ರಾಯಚೂರು | ಬ್ರಿಟಿಷರ ಶೋಷಣೆ ವಿರುದ್ಧ ಹೋರಾಡಿದ ಬಿರ್ಸಾ ಮುಂಡಾ ಅವರ ಆದರ್ಶಗಳನ್ನು ಯುವ ಜನರು ಮೈಗೂಡಿಸಿಕೊಳ್ಳಬೇಕು: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ

Date:

ಬ್ರಿಟಿಷರ ವಸಾಹತುಶಾಹಿ ಆಡಳಿತ ಮತ್ತು ಬುಡಕಟ್ಟು ಸಮುದಾಯದ ಮೇಲಿನ ಶೋಷಣೆಯ ವಿರುದ್ಧ ಜನರನ್ನು ಸಂಘಟಿಸಿ ಹೋರಾಟ ನಡೆಸಿದ ಭಗವಾನ್ ಬಿರ್ಸಾ ಮುಂಡಾ ಅವರು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಅಂತಹ ಮಹಾನ್ ವ್ಯಕ್ತಿಯ ಆದರ್ಶಗಳನ್ನು ಯುವ ಜನರು ಮೈಗೂಡಿಸಿಕೊಳ್ಳಬೇಕೆಂದು ಎಂದು ರಾಯಚೂರು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ ಹೇಳಿದರು.

- Advertisement -

ಅವರು ರವಿವಾರ ನಗರದ ಆಶಾಪುರ ರಸ್ತೆಯ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ರಾಯಚೂರು ವತಿಯಿಂದ ಆಯೋಜಿಸಿದ್ದ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ 151ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಬಿರ್ಸಾ ಮುಂಡಾ ಅವರು ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಬ್ರಿಟಿಷರ ದಬ್ಬಾಳಿಕೆ, ಶೋಷಣೆ ಹಾಗೂ ಬುಡಕಟ್ಟು ಜನರ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಧ್ವನಿ ಎತ್ತಿದ್ದರು. 1890ರ ದಶಕದಲ್ಲಿ ತಮ್ಮ 25ನೇ ವಯಸ್ಸಿನಲ್ಲಿಯೇ ಬ್ರಿಟಿಷರ ವಿರುದ್ಧ ಹೋರಾಟಕ್ಕಾಗಿ ಜನರನ್ನು ಸಂಘಟಿಸಿ ಜನರಲ್ಲಿ ಸ್ವಾಭಿಮಾನ ಮತ್ತು ಹೋರಾಟದ ಮನೋಭಾವ ಬೆಳೆಸಿದ್ದರು. ಅವರ ತ್ಯಾಗ, ಹೋರಾಟ ಹಾಗೂ ಸಮಾಜದ ಮೇಲಿನ ಕಾಳಜಿ ನಮಗೆಲ್ಲರಿಗೂ ಪ್ರೇರಣೆಯಾಗಿದೆ ಎಂದರು.

2021 ರಿಂದ ಸರ್ಕಾರ ಬಿರ್ಸಾ ಮುಂಡಾ ಜಯಂತಿಯನ್ನು ಆಚರಿಸುತ್ತಿದೆ. ಬುಡಕಟ್ಟು ಸಮುದಾಯದವರು ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಂಡು ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ತಿಳಿಸಿದರು.
ಸಮಾಜದ ಮುಖಂಡ ರಘುವೀರ ನಾಯಕ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬುಡಕಟ್ಟು ಸಮುದಾಯದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿವೆ. ವಿದ್ಯಾರ್ಥಿಗಳು ಈ ಸೌಲಭ್ಯ ಸದುಪಯೋಗಪಡಿಸಿಕೊಂಡು ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಬೇಕು. ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ಗೌರವ ಮತ್ತು ಕೀರ್ತಿ ತರಬೇಕು ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಕ್ಕಳಿಗೆ ಓದು–ಬರಹ ಬರುವುದಿಲ್ಲ ಎನ್ನುವ ಮೊದಲು ಶಿಕ್ಷಕರ ಕೊರತೆ ನೀಗಿಸಿ; ಹಫೀಜುಲ್ಲಾ

ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರುಕ್ಮಿಣಿಬಾಯಿ, ಏಕಲವ್ಯ ಮಾದರಿ ವಸತಿ ಶಾಲೆ ಕೊತ್ತದೊಡ್ಡಿಯ ಪ್ರಾಂಶುಪಾಲ ಸುರೇಶ್ ವರ್ಮಾ, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಕಲ್ಮಲಾದ ಪ್ರಾಂಶುಪಾಲ ಕೊಟ್ರೇಶ್, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಗಾಣಧಾಳದ ಮಹಮ್ಮದ್ ಮೂಜಿಬ್, ವಾಲ್ಮೀಕಿ ಸಮಾಜದ ಮುಖಂಡ ರಾಮು ನಾಯಕ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕ ಶರಣಪ್ಪ ಹಾಗೂ ವಾರ್ಡನ್ ಬಸವರಾಜ ಸೇರಿದಂತೆ ಇತರೆ ಹಲವಾರು ಜನರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಮತದಾರರ ಹಕ್ಕು ಕಸಿಯುವ ಷಡ್ಯಂತ್ರ: ಗ್ಯಾನೇಶ್ ಕುಮಾರ್ ವಜಾಕ್ಕೆ ಕಲ್ಮೇಶ್ ಪಟೇಲ್ ಆಗ್ರಹ

"ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ನೀಡಿರುವ ಮತದಾನದ ಹಕ್ಕನ್ನು ವೋಟ್ ಚೋರಿ ಮೂಲಕ...

ಚಿಕ್ಕಮಗಳೂರು | ಆಕಸ್ಮಿಕ ಅಗ್ನಿ ಅವಘಡ: ಉತ್ಪನ್ನಗಳು ಭಸ್ಮ 

ಕಡೂರು ತಾಲೂಕಿನ ಬೀರೂರು ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಮಂಜುನಾಥ ಕಾಯರ್...

ಉಡುಪಿ | ಕುಂದಾಪುರ ಕೋಡಿ ಹಿನ್ನೀರು ಪ್ರದೇಶದಲ್ಲಿ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಕಾಂಡ್ಲಾ ವನ ವೀಕ್ಷಣೆ

ಕುಂದಾಪುರ ನಗರದ ಕೋಡಿ-ಕುಂದಾಪುರ ಸೇತುವೆ ಬಳಿಯ ಕೋಡಿ ಹಿನ್ನೀರು ಪ್ರದೇಶಕ್ಕೆ ರವಿವಾರ...

ಉಡುಪಿ | ಬೆಂಗಳೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬೈಂದೂರಿನ ಯುವ ಇಂಜಿನಿಯರ್ ಅಪಘಾತದಲ್ಲಿ ಸಾವು

ಉದ್ಯೋಗದ ನಿಮಿತ್ತ ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಬೈಂದೂರು ತಾಲೂಕಿನ ನಾಡ-ಪಡುಕೋಣೆ ಸಮೀಪದ...