ರಾಯಚೂರು | ಸಂಘಟನೆಗಳ ಹೋರಾಟ; ತವಗ, ಕಡ್ಡೋಣ, ರೋಡಲಬಂಡ ಗ್ರಾಮಗಳಿಗೆ ಅಧಿಕಾರಿಗಳ ಭೇಟಿ

Date:

Advertisements

ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಹಟ್ಟಿ ಸಮೀಪದ ಕಡ್ಡೋಣ, ತವಗ ಹಾಗೂ ರೋಡಲಬಂಡಾ ಗ್ರಾಮ ಪಂಚಾಯಿತಿಯ ಇತರೆ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಶನಿವಾರ ಸದರಿ ಗ್ರಾಮಗಳಿಗೆ ಭೇಟಿ ನೀಡಿದರು.

ಭಾರತ ವಿದ್ಯಾರ್ಥಿ ಫೆಡರೇಶನ್(ಎಸ್ಎಫ್ಐ), ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ), ಕರ್ನಾಟಕ ಪ್ರಾಂತ ರೈತ ಸಂಘಟನೆ (ಕೆಪಿಆರ್‌ಎಸ್‌) ಕರ್ನಾಟಕ ಪ್ರಾಂತ ಕೂಲಿಕಾರ ಸಂಘಟನೆ ಸಂಘಟನೆಗಳ ನೇತೃತ್ವದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಎಸಿ ಕಚೇರಿ ಎದುರು ನಡೆದ ಪ್ರತಿಭಟನೆಗೆ ಮಣಿದು ತಾಲೂಕಿನ ಹಲವು ಅಧಿಕಾರಿಗಳು ಕಡ್ಡೋಣ, ತವಗ, ರೋಡಲಬಂಡಾ ಗ್ರಾಮಗಳಿಗೆ ಭೇಟಿ ಸಭೆ ನಡೆಸಿ ಸಮಸ್ಯೆಗಳನ್ನು ಪರಿಶೀಲಿಸಿ ನಿಗದಿತ ಸಮಯದಲ್ಲಿ ಪರಿಹರಿಸುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪುರ್ ಮಾತನಾಡಿ, “ಪ್ರತಿಭಟನೆ ಮುಗಿದು 15 ದಿನಗಳು ಕಳೆಯುತ್ತಾ ಬಂದರೂ ನೀವು ಹೋರಾಟದ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾ ಬಂದಿದ್ದೀರಿ” ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

Advertisements
ಗ್ರಾಮ ಸಭೆ

ರಸ್ತೆ ಸಂಚಾರಕ್ಕೆ ಅಡ್ಡವಾಗಿರುವ ವಿದ್ಯುತ್ ಕಂಬವನ್ನು ಇಂದೇ ತೆರವುಗೊಳಿಸುವ ಬಗ್ಗೆ ಮಾಹಿತಿ ನೀಡಿದರು.
ರೋಡಲಬಂಡ, ಯಲಗಟ್ಟ ಗ್ರಾಮಗಳ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿದ್ದು, ದುರಸ್ಥಿಗೊಳಿಸಲು ಇಒ ಸೂಚಿಸಿದರು. ಈ ಮೂರು ಗ್ರಾಮಗಳಿಗೆ ಸಿಸಿ ರಸ್ತೆ, ನೀರು, ಶಾಲೆಯ ಇತರೆ ಸಮಸ್ಯೆಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಪರಿಹರಿಸುವುದಾಗಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಶಾಲಾ ಕಟ್ಟಡ ನಿರ್ಮಾಣಕ್ಕೆ ನಿವೇಶನ ಕಲ್ಪಿಸುವಂತೆ ಒತ್ತಾಯ

ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಅಮರೇಶ ಯಾದವ್, ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ಜೆಸ್ಕಾಂನ ವಿಭಾಗೀಯ ಅಧಿಕಾರಿ ಬನ್ನೆಪ್ಪ, ಸಾರಿಗೆ ಇಲಾಖೆಯ ಕಂಟ್ರೋಲರ್ ದೇವಪ್ಪ, ಜಿಲ್ಲಾ ಪಂಚಾಯತ್ ಜೆಇ ತಿಪ್ಪಣ್ಣ, ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ, ಗ್ರಾ ಪಂ ಪಿಡಿಒ ಸಂಗನಗೌಡ, ಪಂಚಾಯಿತಿಯ ಸಿಬ್ಬಂದಿ, ತವಗ ಕೆಪಿಆರ್‌ಎಸ್‌ ಘಟಕದ ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಬಸವರಾಜ, ಉಪಾಧ್ಯಕ್ಷ ಮಲ್ಲಣ್ಣ ಪರಸರಡ್ಡಿ, ಡಿವೈಎಫ್ಐ ಮುಖಂಡರುಗಳಾದ ಕಾಶಿಪತಿ, ಶಂಕರ್, ಸಿದ್ದಣ್ಣ, ಸಂತೋಷ್ ಕಡ್ಡೋಣಿ, ದುರುಗಪ್ಪ, ರಂಗಪ್ಪ, ದವಲ್ ಸಾಬ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗ್ರಾಮವನ್ನು ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬಾರದು : ಗ್ರಾಮಸ್ಥರ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆರಿಸಬಾರದು ಎಂದು ರಾಜ್ಯ...

ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ : ನಾಲ್ಕು ಗ್ರಾಮಕ್ಕೆ ಸಂಪರ್ಕ ಕಡಿತ

ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು,...

ರಾಯಚೂರು | ನಿರಂತರ ಮಳೆ : ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ

ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ...

ರಾಯಚೂರು | ಪಾಳುಬಿದ್ದ ದಾದಿಯರ ವಸತಿ ಗೃಹಗಳು; ಸ್ಥಳೀಯ ಆಡಳಿತದ ನಿರ್ಲಕ್ಷ್ಯ ಆರೋಪ

ರಾಯಚೂರಿನ ಸಿರವಾರ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗಿರುವ ದಾದಿಯರ ವಸತಿ...

Download Eedina App Android / iOS

X