ರಾಯಚೂರು | ಬಿತ್ತನೆ ಬೆಳೆಗಳು ಒಣಗಿ ನಷ್ಟ: ಪ್ರತಿ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಕರವೇ ಒತ್ತಾಯ

Date:

ಮುಂಗಾರು ಮಳೆ ತೀವ್ರ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸುವಂತೆ ಆಗ್ರಹಿಸಿ, ದೇವದುರ್ಗ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ವತಿಯಿಂದ ಮುಖ್ಯಮಂತ್ರಿ ಅವರಿಗೆ ಉದ್ದೇಶಿಸಿದ ಮನವಿ ಪತ್ರವನ್ನು ತಹಶೀಲ್ದಾರರ ಮೂಲಕ ಸಲ್ಲಿಸಿದರು.

- Advertisement -

ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಬಿತ್ತನೆ ಮಾಡಿದ ಬೆಳೆಗಳು ನೀರಿನ ಅಭಾವದಿಂದ ಒಣಗಿ ಹೋಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯನ್ನು ಕೂಡಲೇ ಬರಗಾಲ ಪೀಡಿತ ಜಿಲ್ಲೆಯೆಂದು ಘೋಷಿಸಿ, ರೈತರ ಸಾಲವನ್ನು ಮನ್ನಾ ಮಾಡಬೇಕು ಹಾಗೂ ಪ್ರತಿ ಎಕರೆಗೆ ₹50 ಸಾವಿರ ಪರಿಹಾರವನ್ನು ಸರ್ಕಾರ ಘೋಷಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಸುಮಾರು ಶೇ.40ರಷ್ಟು ರೈತರು ಇನ್ನೂ ಬಿತ್ತನೆ ಕಾರ್ಯ ಕೈಗೊಳ್ಳಲು ಸಾಧ್ಯವಾಗಿಲ್ಲ. ಅಲ್ಲದೆ, ನಾರಾಯಣಪುರ ಬಲದಂಡೆ ಕಾಲುವೆಗೆ ತಕ್ಷಣ ನೀರು ಹರಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಹೊಸೂರು ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ವತಿಯಿಂದ ನಡೆಯುತ್ತಿರುವ ರಸ್ತೆ ಕಾಮಗಾರಿ ಕಳಪೆ ಗುಣಮಟ್ಟದಿಂದ ನಡೆಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸಮಸ್ಯೆಗಳನ್ನು ನಿರ್ಲಕ್ಷಿಸಿದರೆ ಇಲಾಖೆಯ ಕಚೇರಿ ಎದುರು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಟ್ಟಣದ ಗೌರಂಪೇಟೆ ವಾರ್ಡ್‌ 7 ಮತ್ತು 8ರಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದ್ದು, ಪುರಸಭೆ ಅಧಿಕಾರಿಗಳು ಕೂಡಲೇ ಸಮರ್ಪಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಜಲ್ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಕಾಮಗಾರಿ ನಡೆದಿದ್ದರೂ ಬಹುತೇಕ ಮನೆಗಳಿಗೆ ನೀರು ತಲುಪುತ್ತಿಲ್ಲ ಎಂದು ದೂರಿದರು. ಕುಡಿಯುವ ನೀರಿಗಾಗಿ ಸರ್ಕಾರ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿ ಸಮಸ್ಯೆಗೀಡಾದ ವಾರ್ಡ್‌ಗಳಿಗೆ ನಿರಂತರ ನೀರು ಪೂರೈಸುವಂತೆ ಮನವಿ ಪತ್ರದಲ್ಲಿ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಆತ್ಮಹತ್ಯೆ: ಪ್ರಕರಣ ದಾಖಲು

ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಬಸವರಾಜ ಗೋಪಾಳಪೂರು, ಸುರೇಶ್ ಪಾಟೀಲ್, ಹುಸೇನ್ ಬಾಷಾ, ಆಸೀಫ್ ಬೂವಾಜಿ, ಹಾಜಿ ಬೂವಾಜಿ, ಉಸ್ಮಾನ್, ಐಯೂಬ್ ಖಾನ್, ಮಹ್ಮದ್ ಜಿಲಾನಿ, ದೇವರಾಜ, ಮಲ್ಲಪ್ಪ ಚಪ್ಪಳಿಕಿ, ಖಾಸಿಂ ಗೌರಂಪೇಟೆ ಸೇರಿದಂತೆ ಸಂಘಟನೆಯ ಹಲವು ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...

ಮಹಿಳಾ ಶಕ್ತಿಯ ಅನಾವರಣ: ಮಂಡ್ಯ ಜಿಲ್ಲಾ ಪಂಚಾಯತ್ ಸ್ತಬ್ಧಚಿತ್ರಕ್ಕೆ ಈಶ್ವರ ಖಂಡ್ರೆ ಮೆಚ್ಚುಗೆ

ಮೈಸೂರು ದಸರಾ ಜಂಬೂಸವಾರಿಯಲ್ಲಿ ಜನಮೆಚ್ಚುಗೆ ಗಳಿಸುವುದರ ಜೊತೆಗೆ ಪ್ರಥಮ ಬಹುಮಾನ ಪಡೆದ...

ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಮೈಶುಗರ್ ಸಕ್ಕರೆ ಗೋದಾಮಿಗೆ ರೈತರ ಮುತ್ತಿಗೆ

ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡಬೇಕು ಹಾಗೂ ಪ್ರತಿ ಟನ್ ಕಬ್ಬಿಗೆ...

ಕಬ್ಬು ಬೆಳೆಗಾರರ ರಕ್ಷಣೆಗೆ ಪ್ರತ್ಯೇಕ ವಿಮೆ, ನ್ಯಾಯಯುತ ಬೆಲೆ ಸೇರಿದಂತೆ 12 ಬೇಡಿಕೆ

ಕಬ್ಬು ಬೆಳೆಗಾರರಿಗೆ ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ₹6,000 ಕನಿಷ್ಠ...