ರಾಯಚೂರು | ಅಕ್ಟೋಬರ್‌ 4ರಂದು ವಿಧಾನಸೌಧಕ್ಕೆ ಮುತ್ತಿಗೆ: ರಾಜ್ಯ ರೈತ ಸಂಘ

Date:

Advertisements

ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ರಾಯಚೂರು ಜಿಲ್ಲೆಯ ಕೆಲ ತಾಲೂಕುಗಳನ್ನು ಮಾತ್ರ ಬರಗಾಲ ಪ್ರದೇಶಗಳೆಂದು ಘೋಷಣೆ ಮಾಡಿದೆ. ಜಿಲ್ಲೆಯನ್ನು ಸಂಪೂರ್ಣವಾಗಿ ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡುವುದು, ಎಲ್ಲಾ ಬೆಳೆಗಳ ಸರ್ವೆ ಮಾಡುವುದು, ರೈತರ ಸಾಲಮನ್ನಾ ಸೇರಿದಂತೆ ರೈತರ ಇತರೆ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಅಕ್ಟೋಬರ್‌ 4ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಬಸವರಾಜ ನಾಯಕ ತಿಳಿಸಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯದಲ್ಲಿ ಮುಂಗಾರು ಮಳೆ ಸಮರ್ಪಕವಾಗಿ ಆಗದೇ ಇರುವ ಪರಿಣಾಮ, ರೈತರು ಬೆಳೆದ ಬೆಳೆಗಳು ನಾಶವಾಗಿದ್ದು, ನಷ್ಟ ಅನುಭವಿಸಿದ್ದಾರೆ. ಸರ್ಕಾರ ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಿದೆ. ಕೆಲ ತಾಲೂಕುಗಳನ್ನು ಪರಿಗಣಿಸಿದ್ದಾರೆ. ಇನ್ನೂ ಕೆಲ ತಾಲೂಕುಗಳನ್ನು ಬರ ಪ್ರದೇಶಗಳೆಂದು ಪರಿಗಣಿಸಬೇಕಾಗಿದೆ. ಬರಗಾಲಕ್ಕೆ ಕೇವಲ ಹತ್ತಿ ಮತ್ತು ತೊಗರಿ ಬೆಳೆ ಪರಿಗಣಿಸುತ್ತಿದ್ದು, ಭತ್ತ ಬೆಳೆಯು ನಾಶವಾಗಿದ್ದರಿಂದ ಭತ್ತವನ್ನೂ ಪರಿಗಣನೆಗೆ ತೆಗೆದುಕೊಳ್ಳಬೇಕು” ಎಂದು ಮನವಿ ಮಾಡಿದರು.

“ರೈತರು ಸಾಲ ಮಾಡಿ ಬೆಳೆ ಬೆಳೆದಿದ್ದು, ಸಾಲ ಮರು ಪಾವತಿ ಮಾಡಲು ಕಷ್ಟರವಾಗಿದೆ. ಹಾಗಾಗಿ ರೈತರು ಬ್ಯಾಂಕ್‌ನಲ್ಲಿ ಪಡೆದ ಸಾಲ ಮರುಪಾವತಿಯನ್ನು ಸರ್ಕಾರ ಮುಂದೂಡಬೇಕಾಗಿದೆ. ಟ್ರಾಕ್ಟರ್ ಸಾಲ ಕಂತು ಬಾಕಿ ಇದ್ದು, ಇದನ್ನೂ ಕೂಡ ಮುಂದೂಡಬೇಕು. ಬರಗಾಲ ಘೋಷಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ತಂಡದಿಂದ ಶೀಘ್ರವೇ ಪರಿಶೀಲನೆ ಮಾಡಿ ರೈತರಿಗೆ ನೆರವಾಗಬೇಕು” ಎಂದು ಆಗ್ರಹಿಸಿದರು.

Advertisements

“ಜಿಲ್ಲೆಯ ಎನ್‌ಆರ್‌ಬಿಸಿ ಬಲದಂಡೆ ಟಿಎಲ್‌ಬಿಸಿ ಎಡದಂಡೆ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಬೇಕು. ಶಾಶ್ವತವಾಗಿ ಪರಿಹಾರ ಕಂಡು ಕೊಳ್ಳಬೇಕು. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಂಧನೂರು ತಾಲೂಕನ್ನು ಬರಗಾಲವೆಂದು ಘೋಷಿಸುವಂತೆ ರೈತರ ಆಗ್ರಹ

ಹಾಸನ ಜಿಲ್ಲೆಯ ಅರಸಿಕೆರೆಯಿಂದ ನಾಳೆ ಬೆಂಗಳೂರುವರೆಗೆ ಪಾದಯಾತ್ರೆ ನಡೆಯಲಿದೆ. ಜಿಲ್ಲೆಯಿಂದ ಸುಮಾರು 1,000 ಅಧಿಕ ಮಂದಿ ರೈತರು ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ರಾಜಾಸಾಬ್, ಹುಲಿಗೆಯ್ಯ, ವೀರೇಶ ನಾಯಕ ಸೇರಿದಂತೆ ಇತರರು ಇದ್ದರು.

ಸಿಟಿಜನ್ ಜರ್ನಲಿಸ್ಟ್ : ಹಫೀಜುಲ್ಲ ರಾಯಚೂರು
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X