ರಾಯಚೂರು| ವಿವಾಹೇತರ ಸಂಬಂಧ; ವ್ಯಕ್ತಿ ಸಾವಿಗೆ ಕಾರಣವೆಂದು ಮರಕ್ಕೆ ಕಟ್ಟಿ ಮಹಿಳೆಗೆ ಹಲ್ಲೆ

Date:

ವಿವಾಹೇತರ ಸಂಬಂಧದ ಕಾರಣಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ಹಲ್ಲೆಗೊಳಗಾದ ಮಹಿಳೆಯ ಜೊತೆ ಸಂಬಂಧ ಹೊಂದಿದ್ದ ವ್ಯಕ್ತಿಯು ಆರೋಗ್ಯ ಸಂಬಂಧಿತ ಸಮಸ್ಯೆಯಿಂದ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಮೃತ ವ್ಯಕ್ತಿಯ ಕುಟುಂಬಸ್ಥರು, “ಈ ಸಾವಿಗೆ ಕಾರಣ, ಈಕೆಯೇ ಮಹಿಳೆ” ಎಂದು ಅನುಮಾನ ಪಟ್ಟು ಈ ರೀತಿ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಮರಕ್ಕೆ ಕಟ್ಟಿ ಹಲ್ಲೆ ಮಾಡುತ್ತಿರುವ ದೃಶ್ಯ ಸಾಮಾಜಿಕ ಮಾಧ್ಯಮಗಳ ಮೂಲಕ ತಡವಾಗಿ ಬೆಳಕಿಗೆ ಬಂದಿದೆ. ಆ ದೃಶ್ಯದಲ್ಲಿ ನೂರಾರು ಸಂಖ್ಯೆಯಲ್ಲಿ ಯುವಕರು, ಮಹಿಳೆಯರು ಇದ್ದರೂ ಯಾರು ಕೂಡ ಕಾಪಾಡುವುದಕ್ಕೆ ಮುಂದಾಗಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ. ಈ ಕುರಿತು ಆಕ್ರೋಶವೂ ವ್ಯಕ್ತವಾಗುತ್ತಿದೆ.

ಈ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ಗೊತ್ತಿದ್ದರೂ ತಮಗೆ ಸಂಬಂಧವಿಲ್ಲದಂತೆ ವರ್ತಿಸಿದರು ಎಂದು ಸ್ಥಳೀಯರೊಬ್ಬರು ‘ಈದಿನ.ಕಾಂ’ಗೆ ಮಾಹಿತಿ ನೀಡಿದ್ದಾರೆ. ಜಾಲಹಳ್ಳಿ ಗ್ರಾಮದಲ್ಲಿ ಸಣ್ಣ ಗಲಾಟೆಯಾದರೂ ಪೊಲೀಸರಿಗೆ ಮಾಹಿತಿ ಇರುತ್ತದೆ. ಆದರೆ ಇಂತಹ ಕೃತ್ಯ ಘಟಿಸಿದರೂ ಯಾಕೆ ಅವರು ಆಗಮಿಸಿಲ್ಲ ಎಂದು ಪ್ರಶ್ನಿಸಿದರು.

“ವಿಡಿಯೋ ಮಾಡುವುದಕ್ಕೆ ಯಾರಾದರೂ ಮುಂದಾದರೆ ಅವರ ಮೇಲೆಯೂ ಹಲ್ಲೆ ಮಾಡುವ ಸಾಧ್ಯತೆ ಇತ್ತು” ಎಂದು ಅವರು ಅಂದಿನ ಘಟನೆಯನ್ನು ವಿವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬರಗಾಲ ಪರಿಹಾರಕ್ಕೆ ಆಗ್ರಹ: ಸೆ.28ರಂದು ಡಿಸಿ ಕಚೇರಿ ಮುಂದೆ ರೈತರ ಪ್ರತಿಭಟನೆ

ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲವನ್ನು ಎದುರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯ

ಹಟ್ಟಿ ಚಿನ್ನದ ಗಣಿ ಕಾರ್ಮಿಕರ ದೀರ್ಘಾವಧಿಯ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಒತ್ತಾಯಿಸಿ...

ರಾಯಚೂರು | ರಾಜ್ಯ ಸರ್ಕಾರದ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ: ಸರ್ಕಾರದ ಶವಯಾತ್ರೆ, ಪ್ರತಿಕೃತಿ ದಹನ

ಆರ್ಥಿಕ ದಿವಾಳಿತನದತ್ತ ಸಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸಿ...