ರಾಯಚೂರು | ಹೋರಾಟದ ಫಲ; ನಾಲೆಯ ಕೊನೆ ಭಾಗಕ್ಕೆ ಹರಿದ ನೀರು

Date:

ತುಂಗಭದ್ರ ಎಡದಂಡೆ ಕಾಲುವೆ 104 ಮೈಲ್‌ನ ಕೆಳಭಾಗಕ್ಕೆ ನೀರು ಸಿಗದೆ ಅಲ್ಲಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ರೈತರ ನಿರಂತರ ಹೋರಾಟದ ಫಲವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಸಚಿವ ಎನ್.ಎಸ್ ಬೋಸರಾಜ ಹಾಗೂ ಪ್ರಾದೇಶಿಕ ಆಯುಕ್ತರು, ನಿರಾವರಿ ನಿಗಮದ ಅಧಿಕಾರಿಗಳು ಮುಂದಾಗಿದ್ದು, ಗೇಜ್ ನಿರ್ವಹಣೆಯಾಗುತ್ತಿದೆ ಎಂದು ಹೋರಾಟ ಸಮಿತಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಅತ್ತನೂರು ಹೇಳಿದ್ದಾರೆ.

- Advertisement -

ರಾಯಚೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ನಾಲೆಯ ಕೊನೆ ಭಾಗಕ್ಕೆ ನೀರು ಒದಗಿಸುವಂತೆ ಅಕ್ಟೋಬರ್ 16ರಿಂದ ನಿರಂತರ ಹೋರಾಟ ನಡೆಸಿದ್ದೇವೆ. ಹೋರಾಟದ ಫಲವಾಗಿ ಗೇಜ್ ನಿರ್ವಹಣೆಯಾಗುತ್ತಿದೆ. ಗಣೇಕಲ್ ಜಲಾಶಯವೂ ಭರ್ತಿಯಾಗುತ್ತಿದೆ. ಹೋರಾಟಕ್ಕೆ ಅಧಿಕಾರಿಗಳು ಸ್ಪಂದಿಸಿದ್ದಾರೆ. ಎಲ್ಲರ ಸಹಕಾರದಿಂದ ನೀರು ಹರಿದು ಬರುತ್ತಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕಾಲುವೆ ನೀರು ಹರಿಸಿದಾಗಿನಿಂದ ಕೊನೆಭಾಗಕ್ಕೆ ನೀರು ಬಾರದೇ ಹೋಗಿರುವದರಿಂದ ಹೋರಾಟ ನಡೆಸಬೇಕಾಯಿತು. ನೀರಾವರಿ ಸಲಹಾ ಸಮಿತಿ ಸಭೆ ನಿರ್ಣಯದಂತೆ ನ.31ರವರೆಗೆ ಗೇಜ್ ನಿರ್ವಹಣೆ ಮಾಡಬೇಕು ಕಾಲುವೆ ವ್ಯಾಪ್ತಿಯಲ್ಲಿ ನೀರು ಇಳಿಕೆಯಾದಲ್ಲಿ ಮತ್ತೊಮ್ಮೆ ಹೋರಾಟ ನಡೆಸಬೇಕಾಗುತ್ತದೆ” ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕೆ.ಶರಣಪ್ಪ , ನಾಗನಗೌಡ ಹರವಿ, ಸಿದ್ದನಗೌಡ ನೆಲಹಾಳ, ಬಸವರಾಜ ಕಲ್ಲೂರು, ವೀಶ್ವೇಶ್ವರ, ವೆಂಕಟರೆಡ್ಡಿ ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...