ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಯುಪಿಎಸ್ಸಿ (ನಾಗರಿಕ ಸೇವಾ) ಪರೀಕ್ಷೆಯ ಪೂರ್ವ ತರಬೇತಿಗಾಗಿ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ಅಭ್ಯರ್ಥಿಗಳು ಆಗಸ್ಟ್ 3ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಸೋನಮ್ ವಾಂಗ್ಚುಕ್ ಹೋರಾಟ ಬೆಂಬಲಿಸಿ ನಾಳೆ ಸಿಂಧನೂರಿನಲ್ಲಿ ಪ್ರತಿಭಟನೆ
ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೆಬ್ಸೈಟ್ https://bcwd.karnataka.gov.in ಹಾಗೂ https://sevasindhuservices.karnataka.gov.in ಮೂಲಕ ಮಾಹಿತಿ ಪಡೆಯಬಹುದು. ಅಲ್ಲದೆ 8050770004 ಸಹಾಯವಾಣಿ ಸಂಖ್ಯೆಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





