ರಾಯಚೂರು | ಮದ್ಯಪಾನ ಮಾಡಿ ಶಾಲೆಗೆ ಬಂದ ಶಿಕ್ಷಕ; ಪಾಲಕರು, ಗ್ರಾಮಸ್ಥರಿಂದ ತರಾಟೆ

Date:

ಮಸ್ಕಿ ತಾಲೂಕಿನ ಕೊಟೆಕಲ್ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ಮದ್ಯಪಾನ ಮಾಡಿ ಶಾಲೆಗೆ ಆಗಮಿಸಿದ್ದಾರೆ ಎನ್ನಲಾದ ಘಟನೆ ನಡೆದಿದೆ. ಶಿಕ್ಷಕರ ವರ್ತನೆಯಿಂದ ಅಸಮಾಧಾನಗೊಂಡ ಪಾಲಕರು ಹಾಗೂ ಗ್ರಾಮಸ್ಥರು ಶಾಲೆಗೆ ಆಗಮಿಸಿ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -

ಶಿಕ್ಷಕರು ಮದ್ಯಪಾನ ಮಾಡಿ ನಿಯಂತ್ರಣ ಕಳೆದುಕೊಂಡ ಸ್ಥಿತಿಯಲ್ಲಿ ಶಾಲೆಗೆ ಬಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ವಿದ್ಯಾರ್ಥಿಗಳು ಇತರೆ ಶಿಕ್ಷಕರಿಗೆ ಮಾಹಿತಿ ನೀಡಿದ್ದು, ಬಳಿಕ ವಿಷಯ ಪಾಲಕರಿಗೂ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮಹಾಂತೇಶ ಎಂಬ ಶಿಕ್ಷಕರು ಮದ್ಯಪಾನ ಮಾಡಿ ಶಾಲೆಗೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರ ವರ್ತನೆಗೆ ಪಾಲಕರು ಹಾಗೂ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಭೂಮನಂದ ಹದ್ದಿನಾಳ ಕುಟುಂಬಕ್ಕೆ ಜಿಲ್ಲಾಧಿಕಾರಿ ಭೇಟಿ; ಸಾಂತ್ವನ, ಆಹಾರ ಕಿಟ್ ವಿತರಣೆ

ಶಿಕ್ಷಕರು ಈ ಹಿಂದೆಯೂ ಹಲವು ಬಾರಿ ಮದ್ಯಪಾನ ಮಾಡಿ ಶಾಲೆಗೆ ಆಗಮಿಸುತ್ತಿದ್ದರು ಎಂದು ವಿದ್ಯಾರ್ಥಿಗಳು ಪಾಲಕರಿಗೆ ತಿಳಿಸಿರುವುದಾಗಿ ಹೇಳಲಾಗಿದೆ. ಹೀಗಾಗಿ ಘಟನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರೆಂದು ದೃಢಪಟ್ಟಲ್ಲಿ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪಾಲಕರು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...