ಲಿಂಗಸೂಗೂರು ತಾಲ್ಲೂಕಿನ ಐದನಾಳ ಗ್ರಾಮದ ಎಸ್‌ಸಿ ವಾರ್ಡ್‌ನಲ್ಲಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಮಹಿಳೆಯರು ಗ್ರಾಮ ಪಂಚಾಯತ್‌ಗೆ ತೆರಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಾರ್ಡ್‌ನ ರಸ್ತೆಗಳು ಹಾಳಾಗಿದ್ದು, ಚರಂಡಿ ಸಮರ್ಪಕವಾಗಿಲ್ಲದ ಕಾರಣ ಮನೆಗಳ ಮುಂಭಾಗ ಮಳೆ ನೀರು ನಿಂತುಕೊಳ್ಳುತ್ತಿದೆ. ಇದರಿಂದ ಸಾರ್ವಜನಿಕರು, ವಿಶೇಷವಾಗಿ ವಯೋವೃದ್ಧರು ಓಡಾಡಲು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕಾಲು ಜಾರಿ ಬೀಳುವ ಘಟನೆಗಳೂ ಸಂಭವಿಸುತ್ತಿವೆ ಎಂದು ಮಹಿಳೆಯರು ದೂರಿದರು.
ನಿಂತ ನೀರಿನಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಮಕ್ಕಳು ಸೇರಿದಂತೆ ಸ್ಥಳೀಯರಲ್ಲಿ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಸಮಸ್ಯೆಯನ್ನು ಕೂಡಲೇ ಪರಿಹರಿಸಿ ರಸ್ತೆ ಹಾಗೂ ಚರಂಡಿಯನ್ನು ದುರಸ್ತಿಗೊಳಿಸುವಂತೆ ಮಹಿಳೆಯರು ಪಂಚಾಯತ್ ಅಧಿಕಾರಿಗಳನ್ನು ಆಗ್ರಹಿಸಿದರು. ಅಗತ್ಯ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಮೂಲಸೌಕರ್ಯ ಕಲ್ಪಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬೀದಿ ನಾಯಿ ದಾಳಿ: ನಾಲ್ಕು ವರ್ಷದ ಬಾಲಕನ ತಲೆಗೆ ಗಂಭೀರ ಗಾಯ
ಈ ವೇಳೆ ರಾಧಾ ಐದನಾಳ, ಗ್ರಾಮಸ್ಥರು ಇನ್ನಿತರರು ಇದ್ದರು.





