ಯತೆಯಾಗಿ ಪರಿಗಣಿಸಿ ಪೂರ್ಣಗೊಳಿಸಬೇಕು” ಎಂದು ತಾಕೀತು ಮಾಡಿದರು.

ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಪ್ರಕಾಶ ವಡ್ಡರ ಮಾತನಾಡಿ, “2018ರ ದತ್ತಾಂಶದ ಆಧಾರದ ಮೇಲೆ ಮನೆಗಳನ್ನು ಮಂಜೂರು ಮಾಡಲಾಗಿದೆ. ವಿವಿಧ ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆ ಪೂರ್ಣಗೊಂಡಿದ್ದರೂ ಮನೆಗಳ ನಿರ್ಮಾಣ ಮಾತ್ರ ನಡೆಯುತ್ತಿಲ್ಲ. ವಿಳಂಬವಾದಲ್ಲಿ ಅನುದಾನ ಬಳಕೆ ಸಾಧ್ಯವಾಗುವದಿಲ್ಲ. ಕೂಡಲೇ ಸಂಬಂಧಿಸಿದವರು ಹೆಚ್ಚು ಒತ್ತು ನೀಡಬೇಕು” ಎಂದರು.

ಪಾಲುದಾರಿಕೆಯಲ್ಲಿ ಮನೆಗಳ ನಿರ್ಮಾಣ ಯೋಜನೆ(ಪಿಎಂಎವೈ-ಚ್‌ಪಿ)ಯೋಜನೆ ಅಡಿಯಲ್ಲಿಯೂ ಪ್ರಗತಿ ಕುಂಠಿತವಾಗಿದೆ. ರಾಯಚೂರು ಮತ್ತು ಸಿಂಧನೂರು ನಗರಸಭೆ ಸೇರಿದಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ 8489 ಮನೆಗಳು ಮಂಜೂರು ಮಾಡಲಾಗಿದೆ. ಆದರೆ ಕೇವಲ 2765 ಮನೆಗಳು ಮಾತ್ರ ಪೂರ್ಣಗೊಂಡಿವೆ. 3570ರಷ್ಟು ಮನೆಗಳು ಇನ್ನೂ ಪ್ರಾರಂಭವಾಗಿಲ್ಲ. ಇಷ್ಟೊಂದು ನಿರ್ಲಕ್ಷ್ಯದಿಂದ ನಗರ ಪ್ರದೇಶದ ಜನರಿಗೆ ವಸತಿ ಯೋಜನೆಗಳು ತಲುಪದಂತಾಗಿದೆ. ಕೂಡಲೇ ಸಂಬಂಧಿಸಿದವರು ಕಾಲಮಿತಿಯಲ್ಲಿ ಅನುದಾನ ಬಳಕೆ, ಗುಣಮಟ್ಟದ ಮನೆ ನಿರ್ಮಾಣಕ್ಕೆ ಒತ್ತು ನೀಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕರ್ನಾಟಕ ಪೊಲೀಸ್‌ ದೇಶದಲ್ಲಿಯೇ ಅತ್ಯುತ್ತಮ ಹಾಗೂ ಆಧುನಿಕ ಸೌಲಭ್ಯ ಹೊಂದಿದೆ: ಗೃಹ ಸಚಿವ

ಸಭೆಯಲ್ಲಿ ಸಹಾಯಕ ಪ್ರಧಾನ ವ್ಯವಸ್ಥಾಪಕ ದತ್ತಾತ್ರೇಯ ವಿ ಸಿಂಧಗಿ, ಯೋಜನಾಧಿಕಾರಿ ಪ್ರಕಾಶ ವಡ್ಡರ, ನಗರಾಭಿವೃದ್ದಿ ಯೋಜನಾ ಅಧಿಕಾರಿ ಸೇರಿದಂತೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು, ತಾಂತ್ರಿಕ ಸಿಬ್ಬಂದಿಗಳು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...