ರಾಯಚೂರು | ಪತ್ರಿಕಾ ರಂಗ ಜನರ ಧ್ವನಿಯಾಗಿ ಕೆಲಸ ಮಾಡಬೇಕು: ಎ.ವಸಂತ್ ಕುಮಾರ

Date:

ಪತ್ರಿಕಾ ರಂಗ ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಕಾರ್ಯನಿರ್ವಹಿಸುವ ಮೂಲಕ ಸತ್ಯವನ್ನು ವರದಿ ಮಾಡಬೇಕು. ಸಮಾಜದ ಯಾವುದೇ ಮೂಲೆಯಲ್ಲಿ ನಡೆಯುವ ಘಟನೆಗಳನ್ನು ಜನರಿಗೆ ತಲುಪಿಸುವ ಹಾಗೂ ನ್ಯಾಯ ದೊರಕಿಸುವಲ್ಲಿ ಪತ್ರಿಕಾರಂಗ ಪ್ರಮುಖ ಪಾತ್ರ ವಹಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎ.ವಸಂತ್ ಕುಮಾರ್ ಹೇಳಿದರು.

- Advertisement -

ನಗರದ ಕಾರ್ಮಿಕರ ಭವನದಲ್ಲಿ ನಡೆದ ವಿಸ್ತಾರ ವಾಣಿ ಕನ್ನಡ ದಿನಪತ್ರಿಕೆ ಉದ್ಘಾಟನೆ ಹಾಗೂ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಯಾಂಗ, ನ್ಯಾಯಾಂಗದಂತೆ ಪತ್ರಿಕಾರಂಗವೂ ತನ್ನದೇ ಆದ ಗ್ರಹಿಕೆ ಹಾಗೂ ಜವಾಬ್ದಾರಿಯನ್ನು ಹೊಂದಿದೆ. ಪತ್ರಿಕಾರಂಗ ಜನಶಕ್ತಿಯಾಗಿ ಹೊರಹೊಮ್ಮಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಸಾಮಾಜಿಕ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಪತ್ರಿಕಾರಂಗ ಪ್ರಮುಖ ವೇದಿಕೆಯಾಗಿದೆ. ಪತ್ರಿಕೆಗಳು ಬ್ಲ್ಯಾಕ್‌ಮೇಲ್ ಪತ್ರಿಕೋದ್ಯಮಕ್ಕೆ ಇಳಿಯದೆ, ಸಮಾಜದ ಶಕ್ತಿಯಾಗಿ ನಿಲ್ಲಬೇಕು. ವಂಚಿತರು ಹಾಗೂ ದುರ್ಬಲ ವರ್ಗಗಳ ಪರವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ವ್ಯಕ್ತಿ, ಸಿದ್ಧಾಂತ ಅಥವಾ ಪಕ್ಷಕ್ಕೆ ಪತ್ರಿಕೆಗಳು ಸೀಮಿತವಾಗಬಾರದು. ಸೈದ್ಧಾಂತಿಕ ವಿಷಯಗಳು ಬಂದಾಗ ಪಕ್ಷ ಹಾಗೂ ಜಾತಿಯನ್ನು ನೋಡದೆ ಸತ್ಯದ ಪರವಾಗಿ ನಿಲ್ಲಬೇಕು. ಪತ್ರಿಕೆಯ ಧ್ವನಿ ಮತ್ತು ಸಿದ್ಧಾಂತ ಜನರ ಪರವಾಗಿದ್ದು, ಜನರಿಗೆ ಶಕ್ತಿ ತುಂಬುವಂತಿರಬೇಕು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ವೇದಿಕೆಯಲ್ಲಿ ಜೆಡಿಎಸ್ ಜಿಲ್ಲಾ ಮುಖಂಡ ವಿರೂಪಾಕ್ಷಿ, ಹಿರಿಯ ಹೋರಾಟಗಾರರು ಅಂಬಣ್ಣ ಅರೋಲಿಕರ್, ಮಾರೆಪ್ಪ ಹರವಿ, ಶರಣು ಮುದ್ದಮಗುಡ್ಡಿ, ಇನ್ನಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ...

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...