ಚುನಾವಣಾ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ಕೆ ಗೈರುಹಾಜರಾಗಿ, ಅನಾರೋಗ್ಯದ ನೆಪದಲ್ಲಿ ಸುಳ್ಳು ದಾಖಲೆ ಸಲ್ಲಿಸಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ದೇವದುರ್ಗ ತಾಲೂಕಿನ ನಗರಗುಂಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಂಗಮೇಶ ಅವರನ್ನು ಸೇವೆಯಿಂದ ಅಮಾನತುಗೊಳಿಸಿ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪೂವಿತಾ ಆದೇಶ ಹೊರಡಿಸಿದ್ದಾರೆ.
ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಂಗಮೇಶ ಅವರು ಆಸ್ಪತ್ರೆಗೆ ದಾಖಲಾಗಿರು ವುದಾಗಿ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ ಕರ್ತವ್ಯದಿಂದ ಗೈರಾಗಿದ್ದರು. ಆದರೆ ಪರಿಶೀಲನೆ ವೇಳೆ ಅವರು ನೀಡಿದ ದಾಖಲೆಗಳು ಸುಳ್ಳು ಎಂಬುದು ಪತ್ತೆಯಾಗಿದೆ.
ಚುನಾವಣೆಯಂತಹ ಮಹತ್ವದ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿರುವುದು ಹಾಗೂ ತಪ್ಪು ಮಾಹಿತಿ ನೀಡಿ ಆಡಳಿತವನ್ನು ದಾರಿತಪ್ಪಿಸುವ ಪ್ರಯತ್ನ ನಡೆಸಿರುವುದು ಗಂಭೀರ ಶಿಸ್ತು ಉಲ್ಲಘನೆಯಾಗಿರುವುದರಿಂದ, ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ಅನ್ವಯ ಶಿಕ್ಷಕ ಸಂಗಮೇಶ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊ ಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಐತಿಹಾಸಿಕ ನಾರದಗಡ್ಡೆಗೆ ಜಿಲ್ಲಾಧಿಕಾರಿಗಳ ಭೇಟಿ; ಪ್ರವಾಸೋದ್ಯಮ ಅಭಿವೃದ್ಧಿಗೆ ಸೂಚನೆ
ಚುನಾವಣಾ ಕರ್ತವ್ಯಗಳನ್ನು ನಿರ್ಲಕ್ಷಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.





