ರಾಯಚೂರು | ಭೂಮಿ-ವಸತಿ ಹಕ್ಕಿಗಾಗಿ ಹೋರಾಟ; ನಾಲ್ಕನೇ ದಿನಕ್ಕೆ ಕಾಲಿಟ್ಟ ಧರಣಿ

Date:

ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮತ್ತು ವಸತಿ ರಹಿತರಿಗೆ ವಸತಿ ನೀಡಲು ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

- Advertisement -

ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರಾತಿ ನೀಡಬೇಕು ಎಂದು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆಗೆ ಪರಿಹಾರವಾಗಿ ಒನ್ ಟೈಮ್ ಸೆಟಲ್ ಮೆಂಟ್ ಜಾರಿ ಮಾಡುವ ಮೂಲಕ ಭೂಮಿ ಹಕ್ಕು ಮಾನ್ಯ ಮಾಡಬೇಕು. ವಿಲೇವಾರಿ ಹೆಸರಿನಲ್ಲಿ ತಿರಸ್ಕರಿಸಿರುವ ಅರ್ಜಿಗಳನ್ನು ಪುನರ್ ಪರಿಶೀಲಿಸಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಭೂಮಿ ವಸತಿ ಜಿಲ್ಲಾ ಸಂಚಾಲಕ ಆಂಜನೇಯ ಕುರುಬದೊಡ್ಡಿ, ಅರಣ್ಯ ಕಾಯ್ದೆಯಡಿ ಅರಣ್ಯವಾಸಿಗಳಿಗೂ ನ್ಯಾಯಬದ್ದ ಹಕ್ಕು ಸಿಗಬೇಕು. ಭೂಕಂದಾಯ ಕಾನೂನಿಗೆ ತಿದ್ದುಪಡಿ ಮಾಡುವ ಮೂಲಕ ಬಡ ಜನರಿಗೆ ಭೂಮಿ ಹಕ್ಕು ನೀಡಬೇಕು ಎಂದು ಒತ್ತಾಯಿಸಿದರು.

ಭೂಮಿಗಳಲ್ಲಿ ಜೀತ ಮಾಡಿದ ಜೀವಗಳು, ಉಳ್ಳವರ ಮನೆಗಳಲ್ಲಿ ಒಕ್ಕಲಿದ್ದು, ಜೀವ ಸವೆಸಿದವರು. ದಲಿತರು, ಅಲೆಮಾರಿಗಳು ಅತೀ ಹಿಂದುಳಿದ ವರ್ಗಗಳಿಗೆ ಸೇರಿದವರು ಸಾಗುವಳಿ ಮಾಡಲು ಯೋಗ್ಯವಲ್ಲದ ಭೂಮಿಗಳಲ್ಲಿ ಕಲ್ಲು-ಮುಳ್ಳು ತೆಗೆದು ಬದುಕಿಗಾಗಿ ಭೂಮಿಯನ್ನು ಹಸನುಗೊಳಿಸಿಕೊಂಡಿದ್ದಾರೆ. ಅರ್ಜಿ ಸಲ್ಲಿಸಿ-ಸಾಗುವಳಿ ಮಾಡುತ್ತಿರುವ ಭೂಹೀನರಿಗೆ ಮಾನದಂಡದ ಮೇಲೆ ಭೂಮಿ ಮಂಜೂರಾತಿ ನೀಡಬೇಕು. ಸಾಗುವಳಿ ಚೀಟಿ ಹೊಂದಿರುವವರೆಲ್ಲರಿಗೂ ಕೂಡಲೇ ಪಹಣಿ ಒದಗಿಸಬೇಕು. ಅರ್ಜಿ ಸಲ್ಲಿಸಿರುವ ಯಾರನ್ನು ಯಾವ ಭೂಮಿಯಿಂದಲೂ ಒಕ್ಕಲೆಬ್ಬಿಸಬಾರದು ಎಂದು ಮನವಿ ಮಾಡಿದರು.

ರಾಯಚೂರು ಜಿಲ್ಲೆಯ ಭೂಮಿ ವಸತಿ ಸಮಸ್ಯೆಗಳ ಹೋರಾಟಗಾರರನ್ನೂ ಒಳಗೊಂಡು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಅಧಿಕಾರಗಳೊಂದಿಗೆ ತುರ್ತಾಗಿ ಸಭೆ ನಡೆಸಬೇಕು ಮತ್ತು ಸಭೆಯ ತೀರ್ಮಾನಗಳನ್ನು ಜಾರಿ ಮಾಡಬೇಕು. ತಾಲೂಕಿನ ಕುರುಬದೊಡ್ಡಿ, ಆತ್ಕೂರು, ಜೇಗರಕಲ್, ಬಾಯಿದೊಡ್ಡಿ, ಬಾಪೂರು, ವಡವಟಿ ಈ ಗ್ರಾಮಗಳಲ್ಲಿರುವ ಭೂಮಿ ಮತ್ತು ವಸತಿ ಸಂಬಂಧಿಸಿದ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಆನ್‌ಲೈನ್ ಔಷಧಿ ಮಾರಾಟ ನಿಷೇಧಕ್ಕೆ ಒತ್ತಾಯಿಸಿ ಮೆಡಿಕಲ್ ಮಾಲೀಕರಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ಆಂಜನೇಯ ಕುರುಬದೊಡ್ಡಿ, ಲಕ್ಷ್ಮಣ ಮಂಡಲಗೇರಾ, ಗೋವಿಂದ ದಾಸ್, ಬಂಗಾರಿ ನರಸಿಂಹಲು, ಹುಲಿಗೆಪ್ಪ ಕೆಆರ್‌ಎಸ್, ಗುರುರಾಜ ಗ್ರೂಕೂಸೌ, ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...