ರಾಯಚೂರು | ದಲಿತರ ಮೇಲಿನ ಹಲ್ಲೆ ಖಂಡಿಸಿ ನ. 8ರಂದು ‘ತಿಡಿಗೋಳ ಚಲೋ’ ಬೈಕ್ ರ್ಯಾಲಿ

Date:

ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ನಡೆದ ಸಾಮೂಹಿಕ ಹಲ್ಲೆ ಪ್ರಕರಣವನ್ನು ಖಂಡಿಸಿ, ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರಿಗೆ ಆತ್ಮಸ್ಥೆರ್ಯ ತುಂಬಿ ನೈತಿಕ ಬೆಂಬಲ ಸೂಚಿಸುವ ಉದ್ದೇಶದಿಂದ ನವೆಂಬರ್ 8ರಂದು ‘ತಿಡಿಗೋಳ ಚಲೋ’ ಬೈಕ್ ರ್ಯಾಲಿ ನಡೆಸಲಾಗುವುದು ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಎಸ್.ಮಾರೆಪ್ಪ ತಿಳಿಸಿದರು.

- Advertisement -

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 18ರಂದು ತಿಡಿಗೋಳ ಗ್ರಾಮದಲ್ಲಿ ನಡೆದ ಆಂಜನೇಯ ಸ್ವಾಮಿ ಜಾತ್ರೆಯಲ್ಲಿ ಪರಿಶಿಷ್ಟ ಜಾತಿಯ ಯುವಕರು ಪಾಲ್ಗೊಂಡಿದ್ದಕ್ಕೆ ಸವರ್ಣೀಯರ ತಂಡವೊಂದು ಮನಸೋ ಇಚ್ಛೆ ಹಲ್ಲೆ ನಡೆಸಿ, ಜಾತಿನಿಂದನೆ ಮಾಡಿದೆ ಎಂದು ಆರೋಪಿಸಿದರು. ಘಟನೆ ನಡೆದು ಹಲವು ದಿನಗಳಾದರೂ ಎಲ್ಲ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಗ್ರಾಮದಲ್ಲಿ ಭಯದ ವಾತಾವರಣವಿದ್ದು, ಸಮಾಜದ ಜನರಲ್ಲಿ ನೈತಿಕ ಸೈರ್ಯ ತುಂಬಲು ಬೈಕ್ ರ್ಯಾಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಸಿಂಧನೂರು ಡಿವೈಎಸ್‌ಪಿ ಚಂದ್ರಶೇಖರ ಅವರು ಬ್ಯಾಲಿಗೆ ಅನುಮತಿ ನಿರಾಕರಿಸಿದ್ದರೂ ಅದನ್ನು ನಡೆಸಲಾಗುವುದು. ದಲಿತರು ರ್ಯಾಲಿ ನಡೆಸಿದರೆ ಪ್ರತಿಯಾಗಿ ಹೋರಾಟ ನಡೆಸುತ್ತಾರೆ ಎಂಬ ಕಾರಣ ನೀಡಿ ಅನುಮತಿ ನಿರಾಕರಿಸುವುದು ಸರಿಯಲ್ಲ. ಕಾನೂನು ಉಲ್ಲಂಘನೆಯಾದರೆ ಕ್ರಮ ಕೈಗೊಳ್ಳುವ ಅಧಿಕಾರ ಪೊಲೀಸರಿಗಿದೆ. ಆದರೆ, ಪ್ರತಿಭಟನಾಕಾರರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡಲಾಗುತ್ತಿದೆ. ಪೊಲೀಸರು ಅನುಮತಿ ನೀಡದಿದ್ದರೂ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. 3

ಘಟನೆ ನಡೆದು ಹಲವು ದಿನಗಳಾದರೂ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಕಂದಾಯ ವ್ಯಾಪ್ತಿಗೆ ಬರುವ ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ ಅವರು ಸೌಜನ್ಯಕ್ಕಾದರೂ ಸಂತ್ರಸ್ತರನ್ನು ಭೇಟಿ ಮಾಡಿಲ್ಲ. ಸಾಮಾಜಿಕ ಬಹಿಷ್ಕಾರದಂತಹ ಘಟನೆಗಳು ನಡೆದಿದ್ದರೂ ಶಾಸಕರು ಸ್ಪಂದಿಸದಿರುವುದು ಖಂಡನೀಯ ಎಂದು ಮಾರೆಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೀಸಲಾತಿ ಹೆಚ್ಚಳಕ್ಕೆ ಅನುಮೋದನೆಗೆ ಆಗ್ರಹಿಸಿ ನ.6ರಂದು ಧರಣಿ: ಹನುಮಂತಪ್ಪ ಕಾಕರಗಲ್

ಈ ಸಂದರ್ಭದಲ್ಲಿ ರವೀಂದ್ರನಾಥ ಪಟ್ಟಿಮಾತನಾಡಿದರು. ಹೇಮರಾಜ ಅಸ್ಕಿಹಾಳ, ಎಂ.ಆ‌ರ್. ಭೇರಿ, ಶರಣಪ್ಪ ದಿನ್ನಿ, ಭೀಮಣ್ಣ ಮರ್ಚಟ್ನಾಳ, ಜೈಬೀಮ ವಲ್ಲಭ್ ಹಾಗೂ ಲಕ್ಷ್ಮಣ ಕಲ್ಲೂರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಸಂವಿಧಾನವನ್ನು ಮನುವಾದಕ್ಕೆ ಜೋಡಿಸುವ ಪ್ರಯತ್ನ ಖಂಡನೀಯ: ಎಸ್.ಎಂ. ಪಾಟೀಲ ಗಣಿಹಾರ

ದೇಶದ ಸಂವಿಧಾನದಲ್ಲಿ ಮನುಸ್ಮೃತಿಯ ಅಂಶಗಳಿವೆ ಎಂಬ ಹೇಳಿಕೆಯನ್ನು ಖಂಡಿಸಿರುವ ಅಹಿಂದ ಮುಖಂಡ...

ಯರಗೋಳ ಸರ್ಕಾರಿ ಪ್ರೌಢಶಾಲೆಯಲ್ಲಿ ‘ನನ್ನ ಕನಸು’ ವಿನೂತನ ಕಾರ್ಯಕ್ರಮ: ಯುಪಿಎಸ್‌ಸಿ ಸಾಧಕರೊಂದಿಗೆ ವಿದ್ಯಾರ್ಥಿಗಳ ಸಂವಾದ

ವಿದ್ಯಾರ್ಥಿಗಳಲ್ಲಿ ಭವಿಷ್ಯದ ಗುರಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸುವ...

ಕಲಬುರಗಿ | 2,350ಕ್ಕೂ ಹೆಚ್ಚು ಅನಾಥರು, ಅಂಗವಿಕಲರು, ಪೌರ ಕಾರ್ಮಿಕರಿಗೆ ಉಚಿತ ಕ್ಷೌರ ಸೇವೆ

ವೃತ್ತಿ ಕೇವಲ ಜೀವನೋಪಾಯದ ಮಾರ್ಗವಾಗದೆ, ಸಮಾಜ ಸೇವೆಯ ಸಾಧನವಾಗುವ ಮೂಲಕ ಮಾನವೀಯತೆಯ...

ಉಡುಪಿ | ಹಾಲಿನ ಬೆಲೆ ಏರಿಕೆ: ಮಹಿಳೆಯರ ಅಡುಗೆ ಮನೆಯ ಲೆಕ್ಕಾಚಾರಕ್ಕೆ ಸರ್ಕಾರದ ಹೊಡೆತ !

ಬೆಲೆ ಏರಿಕೆಯ ಬಿಸಿ ಈಗ ಜನಸಾಮಾನ್ಯರ ಅಡುಗೆ ಮನೆಯನ್ನೂ ತಟ್ಟಿದೆ. ಅಡುಗೆ...