ರಾಯಚೂರು | ಸಮಾಜ ಕಲ್ಯಾಣ ಸಚಿವರನ್ನು ಹೊಡೆಯುವ ಹೇಳಿಕೆ; ಶಿವನಗೌಡ ವಿರುದ್ದ ಬಲಗೈ ಸಮಾಜದಿಂದ ಪ್ರತಿಭಟನೆ

Date:

ಸಮಾಜ ಕಲ್ಯಾಣ ಸಚಿವರನ್ನು ಹೊಡೆಯುವುದಾಗಿ ಬಹಿರಂಗವಾಗಿ ಹೇಳಿದ ಮಾಜಿ ಸಚಿವ ಕೆ.ಶಿವನಗೌಡ ನಾಯಕ ಅವರ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಬಲಗೈ ಸಮಾಜದ ಒಕ್ಕೂಟದಿಂದ ಪ್ರತಿಭಟಿಸಿದರು.

- Advertisement -

ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಶಿವನಗೌಡ ಅವರ ಬ್ಯಾನರ್ ಸುಟ್ಟು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಚಿತ್ರದುರ್ಗ ಸಮಾವೇಶದಲ್ಲಿ ಶಿವನಗೌಡ ಮಾತನಾಡುತ್ತಾ, ಸಮಾಜ ಕಲ್ಯಾಣ ಸಚಿವ ಹೆಚ್ ಸಿ.ಮಹಾದೇವಪ್ಪ ಅವರಿಗೆ ಮುಖಕ್ಕೆ ಹೊಡೆಯುತ್ತಿದ್ದೆ ಎಂದು ಹೇಳಿರುವುದು ತೀವ್ರ ಖಂಡನೀಯ. ಈಗಾಗಲೇ ಶಿವನಗೌಡ ನಾಯಕ ವಿರುದ್ಧ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದ್ದು, ಎಫ್‍ಐಆರ್ ದಾಖಲಿಸುವ ಹಾಗೂ ತನಿಖೆ ನಡೆಸುವ ಕುರಿತು ನ್ಯಾಯಾಲಯದ ಆದೇಶ ಬರುವುದು ಬಾಕಿ ಇದೆ ಎಂದು ಆಗ್ರಹಿಸಿದರು.

ಕೆ.ಶಿವನಗೌಡ ನಾಯಕ ಅವರು ರಾಜಕೀಯ ನಾಯಕರ ಎದುರು ಕಾಲಿಗೆ ಬೀಳುವುದು ಅವರು ಹೋದ ನಂತರ ಅವರನ್ನು ಬಾಯಿಗೆ ಬಂದಂತೆ ಬೈಯುವ ಚಾಳಿಯನ್ನು ಇಟ್ಟುಕೊಂಡಿದ್ದಾರೆ. ಅವರು ಅನೇಕ ಬಾರಿ ಅಧಿಕಾರಿಗಳ ವಿರುದ್ದ ಬೇರೆ ಸಮುದಾಯದ ನಾಯಕರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ಸಂಪುಟದ ಸಚಿವರಾಗಿ ಕೆಲಸ ಮಾಡಿದ ಅವರು ಸಂವಿಧಾನದ ಚೌಕಟ್ಟನ್ನು ದಾಟಿ ಕೀಳು ಮಟ್ಟದ ಕೆಲಸ ಮಾಡಿದ್ದು ಖಂಡನೀಯ. ಅವರ ಹೇಳಿಕೆಯಿಂದ ಸಮಾಜದಲ್ಲಿ ಅಶಾಂತಿ ಉಂಟಾಗಿ‌ ಕಲಹಕ್ಕೆ ಕಾರಣವಾಗುತ್ತೆ ಕೂಡಲೇ ಕೆ.ಶಿವನಗೌಡ ನಾಯಕ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಧಾರಾಕಾರ ಮಳೆ;12 ಎಕರೆ ಪಪ್ಪಾಯಿ ಬೆಳೆ ನಾಶ, ರೈತನಿಗೆ 20 ಲಕ್ಷ ನಷ್ಟ

ಪ್ರತಿಭಟನೆ ಯಲ್ಲಿ ಒಕ್ಕೂಟದ ರಾಜ್ಯ ಗೌರವಾಧ್ಯಕ್ಷ ಸತ್ಯನಾರಾಯಣ, ಜಿಲ್ಲಾಧ್ಯಕ್ಷ ಮಂಚಾಲ ಭೀಮಣ್ಣ, ಕಾರ್ಯಾಧ್ಯಕ್ಷ ವಿಶ್ವನಾಥ ಪಟ್ಟಿ, ಕೆ.ಇ ಕುಮಾರ ಮತ್ತಿತರರು ಇದ್ದರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...