ರಾಯಚೂರು | 10 ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಇಲಾಖೆ ಕಾರ್ಮಿಕರ ಧರಣಿ

Date:

ತುಂಗಭದ್ರಾ ನೀರಾವರಿ ಇಲಾಖೆಯ ಮಾನ್ವಿ ಉಪವಿಭಾಗದ ಕಾರ್ಮಿಕರಿಗೆ ಕಳೆದ 10 ತಿಂಗಳಿನಿಂದ ಬಾಕಿ ಉಳಿದಿರುವ ವೇತನವನ್ನು ತಕ್ಷಣ ಪಾವತಿಸಬೇಕು ಎಂದು ಆಗ್ರಹಿಸಿ, ಕಾರ್ಮಿಕರು ಮಂಗಳವಾರ ಮಾನ್ವಿ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ ಎದುರು ಧರಣಿ ನಡೆಸಿದರು.

- Advertisement -

ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಸಿರವಾರ ವಿಭಾಗದ ಅಧ್ಯಕ್ಷ ರಾಜಾಸಾಬ್ ಮಲ್ಲಟ ಅವರ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ, ಕಾರ್ಮಿಕರಿಗೆ ಬಾಕಿ ವೇತನ ಪಾವತಿಸದಿರುವುದರಿಂದ ಅವರ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಕಾರ್ಮಿಕರು ಕಳೆದ 25-30 ವರ್ಷಗಳಿಂದ ನೀರಾವರಿ ಕಾಲುವೆಗಳ ನಿರ್ವಹಣೆ ಸೇರಿದಂತೆ ವಿವಿಧ ಕೆಲಸಗಳನ್ನು ನಿರ್ವಹಿಸುತ್ತಿದ್ದರೂ, ಕಳೆದ 10 ತಿಂಗಳಿನಿಂದ ವೇತನವಿಲ್ಲದೆ ಜೀವನ ನಡೆಸುವುದು ದುಸ್ತರವಾಗಿದೆ. ಟೆಂಡ‌ರ್ ಪ್ರಕ್ರಿಯೆ ಪೂರ್ಣಗೊಳಿಸದಿರುವುದರಿಂದ ವೇತನ ಪಾವತಿಯಲ್ಲಿ ವಿಳಂಬವಾಗಿದ್ದು, ಕಾರ್ಮಿಕರು ಮತ್ತು ಅವರ ಕುಟುಂಬಗಳು ಸಂಕಷ್ಟ ಎದುರಿಸುವಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು. ಸಮಯಕ್ಕೆ ಸರಿಯಾಗಿ ಟೆಂಡರ್ ಮಾಡದೆ ಇರುವುದರಿಂದ ಕಾರ್ಮಿಕರಿಗೆ 10 ತಿಂಗಳ ಬಾಕಿ ವೇತನ ಉಳಿದಿದೆ.

ಕಾರ್ಮಿಕರು ನಿರ್ವಹಿಸಿದ ಕೆಲಸಕ್ಕೆ ಪ್ರತಿಯಾಗಿ ದೊರೆಯಬೇಕಾದ ವೇತನವನ್ನು ಅನಿರ್ದಿಷ್ಟವಾಗಿ ತಡೆಹಿಡಿಯುವುದು ಸರಿಯಲ್ಲ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಕಾರ್ಮಿಕರ 10 ತಿಂಗಳ ಬಾಕಿ ವೇತನವನ್ನು ತಕ್ಷಣ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಧರಣಿಯ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರ ವಿದ್ಯಾಸಾಗರ್ ಹಾಗೂ ಸೆಕ್ಷನ್ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಚರ್ಚಿಸಿ, ತಕ್ಷಣ ಟೆಂಡ‌ರ್ ಪ್ರಕ್ರಿಯೆ ಕೈಗೊಂಡು ಆದಷ್ಟು ಬೇಗ ಕಾರ್ಮಿಕರಿಗೆ ವೇತನ ಪಾವತಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಾರ್ಮಿಕರ ಬಾಕಿ ವೇತನ ಪಾವತಿಯಾಗುವವರೆಗೆ ಸಂಬಂಧಪಟ್ಟ ಅಧಿಕಾರಿಗಳು ವಿಳಂಬ ಮಾಡದೆ, ನೀಡಿರುವ ಭರವಸೆಯನ್ನು ಕಾರ್ಯರೂಪಕ್ಕೆ ತರಬೇಕು ಎಂದು ಕಾರ್ಮಿಕರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬೆಳೆ ನಷ್ಟ ಪರಿಹಾರ, ನರೇಗಾದಡಿ 200 ದಿನ ಕೆಲಸಕ್ಕೆ ಆಗ್ರಹಿಸಿ ರೈತರು, ಕೃಷಿ ಕೂಲಿಕಾರರ ಪ್ರತಿಭಟನೆ

ಈ ಸಂದರ್ಭದಲ್ಲಿ ಕಾರ್ಮಿಕರಾದ ಜಲೀಲ್‌ ಪಾಷಾ, ಗೋಪಾಲರಾವ್‌, ರಂಗಪ್ಪ ನಾಯಕ, ಶಿವಣ್ಣ, ಇಮ್ರಾನ್, ಗೌಸ್ ಸೇರಿದಂತೆ ಎಲ್ಲಾ ಕಾರ್ಮಿಕರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ

ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವುದು ಹಾಗೂ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ...

ಕಲಬುರಗಿ | ಸನ್ನತ್ತಿ ಬ್ಯಾರೇಜ್ ಸಂತ್ರಸ್ತ ರೈತರಿಗೆ 13 ವರ್ಷವಾದರೂ ಪರಿಹಾರವಿಲ್ಲ!

ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ಹಿನ್ನೀರಿನಿಂದ ಭೂಮಿ ಕಳೆದುಕೊಂಡ ಚಿತ್ತಾಪುರ ಹಾಗೂ...

SIR ಉಡುಪಿ ಜಿಲ್ಲೆಯಲ್ಲಿ 47 ಮಂದಿ ವಿದೇಶಿ ಪೌರತ್ವ ಹೊಂದಿರುವವರು ಪತ್ತೆ

ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026...

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...