ನರೇಗಾ ಕಾಮಗಾರಿ ವೇಳೆ ತೀವ್ರ ಬಿಸಿಲಿನ ಪರಿಣಾಮ ಕಾರ್ಮಿಕನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ದುರ್ಘಟನೆ ರಾಯಚೂರು ತಾಲ್ಲೂಕಿನ ಯಾಪಲದಿನ್ನಿ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ.
ಹುಸೇನಪ್ಪ ಕಾರ್ಮಿಕ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಯಾಪಲದಿನ್ನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಳ್ಳಕುಂಟಾ ಕೆರೆ ಅಭಿವೃದ್ಧಿ ಕಾಮಗಾರಿ ಕಳೆದ ನಾಲ್ಕು ದಿನಗಳಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ನಡೆಯುತ್ತಿತ್ತು ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬಿರುಬಿಸಿಲು: ಕಚೇರಿ ಕೆಲಸಗಳ ಸಮಯ ಪರಿಷ್ಕರಣೆ ಉಪಯೋಗವಾಗುತ್ತಿದೆಯೇ?
ಕೆಲಸದ ವೇಳೆ ತೀವ್ರ ಬಿಸಿಲಿನಿಂದ ಹುಸೇನಪ್ಪ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.





