ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ ಅನಧಿಕೃತ ವಿದ್ಯುತ್ ಬಳಕೆ ಮಾಡುತ್ತಿದಂತಹ 195 ಪ್ರಕರಣಗಳು ಪತ್ತೆ ಹಚ್ಚಿ ಸುಮಾರು ₹18.95 ಲಕ್ಷ ದಂಡವನ್ನು ವಿಧಿಸಲಾಗಿದೆ.
‘ಅನಧಿಕೃತವಾಗಿ ವಿದ್ಯುತ್ ಬಳಕೆ ಮಾಡುತ್ತಿರುವ ಗ್ರಾಹಕರು ತಮ್ಮ ಸ್ಥಾವರಗಳನ್ನು ಮೀಟರ್ ಅಳವಡಿಸಿಕೊಂಡು ಸಕ್ರಮಗೊಳಿಸಬೇಕು. ಬಾಕಿ ಇರುವ ಸ್ಥಾವರದ ಗ್ರಾಹಕರಗಳು ಬಾಕಿಯನ್ನು ಪಾವತಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ನಿಮ್ಮ ಅನಧಿಕೃತ ಸ್ಥಾವರಕ್ಕೆ ಹೆಚ್ಚಿನ ದಂಡವನ್ನು ವಿಧಿಸಲಾಗುವುದು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ
ಕಾನೂನಿನ ಪ್ರಕಾರ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗದ ಅಧೀಕ್ಷಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




