ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಎಡಿಜಿಪಿ ಆದೇಶ ಹೊರಡಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದತ್ತಾತ್ರೇಯ ಕಾರ್ನಾಡ ಅವರನ್ನು ಡಿಸಿಆರ್‌ಇಗೆ ವರ್ಗಾವಣೆ ಮಾಡಲಾಯಿತು. ಅವರ ಜಾಗಕ್ಕೆ ಬೆಂಗಳೂರು ನಗರ ಟಿಟಿಐಯಾಗಿ ಶರಣಪ್ಪ ಅವರನ್ನು ವರ್ಗಾವಣೆ ಮಾಡಿ ಅಕ್ಟೋಬರ್ 1ರಂದು ಆದೇಶ ಹೊರಡಿಸಲಾಗಿತ್ತು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ
ಆದರೆ ಶರಣಪ್ಪ ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿ ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ಅವರನ್ನು ವರ್ಗಾವಣೆ ಮಾಡಿ ಅ.5ರಂದು ಎಡಿಜಿಪಿ ಸುಮೇಂದು ಮುಖರ್ಜಿ ಆದೇಶ ಹೊರಡಿಸಿದ್ದಾರೆ.




