ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಸೂರ್ಯಕಾಂತಿ ಉತ್ಪನ್ನ ಖರೀದಿಸಲು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಟಾಸ್ಕ್‌ಫೋರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ತಿಳಿಸಿದ್ದಾರೆ.
ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ ₹8,343ರಂತೆ ಖರೀದಿಸಲಾಗುತ್ತದೆ. ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಸೂರ್ಯಕಾಂತಿ ಉತ್ಪನ್ನ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿನಾಂಕ: 01-10-2026 ರಿಂದ ರೈತರ ನೊಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗಧಿಪಡಿಸಿದೆ. ರೈತರಿಂದ ಸೂರ್ಯಕಾಂತಿಯನ್ನು ಖರೀದಿಸುವ ಸಂಬಂಧ ರಾಯಚೂರು ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಹುಣಸಿಹಾಳಹುಡಾ ರಾಯಚೂರು. ಮೊ.ನಂ. 9743695467ಗೆ ಸಂಪರ್ಕ ಮಾಡಬಹುದಾಗಿದೆ.
ದೇವದುರ್ಗ ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಜಾಲಹಳ್ಳಿ. ಮೊ.ನಂ. 7899312989ಗೆ, ಲಿಂಗಸುಗೂರು ತಾಲೂಕಿನ ಖರೀದಿ ಕೇಂದ್ರಗಳಾದ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಮಟ್ಟೂರು 7022551299 ಹಾಗೂ ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಲಿಂಗಸುಗೂರು. ಮೊ.ನಂ 8792668442ಗೆ ಸಂಪರ್ಕ ಮಾಡಬಹುದಾಗಿದೆ.
ಸಿಂಧನೂರು ತಾಲೂಕಿನ ಖರೀದಿ ಕೇಂದ್ರಗಳಾದ ಎಣ್ಣೆ ಬೀಜ ಬೆಳೆಗಾರರ ಸಹಕಾರ ಜವಳಗೇರಾ,: 9964315868, ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಹುಡಾ: 9964315868 ಹಾಗೂ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಪಗಡದಿನ್ನಿ ಮೊ.ನಂ: 99457382977 ಮಾಡಬಹುದಾಗಿದೆ.
ಮಾನವಿ ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ತೋರಣದಿನ್ನಿ ಮೊ.ನಂ: 9902387316, ಸಿರವಾರ ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ 9880891919ಗೆ, ಮಸ್ಕಿ ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಜಾಲವಡಿಗಿ ಮೊ.ನಂ: 8073325424ಗೆ ಸಂಪರ್ಕ ಮಾಡಬಹುದಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | 12 ತಾಸು ವಿದ್ಯುತ್ ಪೂರೈಕೆಗೆ ಆಗ್ರಹ: ಜೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ
ಈ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರ ಬಾಂಧವರು ಫೂಟ್ಸ್ ಐ.ಡಿ ಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಿ ಸೂರ್ಯಕಾಂತಿ ಮಾರಾಟ ಮಾಡಿ ಸರ್ಕಾರದ ಯೋಜನೆಯ ಸದುಪಯೋಗ ಪಡಿಸಿಕೊಳ್ಳಲು ಜಿಲ್ಲೆಯ ರೈತ ಬಾಂಧವರಲ್ಲಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.




