ಹಟ್ಟಿ ಚಿನ್ನದ ಗಣಿ ಸಮೀಪದ ರೋಡಲಬಂಡ (ತವಗ) ಗ್ರಾಮ ಪಂಚಾಯತ್ ಕಚೇರಿಯಲ್ಲಿ ಸಿಬ್ಬಂದಿ ಹಾಗೂ ಪಿಡಿಒ ಸಮಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲವೆಂದು ಆರೋಪಿಸಿ ಗ್ರಾಮಸ್ಥರು ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಂಬಂಧಿತ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದರು.
ಗ್ರಾಮ ಪಂಚಾಯತ್ ಕಚೇರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂಎನ್‌ಆರ್‌ಇಜಿಎಸ್) ಅಡಿಯಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು, ಜನನ–ಮರಣ ಪ್ರಮಾಣಪತ್ರ ಸೇರಿದಂತೆ ವಿವಿಧ ಸೇವೆಗಳಿಗಾಗಿ ಬರುವ ಸಾರ್ವಜನಿಕರು ಅಧಿಕಾರಿಗಳು ಮತ್ತು ಸಿಬ್ಬಂದಿ ಲಭ್ಯವಿಲ್ಲದ ಕಾರಣ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ರೋಡಲಬಂಡ(ತವಗ) ಗ್ರಾ.ಪಂ. ಕಚೇರಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಉದ್ಯೋಗ, ಜನನ ಮರಣ ಪ್ರಮಾಣ ಪತ್ರ ಒದಗಿಸಬೇಕು ಎಂದು ಅರ್ಜಿ ಸಲ್ಲಿಸಲು ಬರುವ ಜನರು ಸ್ಥಳೀಯವಾಗಿ ಅಧಿಕಾರಿಗಳು ಇಲ್ಲದಿರುವುದರಿಂದ ಪರಡಾಡುತ್ತಿದ್ದಾರೆ. ಜನರ ಸಮಸ್ಯೆ ಆಲಿಸಬೇಕಾದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಬಾರದೆ ಇರುವುದು, ಕೆಳುವವರು ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಪೊರಕೆ ತಾಕಿದಕ್ಕೆ ವಾಗ್ವಾದ: ಗ್ರಾಹಕನ ಮೇಲೆ ಖಾರದ ಪುಡಿ ಎರಚಿ ಹಲ್ಲೆ
ಅರ್ಜಿ ಸಲ್ಲಿಸಲು ಗ್ರಾ.ಪಂ ಕಚೇರಿಗೆ ಬಂದರೆ ಯಾರೂ ಇರುವುದಿಲ್ಲ. ಅವರಿಗಾಗಿ ನಿತ್ಯ ಕಾಯುವುದೇ ಆಗಿದೆ ಇಂತಹ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಗ್ರಾಮಸ್ಥರು, ಸಂಘಟನೆಯ ಮುಖಂಡರು ಒತ್ತಾಯಿಸಿದರು.





