ಲಿಂಗಸುಗೂರು ತಾಲ್ಲೂಕಿನ ಗೊರೇಬಾಳ ಗ್ರಾಮದಲ್ಲಿ ಕುರಿಗಳ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದರಿಂದ ನಾಲ್ಕು ಕುರಿಗಳು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಗೊರೇಬಾಳ ಗ್ರಾಮದ ಹನುಮಂತ ಅವರಿಗೆ ಸೇರಿದ ಕುರಿಗಳು ನಾಯಿಗಳ ದಾಳಿಗೆ ಬಲಿಯಾಗಿವೆ. ಕುರಿಗಳನ್ನು ಮೇಯಿಸುತ್ತಿರುವಾಗ ಬೀದಿ ನಾಯಿಗಳು ದಾಳಿ ಮಾಡಿದ್ದರಿಂದ ₹18 ಸಾವಿರ ಬೆಲೆಬಾಳುವ ಮೂರು ಕುರಿಗಳು ಮತ್ತು ಒಂದು ಕುರಿಮರಿ ಮೃತಪಟ್ಟಿವೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕೆಎಸ್‌ಆರ್‌ಟಿಸಿ ಬಸ್, ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು
ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಈ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿ ಕ್ರಮ ಕೈಗೊಂಡು ಬೀದಿ ನಾಯಿಗಳನ್ನು ಬೇರೆಡೆಗೆ ಸಾಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.




