ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ರಾಯಚೂರು ನಗರದ ಎಂ. ಈರಣ್ಣ ವೃತ್ತದಲ್ಲಿ ನಡೆದಿದೆ.
ಮೃತರನ್ನು ಶುಚಿತ್ರ (16) ಹಾಗೂ ಚರಣ ಕುಮಾರ್ (14) ಎಂದು ಗುರುತಿಸಲಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಗೊಂಡ ವ್ಯಕ್ತಿಯನ್ನು ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಈ ಸುದ್ದಿ ಓದಿದ್ದೀರಾ? ಸಿಂಧನೂರು | ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು, ₹56 ಸಾವಿರ ದಂಡ
This video cannot be played in your browser. Open the video directly
ಮೃತರ ಶವಗಳನ್ನು ರಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ರಾಯಚೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.





