ರಾಯಚೂರು | ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದೇ ಸರ್ಕಾರದ ಗುರಿ: ಅಜಯ ಸಿಂಗ್

Date:

ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅವುಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ ಸಿಂಗ್ ಹೇಳಿದರು.

- Advertisement -

ಪಟ್ಟಣದ ಬಾಷುಮಿಯಾ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇತನರ ಸೌಲಭ್ಯ, ರೈತರ ಕಲ್ಯಾಣ ಯೋಜನೆಗಳು, ಭಾಗ್ಯಲಕ್ಷ್ಮಿ ಬಾಂಡ್, ವಸತಿ ಸೌಲಭ್ಯ, ಹಕ್ಕುಪತ್ರ ಹಾಗೂ ಸುಕನ್ಯಾ ಯೋಜನೆ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದರು.

ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯುವ ಸಂದರ್ಭದಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ, ಸಾಧ್ಯವಾದಷ್ಟು ಶೀಘ್ರ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕುಡಿಯುವ ನೀರು, ದೇವಸ್ಥಾನಗಳ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳು, ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮೂಲಕ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ರಾಯಚೂರು ಜಿಲ್ಲೆಯ ಪ್ರತಿಯೊಂದು ಹಳ್ಳಿಯ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದು ರೈತರಿಗೆ ಅಗತ್ಯ ಪರಿಹಾರ ಹಾಗೂ ನೆರವು ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ಜಿಲ್ಲೆಯ ಮೂರು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ರೈತರ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಅವರೊಂದಿಗೆ ನಿಲ್ಲಲಿದೆ ಎಂದು ಭರವಸೆ ನೀಡಿದರು.

ರಾಯಚೂರು ಜಿಲ್ಲೆಯ ಜನರೊಂದಿಗೆ ತಮ್ಮದು ಅವಿನಾಭಾವ ಸಂಬಂಧವಿದ್ದು, ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಪರಿಹಾರಕ್ಕೆ ಸದಾ ಆದ್ಯತೆ ನೀಡಲಾಗುವುದು. ಹಳ್ಳಿಯ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | 54 ನೇ ಉಪಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರು ಬೃಹತ್ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬೋಸರಾಜು, ಶಾಸಕ ಹಂಪಯ್ಯ ನಾಯಕ, ಜಿಲ್ಲಾಧಿಕಾರಿ ಪೋತಿಯಾ ಎಸ್. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...